ಅಥವಾ
(1) (0) (1) (0) (0) (0) (0) (0) (7) (0) (0) (1) (0) (0) ಅಂ (0) ಅಃ (0) (1) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (1) (3) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಎನ್ನ ಘ್ರಾಣದಲ್ಲಿ ಆಚಾರಲಿಂಗವಾಗಿ ಮೂರ್ತಿಗೊಂಡನಯ್ಯಾ, ಬಸವಣ್ಣನು. ಎನ್ನ ಜಿಹ್ವೆಯಲ್ಲಿ ಗುರುಲಿಂಗವಾಗಿ ಮೂರ್ತಿಗೊಂಡನಯ್ಯಾ, ಚನ್ನಬಸವಣ್ಣನು ಎನ್ನ ನೇತ್ರದಲ್ಲಿ ಶಿವಲಿಂಗವಾಗಿ ಮೂರ್ತಿಗೊಂಡನಯ್ಯಾ, ಘಟ್ಟಿವಾಳ ಮುದ್ದಯ್ಯನು. ಎನ್ನ ತ್ವಕ್ಕಿನಲ್ಲಿ ಜಂಗಮಲಿಂಗವಾಗಿ ಮೂರ್ತಿಗೊಂಡನಯ್ಯಾ, ಸಿದ್ಧರಾಮಯ್ಯನು. ಎನ್ನ ಶ್ರೋತ್ರದಲ್ಲಿ ಪ್ರಸಾದಲಿಂಗವಾಗಿ ಮೂರ್ತಿಗೊಂಡನಯ್ಯಾ, ಮರುಳಶಂಕರದೇವರು, ಎನ್ನ ಹೃದಯದಲ್ಲಿ ಮಹಾಲಿಂಗವಾಗಿ ಮೂರ್ತಿಗೊಂಡನಯ್ಯಾ, ಪ್ರಭುದೇವರು. ಎನ್ನ ಸರ್ವಾಂಗದಲ್ಲಿ ಮೂರ್ತಿಗೊಂಡರು ಪ್ರಮಥರು. ಗವರೇಶ್ವರಲಿಂಗದಲ್ಲಿ ಸುಖಿಯಾಗಿ ಬದುಕಿದೆನು ಕಾಣಾ, ಮಡಿವಾಳ ಮಾಚಯ್ಯ.
--------------
ಮೇದರ ಕೇತಯ್ಯ
ಎನ್ನ ಭಕ್ತಿ, ಬಸವಣ್ಣನಲ್ಲಿ ಬಯಲಾಯಿತ್ತು. ಎನ್ನ ಜ್ಞಾನ, ಚೆನ್ನಬಸವಣ್ಣನಲ್ಲಿ ಬಯಲಾಯಿತ್ತು. ಎನ್ನ ವೈರಾಗ್ಯ, ಪ್ರಭುದೇವರಲ್ಲಿ ಬಯಲಾಯಿತ್ತು. ಇಂತೀ ಮೂವರು ಒಬ್ಬರೊಂದ ಬಯಲಮಾಡಿದರಾಗಿ, ಗವರೇಶ್ವರಲಿಂಗದಲ್ಲಿ ನಿಶ್ಚಿಂತವಾಯಿತ್ತು.
--------------
ಮೇದರ ಕೇತಯ್ಯ
ಎನ್ನ ಪ್ರಾಣಕ್ಕೆ ಆಚಾರಲಿಂಗವಾದಾತ ಬಸವಣ್ಣ. ಎನ್ನ ಜಿಹ್ವೆಗೆ ಗುರುಲಿಂಗವಾದಾತ ಬಸವಣ್ಣ. ಎನ್ನ ನೇತ್ರಕ್ಕೆ ಶಿವಲಿಂಗವಾದಾತ ಬಸವಣ್ಣ. ಎನ್ನ ಶ್ರೋತ್ರಕ್ಕೆ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ಹೃದಯಕ್ಕೆ ಮಹಲಿಂಗವಾದಾತ ಬಸವಣ್ಣ. ಇಂತಿದನರಿದೆನಾಗಿ ಗವರೇಶ್ವರಲಿಂಗದಲ್ಲಿರ್ದೆನಯ್ಯಾ.
--------------
ಮೇದರ ಕೇತಯ್ಯ
ಎನ್ನ ಆಧಾರಚಕ್ರದಲ್ಲಿ ಆಚಾರಲಿಂಗವಾದಾತ ಬಸವಣ್ಣ. ಎನ್ನ ಸ್ವಾಧಿಷಾ*ನಚಕ್ರದಲ್ಲಿ ಗುರುಲಿಂಗವಾದಾತ ಬಸವಣ್ಣ. ಎನ್ನ ಮಣಿಪೂರಕ ಚಕ್ರದಲ್ಲಿ ಶಿವಲಿಂಗವಾದಾತ ಬಸವಣ್ಣ. ಎನ್ನ ಪಾಣಿಯಲ್ಲಿ ಜಂಗಮಲಿಂಗವಾದಾತ ಬಸವಣ್ಣ. ಎನ್ನ ವಾಕ್ಕಿನಲ್ಲಿ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ನಿಃಪ್ರಪಂಚದಲ್ಲಿ ಮಹಲಿಂಗವಾದಾತ ಬಸವಣ್ಣ. ಇಂತಿದನರಿದೆನಾಗಿ. ಗವರೇಶ್ವರಲಿಂಗದಲ್ಲಿರ್ದೆನಯ್ಯಾ.
--------------
ಮೇದರ ಕೇತಯ್ಯ
ಎನ್ನ ಕಾಯದ ಕಳವಳವ ನಿಲಿಸಿ, ಗುರುಲಿಂಗವ ತೋರಿದ, ಎನ್ನ ಮನದ ವ್ಯಾಕುಳವ ನಿಲಿಸಿ, ಜಂಗಮಲಿಂಗವ ತೋರಿದ, ಇಂತು ಅಂತರಂಗ ಬಹಿರಂಗದಲ್ಲಿ ತಾನೆಯಾಗಿ, ಎನ್ನ ಪಾವನವ ಮಾಡಿದ, ಅಮರಗಣಂಗಳು ಮುನಿದು ಎನ್ನ ಕೈಲಾಸಕ್ಕೆ ಒಯ್ದಡೆ, ಸದ್ಯೋನ್ಮುಕ್ತಿಯ ತೋರಲೆಂದು ಮತ್ರ್ಯಕ್ಕೆ ಮರಳಿ ತಂದ ಸಂಗನಬಸವಣ್ಣನೆ ಗುರುವೆನಗೆ, ಸಂಗನಬಸವಣ್ಣನೆ ಪರವೆನಗೆ. ಸಂಗನಬಸವಣ್ಣನ ಕರುಣದಿಂದ, ಘನಕ್ಕೆ ಘನಮಹಿಮ ಅಲ್ಲಮಪ್ರಭುವಿನ ಶ್ರೀಪಾದವ ಕಂಡು ಬದುಕಿದೆನು ಕಾಣಾ, ಗವರೇಶ್ವರಾ.
--------------
ಮೇದರ ಕೇತಯ್ಯ
ಎನ್ನ ಚಿತ್ತಕ್ಕೆ ಆಚಾರಲಿಂಗವಾದಾತ, ಬಸವಣ್ಣ. ಎನ್ನ ಬುದ್ಧಿಗೆ ಗುರುಲಿಂಗವಾದಾತ, ಬಸವಣ್ಣ. ಎನ್ನ ಅಹಂಕಾರಕ್ಕೆ ಶಿವಲಿಂಗವಾದಾತ, ಬಸವಣ್ಣ. ಎನ್ನ ಮನಕ್ಕೆ ಜಂಗಮಲಿಂಗವಾದಾತ, ಬಸವಣ್ಣ. ಎನ್ನ ಜೀವಕ್ಕೆ ಪ್ರಸಾದಲಿಂಗವಾದಾತ, ಬಸವಣ್ಣ. ಎನ್ನ ಅರುವಿಂಗೆ ಮಹಾಲಿಂಗವಾದಾತ, ಬಸವಣ್ಣ. ಎನ್ನ ಸ್ಥೂಲತನುವಿಂಗೆ ಇಷ್ಟಲಿಂಗವಾದಾತ, ಬಸವಣ್ಣ. ಎನ್ನ ಸೂಕ್ಷ್ಮತನುವಿಂಗೆ ಪ್ರಾಣಲಿಂಗವಾದಾತ, ಬಸವಣ್ಣ. ಎನ್ನ ಕಾರಣತನುವಿಂಗೆ ತೃಪ್ತಿಲಿಂಗವಾದಾತ, ಬಸವಣ್ಣ. ಇಂತೆಂದರಿದೆನಾಗಿ, ಗವರೇಶ್ವರಲಿಂಗದಲ್ಲಿ ಆನು ಸುಖಿಯಾಗಿರ್ದೆನಯ್ಯಾ |
--------------
ಮೇದರ ಕೇತಯ್ಯ
ಎನ್ನ ಆಧಾರಚಕ್ರದಲ್ಲಿ ಅಪಾನವಾಯುವು ಆಚಾರಲಿಂಗವಾದಾತ ಬಸವಣ್ಣ. ಎನ್ನ ಸ್ವಾಧಿಷಾ*ನಚಕ್ರದಲ್ಲಿ ವ್ಯಾನವಾಯುವು ಗುರುಲಿಂಗವಾದಾತ ಬಸವಣ್ಣ. ಎನ್ನ ಮಣಿಪೂರಕಚಕ್ರದಲ್ಲಿ ಸಮಾನವಾಯುವು ಶಿವಲಿಂಗವಾದಾತ ಬಸವಣ್ಣ. ಎನ್ನ ಅನಾಹುತಚಕ್ರದಲ್ಲಿ ಪ್ರಾಣವಾಯುವು ಜಂಗಮಲಿಂಗವಾದಾತ ಬಸವಣ್ಣ. ಎನ್ನ ವಿಶುದ್ಧಿ ಚಕ್ರದಲ್ಲಿ ಉದಾನವಾಯುವು ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ನಿಃಪ್ರಪಂಚದಲ್ಲಿ ಮಹಲಿಂಗವಾದಾತ ಬಸವಣ್ಣ. ಇಂತಿದನರಿದೆನಾಗಿ ಗವರೇಶ್ವರಲಿಂಗದಲ್ಲಿರ್ದೆನಯ್ಯಾ.
--------------
ಮೇದರ ಕೇತಯ್ಯ