ಎನ್ನಾಧಾರಚಕ್ರಸ್ಥಾನದಲ್ಲಿ ಮೂರ್ತಿಗೊಂಡನಯ್ಯಾ ಬಸವಣ್ಣನು.
ಎನ್ನ ಸ್ವಾದಿಷಾ*ನಚಕ್ರಸ್ಥಾನದಲ್ಲಿ ಮೂರ್ತಿಗೊಂಡನಯ್ಯಾ ಚೆನ್ನಬಸವಣ್ಣನು.
ಎನ್ನ ಮಣಿಪೂರಕಚಕ್ರಸ್ಥಾನದಲ್ಲಿ ಮೂರ್ತಿಗೊಂಡನಯ್ಯಾ
ಘಟ್ಟಿವಾಳ ಮದ್ದಯ್ಯನು.
ಎನ್ನ ಅನಾಹತಚಕ್ರಸ್ಥಾನದಲ್ಲಿ ಮೂರ್ತಿಗೊಂಡನಯ್ಯಾ ಸಿದ್ಧರಾಮಯ್ಯನು.
ಎನ್ನ ವಿಶುದ್ಧಿಚಕ್ರಸ್ಥಾನದಲ್ಲಿಸ ಮೂರ್ತಿಗೊಂಡನಯ್ಯಾ
ಮರುಳಶಂಕರದೇವರು.
ಎನ್ನ ಆಜ್ಞಾಚಕ್ರಸ್ಥಾನದಲ್ಲಿ ಮೂರ್ತಿಗೊಂಡನಯ್ಯಾ ಪ್ರಭುದೇವರು.
ಆಧಾರಕ್ಕಾಚಾರಲಿಂಗವಾದಾತ ಬಸವಣ್ಣ.
ಸ್ವಾಧಿಷಾ*ನಕ್ಕೆ ಗುರುಲಿಂಗವಾದಾತ ಚೆನ್ನಬಸವಣ್ಣ.
ಮಣಿಪೂರಕಕ್ಕೆ ಶಿವಲಿಂಗವಾದಾತ ಘಟ್ಟಿವಾಳ ಮದ್ದಯ್ಯ.
ಅನಾಹತಕ್ಕೆ ಜಂಗಮಲಿಂಗವಾದಾತ ಸಿದ್ಧರಾಮಯ್ಯ.
ವಿಶುದ್ಧಿಗೆ ಪ್ರಸಾದಲಿಂಗವಾದಾತ ಮರುಳಶಂಕರದೇವರು.
ಆಜ್ಞೆಗೆ ಮಹಾಲಿಂಗವಾದಾತ ಪ್ರಭುದೇವರು.
ನಿಃಕಳಂಕ ಕೂಡಲ [ಚೆನ್ನ]ಸಂಗಮದೇವಾ,
ನಿಮ್ಮ ಶರಣರ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.