ಅಥವಾ
(1) (0) (0) (0) (0) (0) (0) (0) (1) (0) (0) (0) (0) (0) ಅಂ (0) ಅಃ (0) (1) (0) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (3) (0) (0) (1) (0) (3) (0) (0) (0) (0) (0) (1) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಮಣ್ಣು ಹೊನ್ನು ಹೆಣ್ಣೆಂಬ ತ್ರಿಭಂಗಿಯಲ್ಲಿ ಭಂಗಿತರಾಗಿ, ಆಸೆಯೆಂಬ ಮಧುಪಾನದಿಂದ ಉಕ್ಕಲಿತವಿಲ್ಲದೆ, ವಸ್ತುವ ಮುಟ್ಟುವದಕ್ಕೆ ದೃಷ್ಟವಿಲ್ಲದೆ, ಕಷ್ಟದ ಮರವೆಯಲ್ಲಿ, ದೃಷ್ಟದ ಸರಾಪಾನವ ಕೊಂಡು ಮತ್ತರಾಗುತ್ತ, ಇಷ್ಟದ ದೃಷ್ಟದ ಚಿತ್ತ ಮತ್ತುಂಟೆ ? ಧರ್ಮೇಶ್ವರಲಿಂಗವ ಮುಟ್ಟದೆ ಇತ್ತಲೆ ಉಳಿಯಿತ್ತು.
--------------
ಹೆಂಡದ ಮಾರಯ್ಯ
ಮದ್ದಿನ ಸುರೆಯ ತೊಗಲ ತಿತ್ತಿಯಲ್ಲಿ ತುಂಬಿ, ಒಪ್ಪದಲ್ಲಿ ನಿಲಿಸಲಿಕೆ, ಅದು ತನ್ನ ಉತ್ಸಾಹದಿಂದ ತಿತ್ತಿ ಹಾರಿ, ನೆಲಕ್ಕೆ ಅಪ್ಪಳಿಸಿ ಬೀಳೂದ ಕಂಡೆ. ದೃಷ್ಟವ ಕೇಳಲೇತಕ್ಕೆ ಕಾಯದ ತಿತ್ತಿಯಲ್ಲಿ ಜೀವ ಹೊಕ್ಕು, ತ್ರಿವಿಧಮಲವಂ ಕಚ್ಚಿ ನಡೆವುದಕ್ಕೆ ಕಾಲಿಲ್ಲದೆ, ನುಡಿವುದುಕ್ಕೆ ಬಾಯಿಲ್ಲದೆ, ನೋಡುವುದಕ್ಕೆ ಕಣ್ಣಾಲಿ ಮರೆಯಾಯಿತ್ತು. ಬೊಂಬೆ ಹೋಯಿತ್ತು ದೃಷ್ಟಾಂತರ ಬೊಂಬೆ ಕೆಟ್ಟಲ್ಲಿ. ಮಣ್ಣಿಗೆ ಕಾದಿ, ಹೊನ್ನಿಗೆ ಹೋರಿ, ಹೆಣ್ಣಿಂಗೆ ನಾಣುಗೆಟ್ಟ ಈ ಕುನ್ನಿಮನಕ್ಕೆ ಇನ್ನೇವೆ ಧರ್ಮೇಶ್ವರ[ಲಿಂಗಾ] ?
--------------
ಹೆಂಡದ ಮಾರಯ್ಯ
ಮಣ್ಣೆಂಬ ಘಟದ ಮಧ್ಯದಲ್ಲಿ ಹೊನ್ನೆಂಬ ಸುರೆ ಹುಟ್ಟಿತ್ತು. ಹೆಣ್ಣೆಂಬ ಬಟ್ಟಲಲ್ಲಿ ಅಂತು ಈಂಟಲಾಗಿ ಲಹರಿ ತಲೆಗೇರಿತ್ತು. ಈ ಉನ್ಮತ್ತದಲ್ಲಿ ಮಗ್ನರಾದವರೆಲ್ಲರೂ ಆರುಹಿರಿಯರೆಂತಪ್ಪರೊ ? ಭಕ್ತಿ ವಿರಕ್ತಿಯೆಂಬುದು ಇತ್ತಲೆ ಉಳಿಯಿತ್ತು. ಧರ್ಮೇಶ್ವರಲಿಂಗದತ್ತ ಮುಟ್ಟಿದಡಂತಿಲ್ಲ.
--------------
ಹೆಂಡದ ಮಾರಯ್ಯ