ಅಥವಾ
(15) (6) (1) (0) (3) (0) (0) (0) (5) (0) (0) (3) (0) (0) ಅಂ (4) ಅಃ (4) (11) (0) (4) (1) (0) (0) (0) (3) (0) (0) (0) (0) (0) (0) (0) (3) (0) (3) (0) (3) (4) (0) (6) (3) (5) (0) (1) (0) (5) (2) (7) (0) (0) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಉಪನಿಷದ್ವಾಕ್ಯವೆನಬಹುದಲ್ಲದೆ, ಆ ಪರಬ್ರಹ್ಮವೆನಬಾರದು ಸಮತೆ ಸಮಾಧಾನವೆಂಬುದು ಯೋಗದಾಗು ನೋಡಾ. ಸಮತೆ ಸಮಾಧಾನ ನೆಲೆಗೊಳ್ಳದಿರ್ದಡೆ, ಆ ಯೋಗ ಅಜ್ಞಾನದಾಗು. ಅಷ್ಟಶಿಲೆ ಸಹಸ್ರ ಋಷಿಯರು ಸಮತೆ ಸಮಾಧಾನ ನೆಲೆಗೊಳ್ಳದೆ, ನಾನಾ ಯೋÀನಿಯಲ್ಲಿ ಬಂದರು. ಮಹಾಲಿಂಗ ಕಲ್ಲೇಶ್ವರದೇವಾ, ಸಮತೆ ನೆಲೆಗೊಂಡು, ಸಮಾಧಾನ ಸಹಜವಾದುದೆ ಮುಕ್ತಿ ಕ್ಷೇತ್ರ.
--------------
ಹಾವಿನಹಾಳ ಕಲ್ಲಯ್ಯ
ಉರವೆ ಕುರುಕ್ಷೇತ್ರ, ಶಿರವೆ ಶ್ರೀಪರ್ವತ, ಲಲಾಟವೆ ಕೇದಾರ, ಭ್ರೂನಾಸಿಕದ ಮದ್ಯವೆ ವಾರಣಾಸಿ ನೋಡಾ. ಹೃದಯವೇ ಪ್ರಯಾಗ, ಸರ್ವಾಂಗವೆ ಸಕಲತೀರ್ಥಳಾಗಿ, ಮಹಾಲಿಂಗ ಕಲ್ಲೇಶ್ವರನ ಶೃಣರ ಸುಳುಹು ಜಗವತ್ಪಾವನ.
--------------
ಹಾವಿನಹಾಳ ಕಲ್ಲಯ್ಯ
ಉದಕದ ತಂಪವ ತಾವರೆಯಲ್ಲದೆ ಹೊರಗಣ ಕೊರಡೆತ್ತಬಲ್ಲುದೊ ? ಹೂವಿನ ಪರಿಮಳವ ತುಂಬಿಯಲ್ಲದೆ ಹೊರಗಣ ನೊಣನೆತ್ತಬಲ್ಲುದೊ ? ಕ್ಷೀರದ ರುಚಿಯ ಹಂಸೆಯಲ್ಲದೆ ಕೆಲದಲ್ಲಿ ಬಕನೆತ್ತವಬಲ್ಲುದೊ ? ಮಾವಿನ ಹಣ್ಣಿನ ರುಚಿಯನರಗಿಳಿಗಳು ಬಲ್ಲವಲ್ಲದೆ ಹೊರಗಣ ಕೋಳಿಗಳೆತ್ತ ಬಲ್ಲವೊ ? ಊಟದ ರುಚಿಯನು ನಾಲಗೆಯಲ್ಲದೆ ಕಲಸುವ ಕೈ ತಾನೆತ್ತ ಬಲ್ಲುದೊ? ಕೂಟದ ಸುಖವನು ಯೌವನೆಯಲ್ಲದ ಬಾಲೆ ತಾನೆತ್ತ ಬಲ್ಲಳೊ ? ಚಂದ್ರಸೂರ್ಯರÀಂತರಾಂತರವÀ ಖೇಚರರು ಬಲ್ಲರಲ್ಲದೆ ಗಗನದೊಳಗಾಡುವ ಹದ್ದುಗಳು ತಾವೆತ್ತ ಬಲ್ಲವೊ ? ಎಲೆ ಮಹಾಲಿಂಗ ಕಲ್ಲೇಶ್ವರಯ್ಯಾ. ನಿಮ್ಮ ನಿತ್ಯನಿಜೈಕ್ಯರ ನಿಲುವನು ಮಹಾನುಭಾವಿಗಳು ಬಲ್ಲರಲ್ಲದೆ ಲೋಕದ ಜಡಜೀವಿಗಳೆನಿಸುವ ಮಾನವರೆತ್ತ ಬಲ್ಲರೊ ?
--------------
ಹಾವಿನಹಾಳ ಕಲ್ಲಯ್ಯ