ಆ ಪದದಿಂದ ಪ್ರಾರಂಭವಾಗುವ ವಚನಗಳು:
ಆಡು ಆರುದಿಂಗಳು ಹುಟ್ಟಿ, ಮೂರುದಿನ ಬದುಕಿ,ಒಂದುದಿನ ಸತ್ತಿತ್ತು.ಕುರಿ ಕುರುಹ ಮೇದು, ಮರಿಗೆ ಮೊಲೆಗೊಟ್ಟಿತ್ತು.ಮರಿಯು ಮೊಲೆಯ ನುಂಗಿ, ಕುರುಹಿನೊಳಗಡಗಿತ್ತು.ಆಡು ಕುರಿ ಬಂದ ಬಟ್ಟೆಯ ಸೋಧಿಸಿಕೊಂಡು,ತೋಳನ ತೊಡಕಿನಲ್ಲಿ ಸಾಯದೆ, ಅರಿ ವೀರಬೀರೇಶ್ವರಲಿಂಗವಾ.