ಅಥವಾ
(2) (0) (0) (0) (0) (1) (0) (0) (0) (0) (0) (0) (0) (0) ಅಂ (1) ಅಃ (1) (0) (0) (0) (2) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅರಿವೆ ಬಿಡಾಡಿ, ಅರಿಯದೆ ಬಿಡಾಡಿ, ಮರವೆ ಬಿಡಾಡಿ, ಮರೆಯದೆ ಬಿಡಾಡಿ, ಅರಿವರತು ಕುರುಹಿಲ್ಲದಾತ ನೀನೆ ಬಿಡಾಡಿ.
--------------
ಬೊಂತಾದೇವಿ
ಅಂತಾಯಿತ್ತಿಂತಾಯಿತ್ತೆಂತಾಯಿತ್ತೆನಬೇಡ, ಅನಂತನಿಂತಾತನೆಂದರಿಯಾ ಬಿಡಾಡಿ. ಕರೆದಡೆ ಓ ಎಂಬುದು ನಾದವೊ ಬಿಂದುವೊ ಪ್ರಾಣವೊ ಇದಾವುದು ? ಬಲ್ಲಡೆ ನೀ ಹೇಳಾ, ಬಿಡಾಡಿ. ನಾಲ್ಕು ವೇದ, ಹದಿನಾರು ಶಾಸ್ತ್ರ, ಹದಿನೆಂಟು ಪುರಾಣ, ಇಪ್ಪತ್ತೆಂಟಾಗಮ ಇದಪ್ರತಿ ಬಿಡಾಡಿ. ಶಬ್ದವೆ ಬ್ರಹ್ಮ, ಶಬ್ದವೆ ಸಿದ್ಧ, ಶಬ್ದವೆ ಶುದ್ಧ ಕಾಣಿರೆ, ಬಿಡಾಡಿ!
--------------
ಬೊಂತಾದೇವಿ