ಅಥವಾ
(3) (1) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (2) (0) (0) (0) (1) (0) (0) (1) (0) (0) (0) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅರಿವನಕ್ಕು ಭೃತ್ಯಾಚಾರಿ ಮೀರಿ ಮಿಕ್ಕು ಶರಣಪಥವ ಸೋಂಕು ತಾನಾಗಿದ್ದ ಸುಖವು ಕೆಡುವನ್ನಕ್ಕ ಪ್ರಾಣಲಿಂಗಿ; ಕೊಡಲಿಲ್ಲ ಕೊಡಲಿಲ್ಲ ಲಿಂಗಪ್ರಾಣಿಯಾದವಂಗೆ; ಸಿದ್ಧಸೋಮನಾಥಲಿಂಗದಲ್ಲಿ ಅರುಹಿನವಗ್ರಹ ಕಾಣಾ!
--------------
ಗೋರಕ್ಷ / ಗೋರಖನಾಥ
ಅರಗಿನ ತೇಜಿಯ ಮೇಲೆ ಉರಿಯ ಹಿರಿಯರಸು ಮೂರ್ತಿಗೊಂಡಿರಲು ಮಂಜಿನ ಪರಿವಾರ ಸಂದಣಿಸಿ ಸಂತೈಸಿ ಅವರಂಗಕ್ಕೆ ಬಿಸಿಲಿನ ಜೋಡ ತೊಡಿಸಿ ತಾ ತುರಂಗದ ಮೇಲೆ ಪಶುತಮವೆಂಬ ಖಂಡೆಯವ ಪಿಡಿದು ಚಂಜಿಕಾಕಿರಣದ ಮೇಲೆ ಅಂಗೈಸಿ ಏರಲಾಗಿ ಫೌಜು ಬೆರಸಿತ್ತು. ಉರಿಯರಸು ಎತ್ತಿದ ಖಂಡೆಯ ವರುಣನ ಕಿರಣದೊಳಗೆಬಯಲಾಯಿತ್ತು. ಮಂಜಿನ ಪರಿವಾರ ಆ ರಂಜನೆಯೊಳಡಗಿತ್ತು. ಉರಿಯರಸು ವಾಯುವಿನ ಸಿರಿಯೊಳಗಾದ. ಅರಗಿನ ಅಶ್ವ ಅರಸಿನ ತೊಡೆಯೊಳಗೆ ಹರಿಯಿತ್ತು. ಇಂತೀ ದೊರೆಗೆ ಅರಿ ಇದಿರಿಲ್ಲಾ ಎಂದು ಗೋರಕ್ಷಪಾಲಕ ಮಹಾಪ್ರಭು ಸಿದ್ಧಸೋಮನಾಥಲಿಂಗಕ್ಕೆ ಇದಿರಿಲ್ಲಾ ಎನುತಿರ್ದೆ.
--------------
ಗೋರಕ್ಷ / ಗೋರಖನಾಥ
ಅವಧಿಜ್ಞಾನ ಅಂತರಿಕ್ಷಜ್ಞಾನ ಪವನಜ್ಞಾನ ಪರಸ್ವರೂಪಜ್ಞಾನ ಪರಬ್ರಹ್ಮಜ್ಞಾನ ಪರತತ್ವಜ್ಞಾನ ಸ್ವಯಜ್ಞಾನ ಸ್ವಾನುಭಾವಜ್ಞಾನ ಸರ್ವಪರಿಪೂರ್ಣಜ್ಞಾನ ದಿವ್ಯಜ್ಯಾನವೆಂದು ಸಂಕಲ್ಪಿಸುವಾಗ ಆ ಆತ್ಮಕ್ಕೆ ಅದು ನಿಜವೊ, ಅದರ ಪರಿಭ್ರಮಣವೊ? ಸಕಲ ಶಸ್ತ್ರಂಗಳಿಂದ ಕಡಿವಡಿದಂಗ ಆತ್ಮಬಿಡುವಲ್ಲಿ ಹಲವು ಶಸ್ತ್ರದ ಭೇದವೊ? ಅಂಗದ ಆಯಧ ಗಾಯದ ಭೇದವೊ? ಎಂಬುದ ತಿಳಿದು ಪದಪದಾರ್ಥಂಗಳ ಲಕ್ಷಿಸಿ ನಿರೀಕ್ಷಿಸಿಆರೋಪಿಸಬೇಕು. ಒಂದು ವಿಶ್ವವಾದಲ್ಲಿ, ವಿಶ್ವ ಒಂದಾದಲ್ಲಿ ಉಭಯದಲ್ಲಿ ನಿಂದು ತಿಳಿದಲ್ಲಿ ಗೋರಕ್ಷಪಾಲಕ ಮಹಾಪ್ರಭು ಸಿದ್ಧ ಸೋಮನಾಥಲಿಂಗವುಒಂದೆನಬೇಕು.
--------------
ಗೋರಕ್ಷ / ಗೋರಖನಾಥ