ಅಥವಾ
(0) (1) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (5) (0) (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (2) (0) (0) (0) (0) (1) (0) (1) (0) (0) (1) (1) (0) (3) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ನರಕುಲ ಹಲವಾದಲ್ಲಿ, ಯೋನಿಯ ಉತ್ಪತ್ಯ ಒಂದೇ ಭೇದ. ಮಾತಿನ ರಚನೆ ಎಷ್ಟಾದಡೇನು ? ನಿಹಿತವರಿವುದು ಒಂದು ಭೇದ. ವಸ್ತು ಜಾತಿ ಗೋತ್ರ ವಿಶೇಷವೆಂಬಲ್ಲಿ, ದಿನರಾತ್ರಿಯೆಂಬ ಉಭಯವನಳಿವುದಕ್ಕೆ ತಮ ಬೆಳಗೆರಡೆಂಬವಲ್ಲದಿಲ್ಲ. ಕುಲ ಉಭಯಶಕ್ತಿ ಪುರುಷತ್ವವಲ್ಲದಿಲ್ಲ. ಬೇರೆ ಹಲವು ತೆರನುಂಟೆಂದಡೆ, ಮೀರಿ ಕಾಬ ಶ್ರುತ ದೃಷ್ಟ ಇನ್ನಾವುದು ? ಎಲ್ಲಕ್ಕೂ ನೀರು ನೆಲ ಸೂರ್ಯ ಸೋಮ ಆರೈದು ನೋಡುವ ದೃಷ್ಟಿಯೊಂದೆ ಬೊಂಬೆ. ಬೊಂಬೆ ಹಲವ ನೋಡಿಹೆ, ಬೊಂಬೆ ಹಲವಂದ ಕಾಣ್ಬಂತೆ, ಅದರಂಗವ ತಿಳಿದು ನಿಂದಲ್ಲಿ, ಹಲವು ಕುಲದ ಹೊಲೆಯೆಂದೂ ಇಲ್ಲವೆಂದೆ. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ
--------------
ವೀರ ಗೊಲ್ಲಾಳ/ಕಾಟಕೋಟ
ನಡೆನುಡಿ ಸಿದ್ಧಾಂತವಾದಲ್ಲಿ, ಕುಲ ಹೊಲೆ ಸೂತಕವಿಲ್ಲ. ನುಡಿ ಲೇಸು, ನಡೆಯಧಮವಾದಲ್ಲಿ, ಅದು ಬಿಡುಗಡೆಯಿಲ್ಲದ ಹೊಲೆ. ಕಳವು ಪಾರದ್ವಾರಂಗಳಲ್ಲಿ ಹೊಲಬನರಿಯದೆ, ಕೆಟ್ಟು ನಡೆವುತ್ತ, ಮತ್ತೆ ಕುಲಜರೆಂಬ ಒಡಲವರುಂಟೆ ? ಆಚಾರವೆ ಕುಲ, ಅನಾಚಾರವೆ ಹೊಲೆ. ಇಂತೀ ಉಭಯವ ತಿಳಿದರಿಯಬೇಕು. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ.
--------------
ವೀರ ಗೊಲ್ಲಾಳ/ಕಾಟಕೋಟ