ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಚ್ಚ ಶರಣರು ನಿಮ್ಮ ನಿಚ್ಚ ನೆನೆವರು, ಬಚ್ಚ ಬರಿಯ ಮಾತನಾಡುವೆನು. ಒಪ್ಪಚ್ಚಿ ಅರೆಭಕ್ತಿ, ನೆನೆಯಲೀಯದು ನಿಮ್ಮ. ಮೆಚ್ಚರು ನಿಮ್ಮವರು ಎನ್ನನು ಕೂಡಲಸಂಗಮದೇವಾ.
--------------
ಬಸವಣ್ಣ
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾುತ್ತಯ್ಯಾ, ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಮನ ಹಾಳಾುತ್ತಯ್ಯಾ, ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಕರ್ಮಛೇದನವಾುತ್ತಯ್ಯಾ, ನಿಮ್ಮವರು ಅಡಿಗಡಿಗೆ ಹೇಳಿ ಭಕ್ತಿಯೆಂಬೀ ಒಡವೆಯನು ದಿಟವ ಮಾಡಿ ತೋರಿದರು ಕಾಣಾ, ಕೂಡಲಸಂಗಮದೇವಾ. 509
--------------
ಬಸವಣ್ಣ
ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯಾ, ಭೂಮಿಯಾಧಾರದಲ್ಲಿ ವೃಕ್ಷ ನೀರುಂಬುದಯ್ಯಾ, ಜಂಗಮವಾಪ್ಯಾಯನವಾದಡೆ ಲಿಂಗ ಸಂತ್ಟುಯಹುದಯ್ಯಾ. ವೃಕ್ಷಸ್ಯ ವದನಂ ಭೂಮಿಃ ಸ್ಥಾವರಸ್ಯ ಚ ಜಂಗಮಃ ಅಹಂ ತುಷ್ಟೋsಡಿಸ್ಮ್ಯುಮಾದೇವಿ ಉಭಯೋರ್ಲಿಂಗಜಂಗಮಾತ್ ಇದು ಕಾರಣ ಕೂಡಲಸಂಗಮದೇವರಲ್ಲಿ ಜಂಗಮವಾಪ್ಯಾಯನವಾದಡೆ ಲಿಂಗಸಂತ್ಟು. 197
--------------
ಬಸವಣ್ಣ
ಅಷ್ಟವಿಧಾರ್ಚನೆ ಷೋಡಶೋಪಚಾರವ ಅಂದಂದಿನ ಕೃತ್ಯವ ಅಂದಂದಿಗೆ ಆನು ಮಾಡಿ ಶುದ್ಧನಯ್ಯಾ. ಹಂಗು ಹರಿಯಿಲ್ಲದ ಕಾರಣ, ಕೂಡಲಸಂಗಮದೇವ ನಿಷ್ಫಲದಾಯಕನಾಗಿ ಆನು ಮಾಡಿ ಶುದ್ಧನಯ್ಯಾ.
--------------
ಬಸವಣ್ಣ
ಅಳಿವನಲ್ಲ, ಉಳಿವನಲ್ಲ, ಪ್ರಳಯವೆಂಬುದ ಮುನ್ನರಿಯನು, ಕಳಾಕುಳರಹಿತನು, ಉಭಯಕುಳರಹಿತನು, ಅರಿವ ಬೈಚಿಟ್ಟು ಮೆರೆವ ಗಮನನಲ್ಲ. ಕೂಡಲಸಂಗಯ್ಯನೆಂಬ ಶಬ್ದಮುಗ್ಧನ ಭಾವದ ಬಳಕೆಯಲ್ಲಿ ಗೆಲಬುಹದೆ ಹೇಳಾ
--------------
ಬಸವಣ್ಣ
ಅಡ್ಡದೊಡ್ಡ ನಾನಲ್ಲಯ್ಯಾ, ದೊಡ್ಡ ಬಸುರನಲ್ಲಯ್ಯಾ, ದೊಡ್ಡವರನಲ್ಲದೆ ನಿಮ್ಮ ಶರಣರು ಮನ್ನಿಸರಯ್ಯಾ. ಹಡೆದುಂಬ ಸೂಳೆಯಂತೆ ಧನವುಳ್ಳವರನರಸಿ ಅರಸಿ ಬೋದ್ಥಿಸಲು, ಪ್ರಾರ್ಥಿಸಲು ಮುನ್ನ ನಾನರಿಯೆನಯ್ಯಾ, ದೊಡ್ಡತನವೆನಗಿಲ್ಲಯ್ಯಾ, ಅಂಜುವೆನಂಜುವೆ ನಿಮ್ಮ ಪ್ರಮಥರಿಗೆ. ಅನಾಥ ನಾನಯ್ಯಾ, ಕೂಡಲಸಂಗಮದೇವಾ. 413
--------------
ಬಸವಣ್ಣ
ಅಸಮಾಕ್ಷಲಿಂಗಕ್ಕೆ ಅನ್ಯದೈವವ ಸರಿಯೆಂಬವನ ಬಾಯಲ್ಲಿ ಮಸೆದ ಕೂರಲಗನಿಕ್ಕದೆ ಮಾಬನೆ ಹುಸಿಯಾಗಿ ನುಡಿವವನ ನಾಯಾಗಿ ಬಗುಳಿಸನೆ ಹಿರಿಯರುತ್ತಮರೆನ್ನದವರ ಕುದುರೆಯಾಗಿ ಕಟ್ಟಿಸನೆ ಗುರುಲಘುವೆನ್ನದವರ ಬಾಯಲ್ಲಿ ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ ಪರಸ್ತ್ರೀಗಳುಪಿದವರ ಗಾಣದಲಿಕ್ಕಿ ಹಿಳಿಯನೆ ಪರಧನಕ್ಕಳುಪಿದವರ ಹಿಡಿ ಖಂಡವ ಕೊಯ್ಯನೆ ಎಲೆ ಕೂಡಲಸಂಗಮದೇವಾ, ನಿಮ್ಮ ಹೇಳಿದ ಹೇಳಿಕೆಯಿಂದ ಪಿಂಬೇರ ಮೈ[ಲುಗ] ಮೇಳವಾಡುತ ಇದ್ದ ಕಾಣಾ, ತೃಜಗದೊಳಗೆ.
--------------
ಬಸವಣ್ಣ
ಅಂದಂದಿನ ಹೊದ್ದಿಗೆಯ ಬಿಂದುಮಾತ್ರದಲಾದ ಅಂದವ ಕೆಡಿಸಲರಿಯದ ಅಂಧಕರ ನೋಡಾ. ಸಮರಸವಿಲ್ಲದೆ ನೆರಹಿ ಮಾಡಿ, ಭಕ್ತರಾದೆವೆಂಬವರನೇನೆಂಬೆ ಆಚಾರವಂಚಕರ ಎನಗೆ ತೋರದಿರು ಕೂಡಲಸಂಗಮದೇವಾ, ನಿಮ್ಮ ಧರ್ಮ !
--------------
ಬಸವಣ್ಣ
ಅದ್ವೈತವ ಅಂತರಂಗದಲ್ಲಿ ಅರಿದು ಹೊರಗೆ ದಾಸೋಹವ ಮಾಡದಿರ್ದಡೆ ಎಂತಯ್ಯಾ ಉಭಯ ಸಂದೇಹದಲ್ಲಿ ನಿಜವಪ್ಪುದು ನಿಮ್ಮ ಶರಣರ ಮನ ನೊಂದಲ್ಲಿ ನಾನು ಸೈರಿಸಿಕೊಂಬೆನೆಂತಯ್ಯಾ ಕೂಡಲಸಂಗಮದೇವಾ, ಹಾವು ಸಾಯದೆ ಕೋಲು ನೋಯದಂತೆ ಮಾಡಾ, ನಿಮ್ಮ ಧರ್ಮ.
--------------
ಬಸವಣ್ಣ
ಅರಿವು ಮರವೆಯೊಳಡಗಿ, ಮರವೆ ಅರಿವಿನೊಳಡಗಿ, ತೆರಹಿಲ್ಲದಿರ್ದೆನೆಂಬ ಹಮ್ಮಿದೇನೋ, ಹಮ್ಮಿದೇನೋ ಬ್ರಹ್ಮಾದ್ ಬ್ರಹ್ಮವ ನುಂಗಿ, ಮತ್ತಾ ಪರಬ್ರಹ್ಮನು ತಾನೆಂದೆಂಬ ಹಮ್ಮಿದೇನೊ, ಹಮ್ಮಿದೇನೊ ಆದಿ ಶೂನ್ಯವು ಶೂನ್ಯ, ಮಧ್ಯ ಶೂನ್ಯವು ಶೂನ್ಯ, ಅಂತ್ಯ ಶೂನ್ಯವು ಶೂನ್ಯ, ಶೂನ್ಯವಾದ ಬಳಿಕ ಅಲ್ಲಿಂದತ್ತ ನಿಂದ ನಿಲವನಾರು ಬಲ್ಲರು ಹೇಳಾ ಬಯಲು ಚಿತ್ರಿಸಿದ ಚಿತ್ರವನಾ ಬಯಲರಿಯದಂತೆ ಕೂಡಲಸಂಗಮದೇವಾ, ನಿಮ್ಮ ಶರಣರ ನಿಲವು.
--------------
ಬಸವಣ್ಣ
ಅಗಳೂ ಲೋಗರ ಮನೆಯ ಬಾಗಿಲ ಕಾಯ್ದುಕೊಂಡಿಪ್ಪವು ಕೆಲವು ದೈವಂಗಳು. ಹೋಗೆಂದಡೆ ಹೋಗವು, ನಾಯಿಗಿಂದ ಕರಕಷ್ಟ ಕೆಲವು ದೈವಂಗಳು. ಲೋಗರ ಬೇಡಿಕೊಂಡುಂಬ ದೈವಂಗಳು ತಾವೇನ ಕೊಡುವವು ಕೂಡಲಸಂಗಮದೇವಾ
--------------
ಬಸವಣ್ಣ
ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ ಲೆಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾ ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ ನಿಮ್ಮ ಅಂಕೆಗೆ ಝಂಕೆಗೆ ಶಂಕಿತನಾದಡೆ ಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ.
--------------
ಬಸವಣ್ಣ
ಅಷ್ಟತನುಮೂರ್ತಿ ಲಿಂಗವೆಂದೆಂಬರು ಕೇಳಿರಯ್ಯಾ: ಆದಿಯ ಮಗ ಅತೀತ, ಅತೀತನ ಮಗ ಆಕಾಶ, ಆಕಾಶನ ಮಗ ವಾಯು, ವಾಯುವಿನ ಮಗ ಅಗ್ನಿ, ಅಗ್ನಿಯ ಮಗ ಅಪ್ಪು, ಅಪ್ಪುವಿನ ಮಗ ಪೃಥ್ವಿ, ಪೃಥ್ವಿಯಿಂದ ಸಕಲ ಜನನವು. ಮನಸಿನ ಮಗ ಚಂದ್ರ, ನಯನದ ಮಗ ಸೂರ್ಯ, ದೇಹದ ಮಗನಾತ್ಮ, ಇಂತೀ ಅಷ್ಟತನುವೆಲ್ಲಕ್ಕೆಯು ಉತ್ಪತ್ಯವುಂಟು. ಉತ್ಪತ್ಯರಹಿತ ಅಯೋನಿಜ ಶೂನ್ಯನಿರಾಳ ನಮ್ಮ ಕೂಡಲಸಂಗಮದೇವಂಗೆ ಮಾತಾಪಿತರಿಲ್ಲ.
--------------
ಬಸವಣ್ಣ
ಅಂಜಿದಡೆ ಮಾಣದು, ಅಳುಕಿದಡೆ ಮಾಣದು, ವಜ್ರಪಂಜರದೊಳಗಿದ್ದಡೆ ಮಾಣದು, ತಪ್ಪದುವೋ ಲಲಾಟಲಿಖಿತ. ಕಕ್ಕುಲತೆಗೆ ಬಂದಡೆ ಆಗದು ನೋಡಾ. ಧೃತಿಗೆಟ್ಟು, ಮನ ಧಾತುಗೆಟ್ಟಡೆ ಅಪ್ಪುದು ತಪ್ಪದು, ಕೂಡಲಸಂಗಮದೇವಾ.
--------------
ಬಸವಣ್ಣ
ಅರ್ಥ ಪ್ರಾಣ ಅಬ್ಥಿಮಾನಕ್ಕೆ ಒಡೆಯರು ಸದ್‍ಭಕ್ತರಲ್ಲದೆ ಎನಗಾರೂ ಇಲ್ಲಯ್ಯಾ. `ಭೃತ್ಯಾಪರಾಧಃ ಸ್ವಾಮಿನೋ ದಂಡಃ ಕೂಡಲಸಂಗಮದೇವಾ, ನೀವೇ ಪ್ರಮಾಣು. 341
--------------
ಬಸವಣ್ಣ
ಅವರ ನಡೆಯೊಂದು ನುಡಿಯೊಂದಾದಡೆ ಶಿವಾಚಾರಕ್ಕವರು ಸಲ್ಲರಯ್ಯಾ ! ಬಲ್ಲನು, ಸಾತ್ವಿಕರಲ್ಲದವರನೊಲ್ಲನು. ಶಿವಾಚಾರವ ಬಲ್ಲನು, ಅಲ್ಲಿ ನಿಲ್ಲನು. ಪ್ರಪಂಚಿಯ ಮನವನೊಲ್ಲನು ಕೂಡಲಸಂಗಮದೇವನು.
--------------
ಬಸವಣ್ಣ
ಅರ್ಥ ಪ್ರಾಣ ಅಭಿಮಾನದಲ್ಲಿ ವಂಚನೆುಲ್ಲದಿಹುದೆ ಭಕ್ತಿ, ಹೆಚ್ಚು ಕುಂದಿಲ್ಲದಿಹುದೆ ಸಮಯಾಚಾರ, ಜಂಗಮವೆ ಲಿಂಗವೆಂಬುದಕ್ಕೆ ಏನು ಗುಣ ಮನದ ಲಂಪಟತನ ಹಿಂಗದಾಗಿ ಒಡೆಯರ ಬರವಿಂಗೆ ಕುನ್ನಿ ಬಾಲವ ಬಡಿದಡೆ ವೆಚ್ಚವೇನು ಹತ್ತುವುದು ಕೂಡಲಸಂಗಮದೇವಾ 217
--------------
ಬಸವಣ್ಣ
ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು, ಪುರುಷನ ಒಲವಿಲ್ಲದ ಲಲನೆಯಂತೆ ಆನಿದ್ದೇನಯ್ಯಾ. ವಿಭೂತಿಯನೆ ಹೂಸಿ, ರುದ್ರಾಕ್ಷಿಯನೆ ಕಟ್ಟಿ, ಶಿವ ನಿಮ್ಮ ಒಲವಿಲ್ಲದಂತೆ ಆನಿದ್ದೇನಯ್ಯಾ. ಕೆಟ್ಟು ಬಾಳುವರಿಲ್ಲ ಎಮ್ಮವರ ಕುಲದಲ್ಲಿ, ನೀನೊಲಿದಂತೆ ಸಲಹಯ್ಯಾ, ಕೂಡಲಸಂಗಮದೇವಾ. 270
--------------
ಬಸವಣ್ಣ
ಅಷ್ಟದಳ ಕಮಲವ ಸುತ್ತುವ ಜೀವಾತ್ಮನ ಮೆಟ್ಟಿದ ದಳವನರಿಯದೆ, ಆನು ಭಕ್ತನೆಂತೆಂಬೆ ! ಆನು ಶರಣನೆಂತೆಂಬೆ ! ಆನು ಲಿಂಗೈಕ್ಯನೆಂತೆಂಬೆ ಕೂಡಲಸಂಗಮದೇವಾ ಎನ್ನ ಮನವು ಸಮಾಧಾನವಾಗದನ್ನಕ್ಕ
--------------
ಬಸವಣ್ಣ
ಅಳವಡಿಸಿದ ಪದಾರ್ಥ ಅರ್ಪಿತಕ್ಕೆ ಸರಿಯಾಯಿತ್ತು, ಅಳವಡಿಸದ ಮುನ್ನವೆ ಕೈಕೊಳ್ಳುತ್ತೈದಾನೆ ಶಿವನು, ಸಂದ ಪದಾರ್ಥ ಸಲ್ಲಲಿ. ಕೂಡಲಸಂಗಮದೇವರ ಆರೋಗಣೆಯ ಅವಸರಕ್ಕೆ ಸಂಚಿತ ಸಯದಾನವ ತೆಗೆಸಿರೆ, ಸೊಡ್ಡಳ ಬಾಚರಸೆರೆ.
--------------
ಬಸವಣ್ಣ
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾಯಿತ್ತಯ್ಯಾ, ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಮನ ಹಾಳಾಯಿತ್ತಯ್ಯಾ, ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಕರ್ಮಛೇದನವಾಯಿತ್ತಯ್ಯಾ, ನಿಮ್ಮವರು ಅಡಿಗಡಿಗೆ ಹೇಳಿ ಭಕ್ತಿಯೆಂಬೀ ಒಡವೆಯನು ದಿಟವ ಮಾಡಿ ತೋರಿದರು ಕಾಣಾ, ಕೂಡಲಸಂಗಮದೇವಾ.
--------------
ಬಸವಣ್ಣ
ಅರ್ಚಿಸಲರಿಯೆ, ಪೂಜಿಸಲರಿಯೆ, ನಿಚ್ಚ ಶಿವರಾತ್ರಿಯ ನಾ ಮಾಡಲರಿಯೆ. ಕಪ್ಪಡಿವೇಷದಿಂದಾನು ಬಂದಾಡುವೆ, ಕಪ್ಪಡಿವೇಷದಿಂದ. ಈಶ ನಾ ನಿಮ್ಮ ದಾಸರ ದಾಸಿಯ ದಾಸನಯ್ಯಾ, ನಿಮ್ಮ ವೇಷಧಾರಿಯ ಮನೆಯ ಪಂಗುಳ ನಾನಯ್ಯಾ, ಕೂಡಲಸಂಗಮದೇವಾ ನಿಮ್ಮ ಲಾಂಛನ ಧರಿಸಿಪ್ಪ ಉದರಪೋಷಕ ನಾನಯ್ಯಾ. 342
--------------
ಬಸವಣ್ಣ
ಅರಸರು ಮಂಚಕ್ಕೆ ಬರಿಸಿ, ಎನ್ನ ಬೆರಸಿದ ಬಳಿಕ ಆನು ಅಂಜುವಳೇ ಆನು ಸಿರಿಯಕ್ಕನೇ. ಪರುಷ ಮುಟ್ಟಿದ ಬಳಿಕ ಲೋಹವೇ ಕೂಡಲಸಂಗಮದೇವ, ಎನ್ನನೊಲ್ಲದಡಾನು ಬದುಕುವೆನೆ
--------------
ಬಸವಣ್ಣ
ಅಯ್ದುದೇ ಬ್ರಹ್ಮನ ಕಪಾಲ ಕರದಲ್ಲಿ, ಅಯ್ದುದೇ ವಿಷ್ಣುವಿನ ನಯನ ಪಾದದಲ್ಲಿ, ಅಯ್ದುದೇ ಕಾಮನ ಸುಟ್ಟ ಭಸ್ಮ ಮೈಯ ಮೇಲೆ, ಮುಖ ಮೂದಲೆಯೇಕಯ್ಯಾ, ಕೂಡಲಸಂಗಮದೇವಾ.
--------------
ಬಸವಣ್ಣ
ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ, ಅರಿಯಲಿಲ್ಲದ ಮರೆಯಲಿಲ್ಲದ ನಿಜವು ನಿಂದಿತ್ತಾಗಿ, ನಿರ್ನಾಮವಾಯಿತ್ತು, ನಿಃಪತಿಯಾಯಿತ್ತು, ಅಗಮ್ಯದಲ್ಲಿ ಗಮನ ಕೆಟ್ಟಿತ್ತು, ನಿಂದಲ್ಲಿ ನಿರಾಳವಾಯಿತ್ತು, ಕೂಡಲಸಂಗಮದೇವರಲ್ಲಿ ಶಬ್ದಮುಗ್ಧವಾಯಿತ್ತು.
--------------
ಬಸವಣ್ಣ

ಇನ್ನಷ್ಟು ...