ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ತೊತ್ತಿನ ಕೊರಳಲ್ಲಿ ಹೊಂಬಿತ್ತಾಳೆಯ ಸಿಂಗಾರವ ಮಾಡಿದಂತೆ ಕುಚಿತರ ಸಂಗ, ಸುಸಂಗಿಗೆ ಸಂಗಡವಿಲ್ಲ ! ಗುರುಗುಂಜಿ ಮಾಣಿಕಕ್ಕೆ ಸರಿಯಪ್ಪುದೆ, ಕೂಡಲಸಂಗಮದೇವಾ
--------------
ಬಸವಣ್ಣ
ತಂದೆ ಮಕ್ಕಳಿಗೆ ಬುದ್ಧಿಯ ಹೇಳುವಲ್ಲಿ ತಪ್ಪಿಂಗೆ ಮುನಿವನಲ್ಲದೆ ಪ್ರಾಣಕ್ಕೆ ಮುನಿಯ. ಲಿಂಗವಂತನು ಲಿಂಗವಂತರಿಗೆ ಬುದ್ಧಿಯ ಹೇಳುವಲ್ಲಿ ಅವಗುಣಕ್ಕೆ ಮುನಿವನಲ್ಲದೆ ಲಾಂಛನಕ್ಕೆ ಮುನಿಯ. ಲಿಂಗಭಕ್ತನು ಲಿಂಗಪಥವ ಹೇಳಿದಡೆ ಮಚ್ಚರಿಸುವರ ಮೆಚ್ಚ ಕೂಡಲಸಂಗಮದೇವ.
--------------
ಬಸವಣ್ಣ
ತನುಸಾರಾಯರ ಮನಸಾರಾಯರ ಜ್ಞಾನಸಾರಾಯರ ತೋರಯ್ಯಾ, ನಿಮ್ಮ ಧರ್ಮ. ಭಾವಸಾರಾಯರ ಭಕ್ತಿಸಾರಾಯರ ತೋರಯ್ಯಾ, ನಿಮ್ಮ ಧರ್ಮ. ಕೂಡಲಸಂಗಮದೇವಯ್ಯಾ ನಿಮ್ಮನರಿಯದ ಅವಗುಣಿಗಳ ತೋರದಿರಯ್ಯಾ, ನಿಮ್ಮ ಧರ್ಮ. 512
--------------
ಬಸವಣ್ಣ
ತನುವಿಡಿದಿಹುದು ಪ್ರಕೃತಿ, ಪ್ರಕೃತಿವಿಡಿದಿಹುದು ಪ್ರಾಣ, ಪ್ರಾಣವಿಡಿದಿಹುದು ಜ್ಞಾನ, ಜ್ಞಾನವಿಡಿದಿಹುದು ಗುರು. ಇಂತೀ ಗುರುಲಿಂಗಜಂಗಮಪ್ರಸಾದವ ಸಗುಣವೆಂದು ಹಿಡಿದು ನಿರ್ಗುಣವೆಂದು ಕಂಡ ಸಂದೇಹಿ ವ್ರತಗೇಡಿಗಳನೇನೆಂಬೆ ಅಂತವರ ಮುಖವ ತೋರದಿರು ಕೂಡಲಸಂಗಮದೇವಾ.
--------------
ಬಸವಣ್ಣ
ತನುಮನಧನವೆಂಬ ಕನ್ನಡಿ ನೋಡಿಯ್ಯಾ, ಎನ್ನದೂ ಅಲ್ಲ, ನಿನ್ನದೂ ಅಲ್ಲ, ಬರಿಯ ಭ್ರಮೆಯ ಮಾತು. ಆ ಭ್ರಮೆಗೊಳಗಾಗೆ, ನಿಮ್ಮ ಶ್ರೀಚರಣವ ಬಿಡೆ, ಕೂಡಲಸಂಗಮದೇವಾ.
--------------
ಬಸವಣ್ಣ
ತೊತ್ತಿಂಗೆ ಲಕ್ಷಣವೇಕಯ್ಯಾ ಅವರೊಕ್ಕುದನುಂಡು ಮಿಕ್ಕುದ ಕಾ್ದುಪ್ಪುದು. ಸಾರೆ ಹೊರಸೇಕೆ, ಅವಳಿಗೆ ಮಾರುತ್ತರವೇಕೆ ಕೂಡಲಸಂಗನ ಶರಣರೊಡನೆ ಇದಿರುತ್ತರವೇಕೆ ಸಿಂಬಕಂಗೆ 468
--------------
ಬಸವಣ್ಣ
ತನುವ ನೋುಸಿ, ಮನವ ಬಳಲಿಸಿ, ನಿಮ್ಮ ಪಾದವಿಡಿದವರೊಳರೆ ಈ ನುಡಿ ಸುಡದಿಹುದೆ ಕೂಡಲಸಂಗಮದೇವಾ, ಶಿವಭಕ್ತರ ನೋವೇ ಅದು ಲಿಂಗದ ನೋವು. 407
--------------
ಬಸವಣ್ಣ
ತಂದೆ ನೀನು ತಾಯಿ ನೀನು, ಬಂಧು ನೀನು ಬಳಗ ನೀನು. ನೀನಲ್ಲದೆ ಮತ್ತಾರೂ ಇಲ್ಲಯ್ಯಾ, ಕೂಡಲಸಂಗಮದೇವಾ, ಹಾಲಲದ್ದು, ನೀರಲದ್ದು. 481
--------------
ಬಸವಣ್ಣ
ತನ್ನಾಶ್ರಯದ ರತಿಸುಖವನು, ತಾನುಂಬ ಊಟವನು ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ ತನ್ನ ಲಿಂಗಕ್ಕೆ ಮಾಡುವ ನಿತ್ಯನೇಮವ ತಾ ಮಾಡಬೇಕಲ್ಲದೆ ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ ಕೆಮ್ಮನೆ ಉಪಚಾರಕ್ಕೆ ಮಾಡುವರಲ್ಲದೆ ನಿಮ್ಮನೆತ್ತಬಲ್ಲರು, ಕೂಡಲಸಂಗಮದೇವಾ. 183
--------------
ಬಸವಣ್ಣ
ತೊಂಡಿಲ ಮುಡಿದುಕೊಂಡು ತಮ್ಮ ತಮ್ಮ ಗಂಡರ ಹಿಂದುಗೊಂಡು ನಾಡ ಮಿಂಡರ ನೋಡುತ್ತಲಿ, ಇಂದು ನಮ್ಮ ಹುಲಿ ಹೋಯಿತ್ತು ಬನ್ನಿರೆ. ಗಂಡರ ಗಂಡನವ್ವಾ ಕೂಡಲಸಂಗ, ಕಂಡಡೆ ಮೂಗ ಕೊಯಿವಾ.
--------------
ಬಸವಣ್ಣ
ತನು ಮನ ಧನವ ಹಿಂದಿಕ್ಕಿಕೊಂಡು ಮಾತಿನ ಬಣಬೆಯ ಮುಂದಿಟ್ಟುಕೊಂಡು ಒಳಲೊಟೆಯ ನುಡಿವವರು ನೀವೆಲ್ಲರೂ ಕೇಳಿರೆ. ತಲಹಿಲ್ಲದ ಕೋಲು ಹೊಳ್ಳು ಹಾರುಹುದಲ್ಲದೆ ಗುರಿಯ ತಾಗಬಲ್ಲುದೆ ಮಾಯಾಪಾಶ ಹಿಂಗಿ, ಮನದ ಗಂಟು ಬಿಡದನ್ನಕ್ಕ ಕೂಡಲಸಂಗಮದೇವನೆಂತೊಲಿವನಯ್ಯಾ 202
--------------
ಬಸವಣ್ಣ
ತತ್ವವನರಿದೆಹೆನೆಂದು ಮೃತ್ಯುವ ಕರೆಕೊಂಡೆನಯ್ಯಾ. ನಾನೆತ್ತ ಬಲ್ಲೆ ನಿಮ್ಮ ಶರಣರಂತುವನು ನಾನೆತ್ತ ಬಲ್ಲೆ ನಿಮ್ಮ ಪ್ರಮಥರಂತುವನು ಸರ್ವಾಪರಾಧಿ ನಾನು. ಎನ್ನ ಮನದ ಕೊನೆಯ ಸೂತಕ ಹಿಂಗದು, ಕೂಡಲಸಂಗಮದೇವಾ. 327
--------------
ಬಸವಣ್ಣ
ತೊತ್ತಿಂಗೆ ಬಲ್ಲಹನೊಲಿದಡೆ ಪದವಿಯ ಮಾಡದೆ ಮಾಬನೆ ಜೇಡರ ದಾಸಯ್ಯಂಗೊಲಿದಾತ ಮತ್ತೊಬ್ಬ ದೇವನೆ, ಅಯ್ಯಾ ಮಾದಾರ ಚೆನ್ನಯ್ಯಂಗೆ, ಡೋಹರ ಕಕ್ಕಯ್ಯಂಗೆ, ತೆಲುಗು ಜೊಮ್ಮಯ್ಯಂಗೆ ಒಲಿದಾತ ಮತ್ತೊಬ್ಬ ದೇವನೆ, ಅಯ್ಯಾ ಎನ್ನ ಮನದ ಪಂಚೇಂದ್ರಿಯ ನಿಮ್ಮತ್ತಲಾದಡೆ ತನ್ನತ್ತ ಮಾಡುವ ಕೂಡಲಸಂಗಮದೇವಯ್ಯ. 476
--------------
ಬಸವಣ್ಣ