ಅಥವಾ
(72) (27) (20) (4) (23) (10) (0) (0) (10) (5) (2) (14) (3) (1) ಅಂ (17) ಅಃ (17) (107) (1) (34) (2) (0) (10) (0) (23) (0) (0) (0) (0) (1) (0) (0) (39) (0) (11) (4) (48) (42) (1) (39) (52) (58) (3) (11) (0) (18) (22) (9) (0) (49) (46) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಧರೆ ಸಲಿಲ ಅನಲ ಅನಿಲ ಆಕಾಶ ಮುಂತಾದ ಭೇದಂಗಳ ಕಲ್ಪಿಸುವಲ್ಲಿ, ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವಮೂರ್ತಿಗಳು ಕುರುಹುಗೊಂಬಲ್ಲಿ, ನಾದಬಿಂದುಕಳೆ ಲಕ್ಷಿಸುವಲ್ಲಿ, ಆ ಪರಶಿವತತ್ವದ ಅಂಗ ಗುರುರೂಪಾಗಿ, ಆ ಪರತತ್ವದ ಅಂಗ ಲಿಂಗವಾಗಿ, ಆ ಪರತತ್ವದ ಅಂಗ ಜಂಗಮವಾಗಿ, ಆ ಜಂಗಮ ಲಿಂಗದಲ್ಲಿ ಲೀಯವಾಗಿ, ಆ ಲಿಂಗ ಗುರುವಿನಲ್ಲಿಲೀಯವಾಗಿ, ಆ ಗುರು ಉಭಯಸ್ಥಲವ ಗಬ್ರ್ಥೀಕರಿಸಿ, ಗುರುವೆಂಬ ಭಾವ ತನಗಿಲ್ಲದೆ ತರು ಫಲವ ಹೊತ್ತಂತೆ, ಫಲ ರಸವ ಇಂಬಿಟ್ಟುಕೊಂಡಂತೆ, ಅಂಗಕ್ಕೆ ಆತ್ಮತೇಜವರತು, ಭಾವಕ್ಕೆ ಬ್ಥೀಷ್ಮ ನಿಂದು, ಮನ ಮಹವನೊಡಗೂಡಿದಲ್ಲಿ, ಆತ ಸದ್ಗುರುಮೂರ್ತಿಯ ಕರದಲ್ಲಿ ಬಂದ ಲಿಂಗ, ಕರ್ಣದಲ್ಲಿ ಹೇಳಿದ ಮಂತ್ರ, ಕಪಾಲವ ಮುಟ್ಟಿದ ತಂತ್ರ. ಆದು ಸದ್ಗುರು ಕಾರುಣ್ಯ, ಆ ಶಿಷ್ಯಂಗೆ ಜೀವನ್ನುಕ್ತಿ. ಇದು ಆಚಾರ್ಯಮತ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಧರೆಯ ಮೇಲಣ ಮರದಲ್ಲಿ, ಹಿರಿದಿಹ ಕೊಂಬಿನ ತುದಿಯಲ್ಲಿ, ಅರಿಬಿರಿದಿನ ಪಕ್ಷಿ ಬಂದಿತ್ತು ನೋಡಾ. ಆ ಪಕ್ಷಿಯ ವರ್ಣ, ಹಾರುವ ರಟ್ಟೆ ಕೆಂಪು, ತೋರಿಹ ರಟ್ಟೆ ಕಪ್ಪು. ಮೀರಿಹ ರಟ್ಟೆಯ ತುಟ್ಟತುದಿಯಲ್ಲಿ ನಾನಾ ವರ್ಣದ ಬಣ್ಣ. ಆ ಹಕ್ಕಿಯ ಗಳದಲ್ಲಿ ಹೇಮವರ್ಣ, ಆ ಹಕ್ಕಿಯ ತುದಿಯಲ್ಲಿ ಧವಳವರ್ಣ. ಆ ಹಕ್ಕಿಯ ಹಾರುವ ರಟ್ಟೆಯ ಕಳೆದು, ತೋರಿಹ ರಟ್ಟೆಯ ಮುರಿದು, ಮೀರಿಹ ರಟ್ಟೆ[ಯ] ಬೆಂದು, ಕೊರಳಿನ ಹಳದಿ, [ಹಾರಿ], ಕೊಕ್ಕಿನ ಬೆಳ್ಪು ನಿಃಪತಿಯಾಗಿ, ನಿಃಕಳಂಕ ಮಲ್ಲಿಕಾರ್ಜುನ ಸತ್ತನೊ.
--------------
ಮೋಳಿಗೆ ಮಾರಯ್ಯ
ಧರೆ ನೀರ ಕುಡಿದಲ್ಲಿ, ಉರಿ ಶಿಲೆ ಮರನ ಸುಡುವಲ್ಲಿ, ಜಲ ಉರಿ ನಿಲುವುದಕ್ಕೆ ಒಡಲುಂಟೆ ? ನೆರೆ ಅರಿದ ಅರಿವು ಮರೆದು ಮತ್ತೆ ಬೇರೊಬ್ಬ ಅರಿವನುಂಟೆ ? ಆ ತೆರ ದರಿಸಿನವನರಿದಲ್ಲಿ, ಪ್ರಾಣಲಿಂಗಸಂಬಂಧ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಧಾನ್ಯವ ಹೊಯ್ದಿದ್ದ ಘಟ, ಅಳತೆಗೆ ಬಪ್ಪುದೆ, ಆ ಧಾನ್ಯವಲ್ಲದೆ ? ಘಟ ಕರ್ಮವನುಂಬುದೆ, ಆತ್ಮನಲ್ಲದೆ ? ಹೆಪ್ಪಿಗೆ ರುಚಿ ಉಂಟೆ, ಮಧುರಕ್ಕಲ್ಲದೆ ? ಅವು ಒಂದೊಂದೆಡೆಯಿಪ್ಪ ಸ್ವಸ್ಥಾನವಲ್ಲವೆ ? ಆ ಸ್ವಸ್ಥಾನವ ನಿಶ್ಚಿಯಿಸಿ ಅರಿದಲ್ಲಿ ಐಕ್ಯಾನುಭಾವ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ