ಅಥವಾ
(1) (0) (0) (0) (0) (0) (0) (0) (0) (0) (0) (0) (0) (0) ಅಂ (1) ಅಃ (1) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಂತರಂಗದಲ್ಲಿ ಅರಿವಿಲ್ಲದವಂಗೆ ಬಹಿರಂಗದಲ್ಲಿ ಕ್ರೀಯಿದ್ದು ಫಲವೇನು ? ಅದು ಕಣ್ಣಿಲ್ಲದವನ ಬಾಳುವೆಯಂತೆ. ಬಹಿರಂಗದಲ್ಲಿ ಕ್ರೀಯಿಲ್ಲದವಂಗೆ ಅಂತರಂಗದಲ್ಲಿ ಅರಿವಿದ್ದು ಫಲವೇನು ? ಅದು ಶೂನ್ಯಾಲಯದ ದೀಪದಂತೆ. ಅಂತರಂಗದ ಅರಿವು, ಬಹಿರಂಗದ ಕ್ರಿಯೆ- ಈ ಉಭಯಾಂಗವೊಂದಾಗಬೇಕು. ಅದೆಂತೆಂದಡೆ : ಅಂತಜ್ರ್ಞಾನ ಬಹಿಃಕ್ರಿಯಾ ಏಕೀಭಾವೋ ವಿಶೇಷತಃ ಎಂದುದಾಗಿ, ಅಂತರಂಗದಲ್ಲಿ ಅರಿವು, ಬಹಿರಂಗದಲ್ಲಿ ಕ್ರೀಯುಳ್ಳ ಮಹಾತ್ಮನೆ ಭಕ್ತನಪ್ಪ, ಮಹೇಶ್ವರನಪ್ಪ, ಪ್ರಸಾದಿಯಪ್ಪ ಪ್ರಾಣಲಿಂಗಿಯಪ್ಪ, ಶರಣನೈಕ್ಯನಪ್ಪ. ನಮ್ಮ ಪರಮಗುರು ಶಾಂತಮಲ್ಲಿಕಾರ್ಜುನ ತಾನೆಯಪ್ಪ.
--------------
ಕರಸ್ಥಲದ ಮಲ್ಲಿಕಾರ್ಜುನೊಡೆಯ