ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಬ್ರಾಹ್ಮಣನೆ ದೈವನೆಂದು ನಂಬಿದ ಕಾರಣ ಗೌತಮಮುನಿಗೆ ಗೋವೇಧೆಯಾಯಿತ್ತು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ಬಲಿಗೆ ಬಂಧನವಾಯಿತ್ತು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ಕರ್ಣನ ಕವಚ ಹೋಯಿತ್ತು ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ದಕ್ಷಂಗೆ ಕುರಿದಲೆಯಾಯಿತ್ತು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ಪರಶುರಾಮ ಸಮುದ್ರಕ್ಕೆ ಗುರಿಯಾದನು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ನಾಗಾರ್ಜುನನ ತಲೆ ಹೋಯಿತ್ತು. ದೇವಾ, ಭಕ್ತನೆಂದು ನಂಬಿದ ಕಾರಣ ನಮ್ಮ ಕೂಡಲಸಂಗನ ಶರಣರು ಕೈಲಾಸವಾಸಿಗಳಾದರು.
--------------
ಬಸವಣ್ಣ
ಬಿದಿರೆಲೆಯ ಮೆಲಿದಡೆ ಮೆಲಿದಂತಲ್ಲದೆ, ರಸವ ಹಡೆಯಲು ಬಾರದು, ಮಳಲ ಹೊಸೆದಡೆ ಹೊಸೆದಂತಲ್ಲದೆ, ಸರವಿಯ ಹಡೆಯಲುಬಾರದು. ನೀರ ಕಡೆದಡೆ ಕಡೆದಂತಲ್ಲದೆ, ಬೆಣ್ಣೆಯ ಹಡೆಯಲುಬಾರದು. ನಮ್ಮ ಕೂಡಲಸಂಗಮದೇವನಲ್ಲದೆ ಅನ್ಯದೈವಕ್ಕೆರಗಿದಡೆ ಹೊಳ್ಳ ಕುಟ್ಟಿ ಕೈ ಹೊಟ್ಟೆಯಾದಂತೆ ಆಯಿತ್ತಯ್ಯಾ.
--------------
ಬಸವಣ್ಣ
ಬನ್ನಿರೇ ಅಕ್ಕಗಳು, ಹೋಗಿರೇ ಆಲದ ಮರಕ್ಕೆ. ಕಚ್ಚುವುದೇ ನಿಮ್ಮ, ಚಿಪ್ಪಿನ ಹಲ್ಲುಗಳು. ಬೆಚ್ಚಿಸುವುವೇ ನಿಮ್ಮ, ಬಚ್ಚಣಿಯ ರೂಹುಗಳು. ನಮ್ಮ ಕೂಡಲಸಂಗಮದೇವನಲ್ಲದೆ ಪರದೈವಂಗಳು ಮನಕ್ಕೆ ಬಂದವೆ ಬಿಕ್ಕನೆ ಬಿರಿವ ದೈವಂಗಳು.
--------------
ಬಸವಣ್ಣ
ಬತ್ತೀಸಾಯುಧದಲಿ ಅಭ್ಯಾಸವ ಮಾಡಿದಡೇನು ಹಗೆಯ ಕೊಲುವಡೆ, ಒಂದಲಗು ಸಾಲದೆ ಲಿಂಗವ ಗೆಲುವಡೆ, `ಶರಣಸತಿ ಲಿಂಗವತಿಯೆಂಬಲಗು ಸಾಲದೆ ಎನಗೆ ನಿನಗೆ ಜಂಗಮಪ್ರಸಾದವೆಂಬ ಅಲಗು ಸಾಲದೆ ಕೂಡಲಸಂಗಮದೇವಾ.
--------------
ಬಸವಣ್ಣ
ಬಸುರ ಬಾಳುವೆಗೆ, ನಿಮ್ಮಲ್ಲಿ ಮಸಿಯ ಹೂಸಿ ನೇರಿಲಹಣ್ಣ ಮಾರುವಂತೆ, ಕಾಲ ಸಾಲ ದಾರಿದ್ರ್ಯಕ್ಕಂಜಿ ನಿಮ್ಮ ಮರೆಹೊಕ್ಕೆನಯ್ಯಾ. ಆವುದ ಹುಸಿಯೆಂಬೆ ಆವುದ ಕಿರಿದೆಂಬೆ ಇದ ನೀನೆ ಬಲ್ಲೆಯಯ್ಯಾ, ಕೂಡಲಸಂಗಮದೇವಾ, ನಾನು ಉದರಪೋಷಕನಯ್ಯಾ. 294
--------------
ಬಸವಣ್ಣ
ಬಸುರೆ ಬಾಯಾಗಿ, ಬಾಯಿ ಬಸುರಾಗಿಪ್ಪುದ ತೊಡೆದ, ಕಣ್ಣೆ ತಲೆಯಾಗಿ, ತಲೆಯೆ ಕಣ್ಣಾಗಿರಿಸಿದ, ಕಾಲೆ ಕೈಯಾಗಿ, ಕೈಯೆ ಕಾಲಾಗಿ ನಡೆಸಿದ, ನೆಳಲನುಟ್ಟು ಸೀರೆಯನೆನಗೆ ಉಡುಗೊರೆಯ ಕೊಟ್ಟನು, ಮಥನವಿಲ್ಲದ ಸಂಗಸುಖವನೆನಗೆ ತೋರಿದನು. ಕೂಡಲಸಂಗಮದೇವಾ, ಪ್ರಭುವಿನ ಶ್ರೀಪಾದಕ್ಕೆ ಶರಣೆನುತ್ತಿರ್ದೆನು.
--------------
ಬಸವಣ್ಣ
ಬಂದು ಬಲ್ಲಹ ಬಿಡಲು ಹೊಲೆಗೇರಿ ಎಂಬ ಹೆಸರೊಳವೆ ಅಯ್ಯಾ ಲಿಂಗವಿದ್ದವರ ಮನೆ ಕೈಲಾಸವೆಂದು ನಂಬಬೇಕು, ಚಾಂಡಾಲವಾಟಿಕಾಯಾಂ ವಾ ಶಿವಭಕ್ತಃ ಸ್ಥಿತೋ ಯದಿ ತತ್‍ಶ್ರೇಣಿಃ ಶಿವಲೋಕಸ್ಯ ತದ್ ಗೃಹಂ ಶಿವಮಂದಿರಮ್ ಎಂದುದಾಗಿ, ಲೋಕದ ಡಂಬಕರ ಮಾತು ಬೇಡ, ಕೂಡಲಸಂಗನಿದ್ದುದೇ ಕೈಲಾಸ.
--------------
ಬಸವಣ್ಣ
ಬೆಳಗಿನೊಳಗಣ ಬೆಳಗು ಮಹಾಬೆಳಗು ! ಶಿವ ಶಿವಾ ! ಪರಮಾಶ್ರಯವೆ ತಾನಾಗಿ ಶತಪತ್ರಕಮಳಕರ್ಣಿಕಾಮಧ್ಯದಲ್ಲಿ ಸ್ವತಃಸಿದ್ಧನಾಗಿಪ್ಪ ನಮ್ಮ ಕೂಡಲಸಂಗಮದೇವ.
--------------
ಬಸವಣ್ಣ
ಬೆದಕದಿರು ಬೆದಕದಿರು, ಬೆದಕಿದಡೆ ಹುರುಳಿಲ್ಲ, ಚಿತ್ತರಟ್ಟೆಯ ಕಾಯಲ್ಲಿ ಮತ್ತೇನನರಸುವಿರಯ್ಯಾ ನಿಮ್ಮ ಉತ್ತಮಿಕೆಯ ಪೂರೈಸುವುದು ಕೂಡಲಸಂಗಮದೇವಾ. 28
--------------
ಬಸವಣ್ಣ
ಬೆಳಗಿನೊಳಗಣ ಬೆಳಗು ಮಹಾಬೆಳಗೆಂಬ ಪ್ರಸಾದದಲ್ಲಿ ಒದಗಿದ ಪ್ರಸಾದಿಯ ಪರಿಣಾಮದ ಪರಮಾನಂದವನೇನೆಂದುಪಮಿಸುವೆನಯ್ಯಾ ಪರಮಾಶ್ರಯವೇ ತಾನಾಗಿ, ಕೂಡಲಸಂಗಮದೇವಯ್ಯಾ, ಚೆನ್ನಬಸವಣ್ಣನೆಂಬ ಮಹಾಪ್ರಸಾದಿ ಎನ್ನ ವಾಙ್ಮನಕ್ಕಗೋಚರನಾ[ಗೆ], ನಾನೇನೆಂಬೆನಯ್ಯಾ.
--------------
ಬಸವಣ್ಣ
ಬಂದುದ ಕೈಕೊಳ್ಳಬಲ್ಲಡೆ ನೇಮ, ಇದ್ದುದ ವಂಚನೆಯ ಮಾಡದಿದ್ದಡೆ ನೇಮ. ನಡೆದು ತಪ್ಪದಿದ್ದಡೆ ಅದು ನೇಮ, ನುಡಿದು ಹುಸಿಯದಿದ್ದಡೆ ಅದು ಮುನ್ನವೆ ನೇಮ. ನಮ್ಮ ಕೂಡಲಸಂಗನ ಶರಣರು ಬಂದಡೆ ಒಡೆಯರಿಗೊಡವೆಯನೊಪ್ಪಿಸುವುದೆ ನೇಮ. 231
--------------
ಬಸವಣ್ಣ
ಬರಬರ ಭಕ್ತಿ ಅರೆಯಾುತ್ತು ಕಾಣಿರಣ್ಣಾ : ಮೊದಲದಿನ ಹಣೆಮುಟ್ಟಿ, ಮರುದಿನ ಕೈಮುಟ್ಟಿ, ಮೂರೆಂಬ ದಿನಕ್ಕೆ ತೂಕಡಿಕೆ ಕಾಣಿರಣ್ಣಾ. ಹಿಡಿದುದ ಬಿಡದಿದ್ದಡೆ ಕಡೆಗೆ ಚಾಚುವ, ಅಲ್ಲದಿದ್ದಡೆ ನಡುನೀರಲದ್ದುವ ನಮ್ಮ ಕೂಡಲಸಂಗಮದೇವ. 220
--------------
ಬಸವಣ್ಣ
ಬ್ರಹ್ಮಂಗೆ ವಾಕ್ಪರುಷ, ವಿಷ್ಣುವಿಂಗೆ ನಯನಪರುಷ, ರುದ್ರಂಗೆ ಹಸ್ತಪರುಷ, ನಮ್ಮ ಕೂಡಲಸಂಗನ ಶರಣಂಗೆ ಪಾದವೇ ಪರುಷ !
--------------
ಬಸವಣ್ಣ
ಬ್ರಹ್ಮಪದವಿಯನೊಲ್ಲೆ, ವಿಷ್ಣುಪದವಿಯನೊಲ್ಲೆ, ರುದ್ರಪದವಿಯನೊಲ್ಲೆ. ನಾನು ಮತ್ತಾವ ಪದವಿಯನೊಲ್ಲೆನಯ್ಯಾ. ಕೂಡಲಸಂಗಮದೇವಾ, ನಿಮ್ಮ ಸದ್ಭಕ್ತರ ಪಾದವನರಿದಿಪ್ಪ ಮಹಾಪದವಿಯ ಕರುಣಿಸಯ್ಯಾ. 361
--------------
ಬಸವಣ್ಣ
ಬೆಲ್ಲವ ತಿಂದ ಕೋಡಗದಂತೆ ಸಿಹಿಯ ನೆನೆಯದಿರಾ, ಮನವೆ, ಕಬ್ಬ ತಿಂದ ನರಿಯಂತೆ ಹಿಂದಕ್ಕೆಳಸದಿರಾ, ಮನವೆ. ಗಗನವನಡರಿದ ಕಾಗೆಯಂತೆ ದೆಸೆದಸೆಗೆ ಹಂಬಲಿಸದಿರಾ, ಮನವೆ. ಕೂಡಲಸಂಗನ ಶರಣರ ಕಂಡು ಲಿಂಗವೆಂದೆ ನಂಬು, ಮನವೆ. 274
--------------
ಬಸವಣ್ಣ
ಬಸವನಿದ್ದಂತೆ ಊರ ಪಶುವನೊಯಿವರೆ ಸಂಗಯ್ಯಾ ಕಗ್ಗಾಯಿಯಿದ್ದಂತೆ ಹೂಮಿಡಿಯನೊಯಿವರೆ ಸಂಗಯ್ಯಾ ನಾನಿದ್ದಂತೆ ನನ್ನ ಶಿಶು ಸಂಗಯ್ಯನನೊಯಿವರೆ ಕೂಡಲಸಂಗಯ್ಯಾ
--------------
ಬಸವಣ್ಣ
ಬಾಲಾಭ್ಯಾಸವ ಮಾಡಹೋದಡೆ ಎನ್ನ ಸುರಗಿ ಎನ್ನ ನಟ್ಟಿತು, ಎಂತಯ್ಯಾ ಕಲಿಯೊಡನೆ ಶ್ರವವ ಮಾಡುವೆನು ರಾಯ ರಾಜಗುರು ಜಗದ ಬಿನ್ನಾಣಿಯ ತೊಡಕ ಬಿಡಿಸಬಾರದು. ಸರಸದ ಮೇಲೆ ಹಿಡಿಯ ಹೋದಡೆ ಚದುರಂಗದ ಮೇಲೆ ಮಸಿಯ ತೋರಿದ ಕೂಡಲಸಂಗಮದೇವ.
--------------
ಬಸವಣ್ಣ
ಬಾಣ ಮಯೂರನಂತೆ ಬಣ್ಣಿಸಬಲ್ಲೆನೆ ಸಿರಿಯಾಳನಂತೆ ಊಣಲಿಕ್ಕಬಲ್ಲೆನೆ ದಾಸಿಮಯ್ಯನಂತೆ ಉಡಕೊಡಬಲ್ಲೆನೆ ಉಂಡು ಉಟ್ಟು, ಕೊಟ್ಟಡೆ ಮು್ಯುಗೆ ಮುಯ್ಯೆನಿಸಿತ್ತು, ಎನಗೆ ಕೊಟ್ಟಡೆ ಧರ್ಮವೆನಿಸಿತ್ತು, ಕೂಡಲಸಂಗಮದೇವಾ. 320
--------------
ಬಸವಣ್ಣ
ಬೆಟ್ಟಕ್ಕೆ ಬೆಳ್ಳಾರ ಸುತ್ತಿತಯ್ಯಾ, ಪಾಪದ ಬಲೆಯ ತಂದು ಮುಂದೆ ಒಡ್ಡಿದಿರಯ್ಯಾ, ಬೇಟೆಗಾರನು ಮೃಗವನಟ್ಟಿ ಬರಲು ಮೃಗವು ಗೋರಿಗೊಳಗಾಗದಯ್ಯಾ. ಹರನೊಡ್ಡಿದ ಬಲೆಯಲ್ಲಿ ಸಿಲುಕಿದ ಮೃಗವು ಕೂಡಲಸಂಗಮದೇವಂಗೆ ಓಗರವಾಯಿತ್ತು.
--------------
ಬಸವಣ್ಣ
ಬೆಟ್ಟದ ಕಲ್ಲು ಸೋರೆಯ ಕೂಡೆ ಆಡಿದಂತಾಯಿತ್ತಯ್ಯ, ಜಾತಿಯಲ್ಲದ ಜಾತಿಯ ಕೂಡಿ ಅದರ ಪರಿಯಂತೆ, ಸಂಗವಲ್ಲದ ಸಂಗವ ಮಾಡಿದಡೆ ಭಂಗತಪ್ಪದು, ಕೂಡಲಸಂಗಮದೇವಾ.
--------------
ಬಸವಣ್ಣ