ಅಥವಾ
(2) (5) (1) (2) (4) (0) (0) (0) (5) (0) (1) (0) (0) (0) ಅಂ (0) ಅಃ (0) (25) (0) (4) (0) (0) (1) (0) (2) (0) (0) (0) (0) (1) (0) (0) (4) (0) (0) (0) (7) (2) (0) (9) (2) (5) (1) (1) (0) (4) (4) (0) (0) (4) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಭಕ್ತರಾಗಿದ್ದವರು ಭಕ್ತರ ವಿರಕ್ತರ ಮಿಥ್ಯದಿಂದ ನುಡಿವುದು ಸತ್ಯವಲ್ಲ. ಮಿಥ್ಯವನಳಿದು ಸತ್ಯವ ಕುರಿತು ಭಕ್ತ ಜಂಗಮಕ್ಕೆ ತತ್ತ್ವದ ಬಟ್ಟೆಯ ಹೇಳಿದಲ್ಲಿ ನಿತ್ಯ ಅನಿತ್ಯವ ತಿಳಿಯಬೇಕು. ಇದು ಸುಚಿತ್ತದ ಭಾವ. ತನ್ನ ವಂಶ ಕೆಟ್ಟಡೆ ತನಗಲ್ಲದೆ ಅನ್ಯರಿಗಿಲ್ಲ. ಇದು ಕಾರಣದಲ್ಲಿ ತನ್ನಂಗದ ಗಾಯದ ನೋವು ತನಗೆ ಅನ್ಯ ಬ್ಥಿನ್ನವಿಲ್ಲದೆ ತೋರುವವೊಲು ಇದು ನನ್ನಿಯ ನುಡಿದೆ ನೈಸಲ್ಲದೆ ಸಮರಸದ ಸನ್ನರ್ಧನಲ್ಲ. ನೀವಾಡಿಸುವ ಯಂತ್ರದ ತಂತ್ರವಲ್ಲದೆ ಸ್ವತಂತ್ರಿಯಲ್ಲ. ಎನಗೆ ಇದಿರನಾಡೆ ನಾ ಮಾಡುವ ಭಕ್ತಿ ಸತ್ಯ ಸುಚಿತ್ತದ ನಿತ್ಯವಲ್ಲ. ಮೊತ್ತದ ಕರಣಂಗಳ ನಡುವೆ ಸಿಕ್ಕಿ ಮತ್ತನಾಗಿ ಬಿದ್ದವಂಗೆ ವಸ್ತುವಿನ ಬಟ್ಟೆಯ ತೋರಿ ಮುಕ್ತಿಪಥದಲ್ಲಿ ನಿಲುವ ನಿಚ್ಚಣಿಕೆಯನಿಕ್ಕಿ ತೋರಿದ ಭಕ್ತ ದೇಹಿಕ ನಿಜಪದ ತತ್ವ ಸ್ವರೂಪ. ಸಕಲ ಜೀವದ ಆಧಾರ, ಸಕಲಮಯ ಅಖಿಳ ಬ್ರಹ್ಮಾಂಡ ಕರಂಡ ತಮರಿಪು ಕೋದಂಡ, ಶಕ್ತಿಮಯ ಚಂಡಿಕಾ ಕಿರಣದಶ ಉದಕಭರಿತ, ಭಕ್ತಿಭಂಡಾರಿ ಬಸವೇಶ್ವರನ ನಿಜತತ್ವದ್ವಯ ಪಾದಂಗಳಿಗೆ ಮಂಡಿತಮಯನಾಗೆರಗಿದೆ ಸಂದೇಹವೆಂಬ ಕರಂಡವ ಬಂದ ಪ್ರಮಥರ ಸತಿ ಸಂದ ಪ್ರಮಥರ ಡಿಂಗರಿಗ ಗುಪ್ತಮಂಚನ ನಿತ್ಯನೇಮ ಸಂದಿತ್ತು. ವೀರದಾಸನ ದಾಸೋಹ ಸೋಹಂ ಎನುತಿದ್ದಿತ್ತು. ನಾರಾಯಣ ನಯನ ಪೂಜಿತಪದಾಂಬುಜ ವಿಮಲ ಕಮಲ ಸುಲಲಿತ ರಾಮೇಶ್ವರಲಿಂಗ ಎನ್ನೊಳಗಾದಾ.
--------------
ಗುಪ್ತ ಮಂಚಣ್ಣ
ಭಕ್ತಂಗೆ ತನು ಮನ ಧನ ಮಾಡುವ ಭಕ್ತಿಯಲ್ಲಿ, ಪೂಜಿಸುವ ಶಿವಲಿಂಗದಲ್ಲಿ ಭೃತ್ಯಭಾವ, ಗುರುವಿನಲ್ಲಿ ನಿಶ್ಚಯಭಾವ, ಜಂಗಮದಲ್ಲಿ ಇವೆಲ್ಲವೂ ತನ್ನೊದಗಲ್ಲದೆ ಇದಿರಿಗೆ ಭಿನ್ನಭಾವವಿಲ್ಲವಾಗಿ ತಾ ಬಿತ್ತಿದ ಬೆಳೆಯ ತಾ ಸಲಿಸುವಂತೆ ತನಗೆ ಲಾಭವಲ್ಲದೆ ಇದಿರಿಗೆ ಲಾಭವಿಲ್ಲ. ಅರ್ಚಿಸಿ ಪೂಜಿಸಿ ಮಾಡಿ ನೀಡಿ ಮನ ಹೊಲ್ಲದಿರಬೇಕು. ಇದು ಪ್ರಸಿದ್ಧ, ನಾರಾಯಣಪ್ರಿಯ ರಾಮನಾಥನಲ್ಲಿ ಭಕ್ತನ ವಿಶ್ವಾಸಸ್ಥಲ.
--------------
ಗುಪ್ತ ಮಂಚಣ್ಣ