ಅಥವಾ
(0) (1) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (5) (0) (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (2) (0) (0) (0) (0) (1) (0) (1) (0) (0) (1) (1) (0) (3) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಸಾಂಖ್ಯ ಶ್ವಪಚ, ಅಗಸ್ತ್ಯ ಕಬ್ಬಿಲ, ದೂರ್ವಾಸ ಮಚ್ಚಿಗ, ದಧೀಚಿ ಕೀಲಿಗ, ಕಶ್ಯಪ ಕಮ್ಮಾರ, ರೋಮಜ ಕಂಚುಗಾರ, ಕೌಂಡಿಲ್ಯ ನಾವಿದನೆಂಬುದನರಿದು, ಮತ್ತೆ ಕುಲವುಂಟೆಂದು ಛಲಕ್ಕೆ ಹೋರಲೇತಕ್ಕೆ ? ಇಂತೀ ಸಪ್ತಋಷಿಯರುಗಳೆಲ್ಲರೂ ಸತ್ಯದಿಂದ ಮುಕ್ತರಾದುದನರಿಯದೆ, ಅಸತ್ಯದಲ್ಲಿ ನಡೆದು, ವಿಪ್ರರು ನಾವು ಘನವೆಂದು ಹೋರುವ ಹೊತ್ತುಹೋಕರ ಮಾತೇತಕ್ಕೆ ? ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ.
--------------
ವೀರ ಗೊಲ್ಲಾಳ/ಕಾಟಕೋಟ
ಸ್ಥೂಲ ಸೂಕ್ಷ್ಮ ಕಾರಣವೆಂಬ ಮೂರು ಕಂಬವ ನೆಟ್ಟು, ಆಗುಚೇಗೆಯೆಂಬ ದಡಿಗೋಲಿನಲ್ಲಿ ಅಗಡದ ಎಮ್ಮೆಯ ಚರ್ಮವ ತೆಗೆದು, ಉಭಯನಾಮವೆಂಬ ನಾರಿನಲ್ಲಿ ತಿತ್ತಿಯನೊಪ್ಪವ ಮಾಡಿ, ಭಾವವೆಂಬ ತಿಗುಡಿನಲ್ಲಿ ಸರ್ವಸಾರವೆಂಬ ಖಾರದ ನೀರ ಹೊಯಿದು, ಅಟ್ಟೆಯ ದುರ್ಗುಣ ಕೆಟ್ಟು, ಮೆಟ್ಟಡಿಯವರಿಗೆ ಮುಟ್ಟಿಸಬಂದೆ. ಮೆಟ್ಟಡಿಯ ತಪ್ಪಲ ಕಾಯದೆ ಮೆಟ್ಟಡಿಯ ಬಟ್ಟೆಯ ನೋಡಿಕೊಳ್ಳಿ. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ.
--------------
ವೀರ ಗೊಲ್ಲಾಳ/ಕಾಟಕೋಟ
ಸ್ಥಲಂಗಳನರಿದಿಹೆನೆಂದಡೆ ತ್ರಿವಿಧಸ್ಥಲ ಎನಗಿಲ್ಲ. ಷಡುಸ್ಥಲವ ಮುನ್ನವೆ ಅರಿಯೆ. ತತ್ತ್ವವನರಿದಿಹೆನೆಂದಡೆ ಇಪ್ಪತ್ತೈದರ ಗೊತ್ತಿನವನಲ್ಲ. ಮಿಕ್ಕಾದ ಸತ್ಕ್ರೀಯದಲ್ಲಿ ನಡೆದಿಹೆನೆಂದಡೆ ಭಕ್ತಿ ಜ್ಞಾನ ವೈರಾಗ್ಯ ತ್ರಿವಿಧ ಲಕ್ಷ್ಯವಿಧ ನಾನಲ್ಲ. ನಿಷೆ*ಯಲ್ಲಿ ದೃಷ್ಟವ ಕಂಡಿಹನೆಂದಡೆ ವಿಶ್ವಾಸ ಎನಗಿಲ್ಲ. ವಿರಕ್ತಿಯಲ್ಲಿ ವೇಧಿಸಿಹೆನೆಂದಡೆ, ತ್ರಿವಿಧ ಮಲದ ಮೊತ್ತದೊಳಗೆ ಮತ್ತನಾಗಿದೇನೆ. ಮತ್ತೆ ನಿಶ್ಚಯವನರಿದಿಹೆನೆಂದಡೆ, ಆತ್ಮಂಗೆ ಲಕ್ಷವಿಡುವದೊಂದು ಗೊತ್ತ ಕಾಣೆ. ಇಂತೀ ಕಷ್ಟತನುವಿನಲ್ಲಿ ಬಂದು, ಧೂರ್ತನಾಗಿ ಕೆಟ್ಟುಹೋಗುತ್ತಿದೇನೆ. ಗುಡಿಸಿದ ಹಿಕ್ಕೆಯಲ್ಲಿ ಬಂದು ತನ್ನ ನಿಷೆ*ಯ ತೋರಿ, ಎನಗೆ ಸದ್ಭಕ್ತಿಯ ಬೀರಿ, ವಿಶ್ವಾಸಿಗಳಿಗೆಲ್ಲಕ್ಕೆ ಕೃತ್ಯದೊಳಗಾಗಿ, ನಿತ್ಯನೇಮಂಗಳಲ್ಲಿ ಅಚ್ಚೊತ್ತಿದಂತಿರು. ನೀನೆ ಮುಕ್ತನಹೆ, ನಿಜನಿತ್ಯನಹೆ, ಜಗಕೆ ಕರ್ತೃವಹೆ. ಎನ್ನ ಹಿಕ್ಕೆಗೆ ಬಂದು ಸಿಕ್ಕಿದೆಯಲ್ಲಾ, ಮಹಾಮಹಿಮ ವೀರಬೀರೇಶ್ವರಾ.
--------------
ವೀರ ಗೊಲ್ಲಾಳ/ಕಾಟಕೋಟ