ಅಥವಾ
(4) (1) (1) (0) (1) (0) (0) (0) (0) (1) (0) (0) (0) (0) ಅಂ (0) ಅಃ (0) (1) (0) (1) (0) (0) (0) (0) (2) (0) (0) (0) (0) (0) (0) (0) (1) (0) (2) (0) (1) (0) (0) (0) (3) (3) (0) (0) (0) (1) (1) (0) (0) (0) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಭಕ್ತರಿಗೆ ಅಕ್ಕೆ ಶೋಕ ದುಃಖವುಂಟೆ ಅಯ್ಯಾ ? ಅತ್ತು ಕಳೆವ ನೋವ ಹಾಡಿ ಕಳೆಯಲೇಕಯ್ಯಾ ? ಈ ಮುಕ್ತಾಯಕ್ಕಗಳ ಕಕ್ಕುಲತೆಯ ಶಂಭುಜಕ್ಕೇಶ್ವರನ ಶರಣರೊಪ್ಪರಯ್ಯಾ.
--------------
ಸತ್ಯಕ್ಕ
ಭಾವನೇಕೆ ಬಾರನೆನ್ನ ಮನೆಗೆ ? ಹರಿಯಮಗನನುರುಹಿದ ಗರುವದ ಭಾವನೇಕೆ ಬಾರನೆನ್ನ ಮನೆಗೆ ? ಅಸುರರ ಪುರವ ಸುಟ್ಟ ವೀರಭಾವನೇಕೆ ಬಾರನೆನ್ನ ಮನೆಗೆ ? ದಕ್ಷನ ಶಿರವನರಿದು, ಯಾಗವ ಕೆಡಿಸಿ ಕುರಿದಲೆಯ ಹತ್ತಿಸಿ ಬಿನ್ನಾಣದ ಬಲುಹ ಮೆರೆವ ಏಕೋಭಾವನೇಕೆ ಬಾರನೆನ್ನ ಮನೆಗೆ ? ಹರಿಯ ನಯನದ ಪೂಜೆ ಚರಣದಲೊಪ್ಪಿತ್ತೆಂಬ ದುರುಳತನವು ತನಗೆ ಬೇಡವ್ವಾ. ಪರವಧುವಿಂಗಳುಪಿ ಇಲ್ಲವೆಂಬ ವಿಗಡತನದ ದುರುಳತನ ಬೇಡವ್ವಾ. ಆತನ ಕರೆದು ತಾರವ್ವಾ, ಶಂಭುಜಕ್ಕೇಶ್ವರನ ನೆರೆದು ನೋಡುವೆನು.
--------------
ಸತ್ಯಕ್ಕ
ಭವಿಯ ಬೆರಸಿದ ಭಕ್ತಿ, ಹವಿಯ ಬೆರಸಿದ ಬೀಜ, ಉದಕ ಬೆರಸಿದ ಎಣ್ಣೆ ಜ್ಯೋತಿ ಪ್ರಜ್ವಲಿಸುವುದೆ ? ಭವಿಯಲ್ಲ ಭಕ್ತನಲ್ಲ, ಹವಿಯಲ್ಲ ಬೀಜವಲ್ಲ, ಉದಕವಲ್ಲ ಎಣ್ಣೆಯಲ್ಲ ಒಡಲಿಚ್ಫೆಗೆ ಹೋಗಿ ಭವಿಯ ಮನೆಗೆ ತುತ್ತಿಡುವ ನರಕಿಗಳಿಗೇಕೊಲಿವ ನಮ್ಮ ಶಂಭುಜಕ್ಕೇಶ್ವರನು ?
--------------
ಸತ್ಯಕ್ಕ