ಅಂಗಕ್ಕೊಂದು ಸುಗುಣ ದುರ್ಗುಣ ಸೋಂಕುವಲ್ಲಿ
ಸೋಂಕಿದ ಕಲೆ ಅಂಗಕ್ಕೋ ಆತ್ಮಂಗೋ ?
ಅಂಗಕ್ಕೆಂದಡೆ ಚೇತನವಿಲ್ಲದೆ ಒಂದನೂ ಮುಟ್ಟದಾಗಿ,
ಆತ್ಮಂಗೆಂದಡೆ ಒಂದು ಲಕ್ಷ್ಯದ ಮರೆಯಲಲ್ಲದೆ ಲಕ್ಷಿಸಿಕೊಳದು.
ಇಂತೀ ಕಾಯವೂ ಆ[ತ್ಮ]ನೂ ಒಡಗೂಡಿ ಅರಿವಲ್ಲಿ
ಆ ಅರಿವು ಲಿಂಗವನೊಡಗೂಡಿಯಲ್ಲದೆ ಬೇರೆ ಒಡಲುವಿಡಿಯದು.
ಇಂತೀ ಅಂಗ ಆತ್ಮ ಲಿಂಗಮೂರ್ತಿ ತ್ರಿವಿಧ ಸಂಗವಾದಲ್ಲದೆ
ಮುಂದಣ ಅರಿವಿನ ಕುರುಹು ನಿರಿಗೆಯಾಗದು.
ಆ ನಿರಿಗೆಯ ಅಂಗ ಸುಸಂಗವಾದಲ್ಲಿ ಭೋಗಬಂಕೇಶ್ವರಲಿಂಗವು ಅಂಗಸೋಂಕಿನಲ್ಲಿ
ಅಡಗಿದ ತೆರ.