ಅಥವಾ
(0) (0) (0) (0) (0) (0) (0) (0) (3) (0) (0) (0) (0) (0) ಅಂ (0) ಅಃ (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (0) (0) (0) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಎಲ್ಲರ ಹೆಂಡಿರು ತೊಳಸಿಕ್ಕುವರು; ಎನ್ನ ಗಂಡಂಗೆ ತೊಳಸುವುದಿಲ್ಲ. ಎಲ್ಲರ ಗಂಡಂದಿರಿಗೆ ಬಸಿವರು; ಎನ್ನ ಗಂಡಂಗೆ ಬಸಿವುದಿಲ್ಲ. ಎಲ್ಲರ ಗಂಡಂದಿರಿಗೆ ಬೀಜವುಂಟು; ಎನ್ನ ಗಂಡಂಗೆ ಅಂಡದ ಬೀಜವಿಲ್ಲ. ಎಲ್ಲರ ಗಂಡಂದಿರು ಮೇಲೆ; ಎನ್ನ ಗಂಡ ಕೆಳಗೆ, ನಾ ಮೇಲೆ. ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.
--------------
ಕದಿರರೆಮ್ಮವ್ವೆ
ಎಲ್ಲರ ಗಂಡಂದಿರು ಪರದಳವಿಭಾಡರು; ಎನ್ನ ಗಂಡ ಮನದಳವಿಭಾಡ. ಎಲ್ಲರ ಗಂಡಂದಿರು ಗಜವೇಂಟೆಕಾರರು; ಎನ್ನ ಗಂಡ ಮನವೇಂಟೆಕಾರ. ಎಲ್ಲರ ಗಂಡಂದಿರು ತಂದಿಕ್ಕಿಸಿಕೊಂಬರು; ಎನ್ನ ಗಂಡ ತಾರದೆ ಇಕ್ಕಿಸಿಕೊಂಬ. ಎಲ್ಲರ ಗಂಡಂದಿರಿಗೆ ಮೂರು, ಎನ್ನ ಗಂಡಂಗೆ ಅದೊಂದೆ; ಅದೊಂದೂ ಸಂದೇಹ, ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.
--------------
ಕದಿರರೆಮ್ಮವ್ವೆ
ಎನ್ನ ಸ್ಥೂಲತನುವೆ ಬಸವಣ್ಣನಯ್ಯಾ. ಎನ್ನ ಸೂಕ್ಷ್ಮತನುವೆ ಚೆನ್ನಬಸವಣ್ಣನಯ್ಯಾ. ಎನ್ನ ಕಾರಣತನುವೆ ಪ್ರಭುದೇವರಯ್ಯಾ, ಇಂತಿವರ ಕರುಣದಿಂದಲಾನು ಬದುಕಿದೆನಯ್ಯಾ ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.
--------------
ಕದಿರರೆಮ್ಮವ್ವೆ