ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಆಶೆ ಇಚ್ಛೆಗೆನ್ನ ಗಾಸಿ ಮಾಡದಿರಯ್ಯಾ, ದಾಸೋಹಿಯಾಗಿರ್ಪ ದಾಸನಾಗಿರಿಸೆನ್ನ ಕೂಡಲಸಂಗಮದೇವಾ, ನಿಮ್ಮ ಧರ್ಮ.
--------------
ಬಸವಣ್ಣ
ಆಕಳ, ಕಳ್ಳರು ಕೊಂಡೊಯ್ದರೆನ್ನದಿರಿಂ ಭೋ, ನಿಮ್ಮ ಧರ್ಮ ! ಬೊಬ್ಬಿಡದಿರಿಂ ಭೋ, ನಿಮ್ಮ ಧರ್ಮ ! ಅರರಸಾಡದಿರಿಂ ಭೋ, ನಿಮ್ಮ ಧರ್ಮ ! ಅಲ್ಲಿ ಉಂಬಡೆ ಸಂಗ, ಇಲ್ಲಿ ಉಂಬಡೆ ಸಂಗ, ಕೂಡಲಸಂಗಮದೇವ ಏಕೋಭಾವ.
--------------
ಬಸವಣ್ಣ
ಆಡಿ ಅಳುಪದಿರಾ, ಲೇಸಮಾಡಿ ಮರುಗದಿರಾ, ಎಲೆ ಮನವೆ. ಕೂಡಿ ತಪ್ಪದಿರಾ, ಬೇಡಿದವರಿಗಿಲ್ಲೆನ್ನದಿರು ಕಂಡಾ. ನಾಡ ಮಾತು ಬೇಡ, ಸೆರಗೊಡ್ಡಿ ಬೇಡು ಕೂಡಲಸಂಗನ ಶರಣರ. 279
--------------
ಬಸವಣ್ಣ
ಆಸೆ, ಆಮಿಷ, ತಾಮಸ, ಹುಸಿ, ವಿಷಯ, ಕುಟಿಲ, ಕುಹಕ, ಕ್ರೋಧ, ಕ್ಷುದ್ರ, ಮಿಥ್ಯೆ- ಇವನೆನ್ನ ನಾಲಗೆಯ ಮೇಲಿಂದತ್ತ ತೆಗೆದು ಕಳೆಯಯ್ಯಾ. ಅದೇಕೆಂದಡೆ, ನಿನ್ನತ್ತಲೆನ್ನ ಬರಲೀಯವು. ಇದು ಕಾರಣ, ಇವೆಲ್ಲವ ಕಳೆದು ಎನ್ನ ಪಂಚೈವರ, ಭಕ್ತರ ಮಾಡು ಕೂಡಲಸಂಗಮದೇವಾ. 46
--------------
ಬಸವಣ್ಣ
ಆದಿ ಲಿಂಗ, ಅನಾದಿ ಜಂಗಮವು, ಆ ಜಂಗಮಕ್ಕೆ ಮಾಡಿದಡೆ ಪರಮಾನಂದ ಸುಖವಯ್ಯಾ. ಗುರುವಿಂಗೆ ಪರಮಗುರು ಜಂಗಮವೆಂದುದು ಕೂಡಲಸಂಗಯ್ಯನ ವಚನ.
--------------
ಬಸವಣ್ಣ
ಆರಾಧನೆಯ ಮಾಡಿದಡೆ ಅಮೃತದ ಬೆಳಸು, ವಿರೋದ್ಥಿಸಿದಡೆ ವಿಷದ ಬೆಳಸು, ಇದು ಕಾರಣ ಜಂಗಮಕ್ಕೆ ಅಂಜಲೇಬೇಕು. ಸ್ಥಾವರ ಜಂಗಮ ಒಂದೆಂದರಿದಡೆ ಕೂಡಲಸಂಗಮದೇವ ಶರಣಸನ್ನಿಹಿತ. 422
--------------
ಬಸವಣ್ಣ
ಆಯುಷ್ಯವುಂಟು ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ; ಆಯುಷ್ಯ ತೀರಿ ಪ್ರಳಯ ಬಂದಡೆ ಆ ಅರ್ಥವನುಂಬುವರಿಲ್ಲ. ನೆಲನನಗೆದು ಮಡುಗದಿರಾ, ನೆಲ ನುಂಗಿದಡುಗುಳುವುದೆ ಕಣ್ಣಿನಲ್ಲಿ ನೋಡಿ, ಮಣ್ಣಿನಲ್ಲಿ ನೆರಹಿ, ಉಣ್ಣದೆ ಹೋಗದಿರಾ ! ನಿನ್ನ ಮಡದಿಗಿರಲೆಂದಡೆ, ಆ ಮಡದಿಯ ಕೃತಕ ಬೇರೆ; ನಿನ್ನ ಒಡಲು ಕಡೆಯಲು ಮತ್ತೊಬ್ಬನಲ್ಲಿಗೆ ಅಡಕದೆ ಮಾಬಳೆ ಹೆರರಿಗಿಕ್ಕಿ ಹೆಗ್ಗುರಿಯಾಗಿ ಕೆಡಬೇಡ, ಕೂಡಲಸಂಗನ ಶರಣರಿಗೆ ಒಡನೆ ಸವೆಸುವುದು. 201
--------------
ಬಸವಣ್ಣ
ಆವಾವ ಭಾವದಲ್ಲಿ ಮಾಡಿ ಕೂಡಿಹೆನೆಂಬವರ ಬಾಗಿಲ ತೋರಯ್ಯಾ. ತನುವನೊಪ್ಪಿಸಿದವರ, ಮನವನೊಪ್ಪಿಸಿದವರ, ಧನವನೊಪ್ಪಿಸಿದವರ ಬಾಗಿಲ ತೋರಯ್ಯಾ. ಇವೆಲ್ಲವನೊಪ್ಪಿಸಿ ಜಂಗಮವೆನ್ನವರೆನ್ನವರೆಂಬವರ ಕೆರಹ ಹೊತ್ತಿರಿಸೆನ್ನನು, ಕೂಡಲಸಂಗಮದೇವಾ. 363
--------------
ಬಸವಣ್ಣ
ಆನೆತ್ತ ಬಲ್ಲೆನಯ್ಯಾ ನಿಮ್ಮ ಭಕ್ತಿಯ ಘನವ ಆನೆತ್ತ ಬಲ್ಲೆನಯ್ಯಾ ನಿಮ್ಮ ಶ್ರೀಪಾದವ ನಿಲವ ಕಾಯದ ಕಳವಳದ ಮರೆಯಲಿದ್ದವರಲ್ಲಿ ನಂಬುಗೆಯಳವಡುವುದೆ ಕೂಡಲಸಂಗಮದೇವಾ ಎನ್ನವಗುಣವ ನೋಡದೆ ಕರುಣದಿಂದ ಭಕ್ತಿಯ ನಿಲವ ತೋರಾ ತಂದೆ.
--------------
ಬಸವಣ್ಣ
ಆಗದ ಕಾಲಕ್ಕೆ ಆಗೆಂದಡಾಗದು, ಆಗಬೇಕೆಂದು ನಾ ಬೆಂಬೀಳೆನಯ್ಯಾ. ಆಗುಮಾಡುವ ತಂದೆ ನೀನು, ಆಡಿ ಬಹ ಮಕ್ಕಳಿಗೆ ಊಡುವ ತಾಯಂತೆ ನೋಡಿ ಸಲಹೆನ್ನ ಕೂಡಲಸಂಗಮದೇವಾ.
--------------
ಬಸವಣ್ಣ
ಆದುದನರಿಯೆ, ಹೋದುದನರಿಯೆ, ಬಂದುದನರಿಯೆ, ನಿಂದುದನರಿಯೆ, ಒಳಗನರಿಯೆ, ಹೊರಗನರಿಯೆ, ಇಹವನರಿಯೆ, ಪರವನರಿಯೆ, ಭಾವವನರಿಯೆ, ನಿರ್ಭಾವವನರಿಯೆ, ಶೂನ್ಯವನರಿಯೆ, ನಿಃಶೂನ್ಯವನರಿಯೆ. ಕೂಡಲಸಂಗಮದೇವಯ್ಯಾ, ಇವೆಲ್ಲವ ಮಾಡಿ ಕೂಡಿದಾತ ಮಡಿವಾಳ ಬಲ್ಲನಾಗಿ, ನಾನೇನೆಂದೂ ಅರಿಯೆನಯ್ಯಾ.
--------------
ಬಸವಣ್ಣ
ಆರತವಡಗಿತ್ತೆನ್ನ, ಬಯಕೆ ಸಮನಿಸಿತ್ತೆನ್ನ, ಸಂಕಲ್ಪ ಸಮನಿಸಿತ್ತೆನ್ನ, ಸ್ವಯವು ದೊರೆಕೊಂಡಿತ್ತೆನ್ನ. ನಿಮ್ಮ ನೋಡಿ ಎನ್ನ ಕಂಗೆ ಮಂಗಳಮಯದ ಸುಖಸಂಗವಾಯಿತ್ತು. ಅಯ್ಯಾ, ಒಳಗು ಹೊರಗು, ಹೊರಗೊಳಗೆಂಬುದ ತಿಳಿದು, ಪ್ರಭುವಿನ ಕರುಣದಿಂದ ಕೂಡಲಸಂಗಮದೇವರಲ್ಲಿ ತೆರಹಿಲ್ಲದಿರ್ದೆನು.
--------------
ಬಸವಣ್ಣ
ಆದಿಯಲಾಗಲಿ, ವೇದದಲಾಗಲಿ, ಶಾಸ್ತ್ರದಲಾಗಲಿ, ಸಮಯದಲಾಗಲಿ. ಎನ್ನವರೆನ್ನೆನು, ಎನ್ನವರೆನ್ನೆನು. ಎನ್ನವರೆಂದಡೆ ಸಂಗಾ ನಿಮ್ಮಲ್ಲಿಗೆ ದೂರ. ಎನ್ನವರೆಂದಡೆ ಜನ್ನಕ್ಕೆ ನಡೆವರೆ ಎನ್ನವರಲ್ಲ, ಕೂಡಲಸಂಗಾ ನಿಮ್ಮಾಣೆ.
--------------
ಬಸವಣ್ಣ
ಆಸೆಯೆಂಬ ಪಾಶದಲ್ಲಿ ಭವಬಂಧನನಾಗಿರ್ದೆನಯ್ಯಾ, ಸಕೃತು ನಿಮ್ಮ ನೆನೆಯಲು ಎನಗೆ ತೆರಹಿಲ್ಲಯ್ಯಾ ! ಕರುಣಾಕರ, ಅಭಯಕರ, ವರದ, ನೀ ಕರುಣಿಸಯ್ಯಾ. ಸಂಸಾರಬಂಧನವನು ಮಾಣಿಸಿ, ಎನಗೆ ಕೃಪೆಯ ಮಾಡಿ, ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸು, ಭಕ್ತಜನಮನೋವಲ್ಲ ಕೂಡಲಸಂಗಮದೇವಾ. 69
--------------
ಬಸವಣ್ಣ
ಆ ಭಸ್ಮತಾಗಿ ಬ್ರಹ್ಮ ತನ್ನ ಕಪಾಲವಿಡಿದನು. ಗಣನಾಥನ ಐವತ್ತೆರಡು ಸರ ಹರಿದು ಬಿದ್ದವು. ಆ ಭಸ್ಮತಾಗಿ ಅಂಡಜಮುಗ್ಧೆಯ ಮೂರು ಮೊಲೆ ಹರಿದು ಬಿದ್ದವು. ನಾದಪ್ರಿಯ ನಂದಿಯನೇರಿಕೊಂಡು ಅತೀತನ ಮೇಲೆ ಆನಂದಸಿಂಹಾಸನವನಿಕ್ಕಿ ಕುಳ್ಳಿತ್ತ, ಕೂಡಲಸಂಗಮದೇವರ ದೇವತ್ವ ಕೆಟ್ಟಿತ್ತು.
--------------
ಬಸವಣ್ಣ
ಆರಾರ ಸಂಗವೇನೇನ ಮಾಡದಯ್ಯಾ ಕೀಡೆ ಕೊಂಡಲಿಗನಾಗದೆ ಅಯ್ಯಾ ಚಂದನದ ಸನ್ನಿಧಿಯಲ್ಲಿ ಪರಿಮಳ ತಾಗಿ ಬೇವು, ಬೊಬ್ಬುಲಿ, ತರಿಯ ಗಂಧಂಗಳಾಗವೆ ನಮ್ಮ ಕೂಡಲಸಂಗನ ಶರಣರ ಸನ್ನಿಧಿುಂದ ಕರ್ಮ ನಿರ್ಮಳವಾಗದಿಹುದೆ 141
--------------
ಬಸವಣ್ಣ
ಆದಿಪುರುಷನ ಮನವು ಮಹವನಕ್ಕಾಡೆ, ಮತ್ತಲ್ಲಿಯೆ ಆನಂದದಿಂದ ಆ ನಿರವಯವು ಬೆಸಲಾಯಿತ್ತು. ಧರೆ, ಅಂಬರ, ವಾರುಧಿ ಸಹಿತ, ಜಾರೆಯೆಂದಡೆ ಜಗದಲ್ಲಿ ನಿಂದವು Zõ್ಞರಾಸಿಲಕ್ಷ ಜೀವಜಾಲಗಳು. ಹೋರೆಯೆಂದಡೆ ಆಕಾಶದಲ್ಲಿ ನಿಂದರು ಗರುಡಗಂಧರ್ವಸಿದ್ಧ ವಿದ್ಯಾಧರದೇವರ್ಕಳು- ಮೊದಲಾದ ದೇವಸಮೂಹಂಗಳೆಲ್ಲ ಕೂಡಲಸಂಗಮದೇವಾ, ನೀವು ಮನದಲ್ಲಿ ಸಂಕಲ್ಪಿಸಿ ಆಗೆಂದಡೆ ಆದವು.
--------------
ಬಸವಣ್ಣ
ಆಲುತ್ತಲು ಹರೆಯ ಹೊುಸಿ, ಅಂಕವ ಮಾಡಿದೆನೆಲ್ಲರ ಕಂಡು. ಆನು ಬೇಡೆಂದಡೆ ಮಾಣೆ, ಕಲಿತನ ಮಾಡಿದೆನೆಲ್ಲರ ಕಂಡು. ಅಲ್ಲಿ ಹೋುತ್ತು ಗಳೆಯೆಂದಡೆ ಆಸೆ ಮಾಡೆನು, ಕೂಡಲಸಂಗಮದೇವಾ. 437
--------------
ಬಸವಣ್ಣ
ಆಹ್ವಾನವಿಲ್ಲ ಪ್ರಾಣಲಿಂಗವಾಗಿ, ವಿಸರ್ಜನವಿಲ್ಲ ಲಿಂಗ ನೆಲೆಗೊಂಡಿಪ್ಪುದಾಗಿ. ಇದು ಕಾರಣ, ಆಹ್ವಾನ ವಿಸರ್ಜನವಿಲ್ಲ, ಶರಣನ ಪರಿ ಬೇರೆ; ಅಂಗಸಂಗವೆ ಲಿಂಗ, ಲಿಂಗಸಂಗವೆ ಮನ, ಕೂಡಲಸಂಗನ ಶರಣ ಸುಯಿಧಾನಿ.
--------------
ಬಸವಣ್ಣ
ಆದ್ಯರಿಗಲ್ಲದೆ ವೇದ್ಯವಾಗದು; ಮಾಣಿ ಭೋ, ಮಾಣಿ ಭೋ ! ಶಿವಭಕ್ತನೇ ಕುಲಜ, ಕೈವರ್ತಗರ್ಭಸಂಭೂತಮಾರ್ಕಂಡೇಯಮಹಾಮುನಿಃ ತಪಸಾ ಜಾಯತೇ ವಿಪ್ರಕುಲಂ ಜಾತಿರ್ನ ವಿದ್ಯತೇ ಜಾತನಲ್ಲ ಅಜಾತನಲ್ಲ, ಕೂಡಲಸಂಗನ ಶರಣರು ನಿಸ್ಸೀಮರಯ್ಯಾ.
--------------
ಬಸವಣ್ಣ
ಆಡುವುದಳವಟ್ಟಿತ್ತು, ಹಾಡುವುದಳವಟ್ಟಿತ್ತು, ಅರ್ಚನೆಯಳವಟ್ಟಿತ್ತು, ಪೂಜನೆಯಳವಟ್ಟಿತ್ತು, ನಿತ್ಯಲಿಂಗಾರ್ಚನೆ ಮುನ್ನವೆಯವಳವಟ್ಟಿತ್ತು. ಕೂಡಲಸಂಗನ ಶರಣರು ಬಂದಡೆ, ಏಗುವುದು, ಏ ಬೆಸೆನೆಂಬುದು ಒಪ್ಪಚ್ಚಿ ಅಳವಡದು. 303
--------------
ಬಸವಣ್ಣ
ಆತ್ಮನ ಸುಳುಹು ನಿಂದ ಮತ್ತೆ ಕಾಯದ ಅವತಾರವಳಿಯಿತ್ತು. ನೀನೆಂಬ ಭಾವವರತಲ್ಲಿ, ಕೂಡಲಸಂಗಮದೇವರ ಭಾವ ಪ್ರಭುದೇವರಲ್ಲಿ ಐಕ್ಯವಾಯಿತ್ತು.
--------------
ಬಸವಣ್ಣ
ಆದಿ ಪುರಾಣ ಅಸುರರಿಗೆ ಮಾರಿ, ವೇದಪುರಾಣ ಹೋತಿಂಗೆ ಮಾರಿ, ರಾಮಪುರಾಣ ರಕ್ಕಸರಿಗೆ ಮಾರಿ, ಭಾರತಪುರಾಣ ಗೋತ್ರಕ್ಕೆ ಮಾರಿ. ಎಲ್ಲಾ ಪುರಾಣ ಕರ್ಮಕ್ಕೆ ಮೊದಲು, ನಿಮ್ಮ ಪುರಾಣಕ್ಕೆ ಪ್ರತಿಯಿಲ್ಲ ಕೂಡಲಸಂಗಮದೇವಾ.
--------------
ಬಸವಣ್ಣ
ಆವನೇವನಾದಡೇನು ಹೇಮವಿಲ್ಲದಂಗೈಸಬಹುದೆ ಕೊಡಲಿಲ್ಲೆಂಬುದರಿಂದ ಸಾಯಲುಬಹುದು, ಸೈರಿಸಬಾರದು. ಬೇಡುವವರ ನೋಡಿ ನೋಡಿ, ಈಯಲಿಲ್ಲದ ಜೀವನವದೇಕೆ ಕೂಡಲಸಂಗಮದೇವಾ 439
--------------
ಬಸವಣ್ಣ
ಆಶೆಯಾಮಿಷ ತಾಮಸದಿಂದ ಭವಬಂಧನವಾದುದನರಿಯಾ ! ತ್ರಿವಿಧ ತ್ರಿವಿಧಾವಸ್ಥೆಯ ಮರೆಯಾ ! ಓಂ ನಮಃ ಶಿವಾಯ, ಶರಣೆಂಬುದ ಬಿಡದೆ ನೆನೆ ಮನವೆ ! ಮಹತಃ ಶಿವಲಿಂಗಸ್ಯ ಮಹತೋ ಜಂಗಮಸ್ಯ ಚ ತತ್ ಪ್ರಸಾದೋ ಮಹಾನೇವ ಮಹದ್ಭಿರಿದಮೀರಿತಂ|| ಕೂಡಲಸಂಗಮದೇವನ ಪ್ರಸಾದಸಾನ್ನಿಧ್ಯದಿಂದ ಭವಜನ್ಮಕರ್ಮ ಪಂಚಭೂತಪೂರ್ವನಾಸ್ತಿ.
--------------
ಬಸವಣ್ಣ

ಇನ್ನಷ್ಟು ...