ಅಥವಾ
(1) (0) (0) (0) (0) (0) (0) (0) (1) (0) (0) (0) (0) (0) ಅಂ (0) ಅಃ (0) (2) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (2) (0) (0) (0) (1) (0) (0) (0) (0) (0) (0) (1) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕಾಯದ ಕಣ್ದೆರೆಯಿಂದುದಯವಾದ ಧಾವತಿ ಎರಡು ನೋಡಯ್ಯಾ : ಅಯ್ಯಾ ಭ್ರಾಂತಿಯತ್ತಲೊಂದೆಳವುತ್ತಲದೆ ದೇವಾ ನಿಮ್ಮತ್ತಲೊಂದೆಳವುತ್ತಲದೆ. ಒಂದರ ಸಹಜವನೊಂದು ಗೆಲಲರಿಯದು. ಮುಂದೆ ಸತ್ಪಥಕ್ಕೆಂತಡಿಯಿಡುವೆನಯ್ಯಾ ನಾನು ? ಕಾಲಚಕ್ರದಲ್ಲಿ ಹುಟ್ಟಿ, ಕರ್ಮಚಕ್ರದಲ್ಲಿ ಬೆಳೆದು ಕಲ್ಪಿತದಿಂದವೆ ದಿನಂಗಳು ಸವೆವುತ್ತವೆಯಯ್ಯಾ. ತಲೆಯೆರಡರ ಪಕ್ಷಿ ವಿಷ ನಿರ್ವಿಷವ ಮೆಲಿದಂತಾಯಿತ್ತೆನಗಯ್ಯಾ. ಅಂದಂದಿನರಿವು ಅಂದಂದಿನ ಮರವೆಗೆ ಸರಿಯಯ್ಯಾ. ತಂದೆ ಈ ದಂದುಗವ ಮಾಣಿಸಿ ನಿಮ್ಮ ನಿಜಾನಂದಭಕ್ತಿಯೆನಗೆ ಕರುಣಿಸಯ್ಯಾ ಅಮರಗುಂಡದ ಮಲ್ಲಿಕಾರ್ಜುನಾ.
--------------
ಪುರದ ನಾಗಣ್ಣ
ಕಾಯವೆಂಬ ಪಟ್ಟಣಕ್ಕೆ ಸತ್ಯವೆಂಬ ಕೋಟೆಯನಿಕ್ಕಿ ಧರ್ಮಾಥಿರ್Àಕಾಮಮೋಕ್ಷಂಗಳೆಂಬುಕ್ಕಡದವರೆಚ್ಚತ್ತಿರಿ ಭಯ ಘನ ಭಯ ಘನ. ಅಜ್ಞಾನವೆಂಬ ತೀವ್ರ ಕತ್ತಲೆ ಕರ ಘನಕರ ಘನ. ಒಂಬತ್ತು ಬಾಗಿಲ ಜತನವ ಮಾಡಿ ಜ್ಞಾನಜ್ಯೋತಿಯ ಪ್ರಬಲವ ಮಾಡಿ ಪ್ರಬಲವ ಮಾಡಿ ಐವರು ಕಳ್ಳರು ಕನ್ನವ ಕೊರೆವುತ್ತೈದಾರೆ. ಸುಯಿಧಾನವಾಗಿರಿ ಜೀವಧನವ ಜತನವ ಮಾಡಿ ಜತನವ ಮಾಡಿ ಬಳಿಕಿಲ್ಲ ಬಳಿಕಿಲ್ಲ. ಆ ಪಟ್ಟಣದ ಮೂಲಸ್ಥಾನದ ಶಿಖರದ ಮೇಲಣ ಬಾಗಿಲ ತೆರದು ನಡೆವುದೆ ಸುಪಥ, ಸ್ವಯಂಭುನಾಥನಲ್ಲಿರೆ. ಇದನರಿತು ಮಹಾಮಹಿಮ ಅಮರಗುಂಡದ ಮಲ್ಲಿಕಾರ್ಜುನದೇವರಲ್ಲಿ ಎಚ್ಚರಿಕೆಗುಂದದಿರಿ, ಎಚ್ಚರಿಕೆಗುಂದನಿರಿ.
--------------
ಪುರದ ನಾಗಣ್ಣ