ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಇಂದು ಹುಟ್ಟಿದ ಕೂಸಿಂಗೆ ಇಂದೆ ಜವ್ವನವಾಯಿತ್ತಯ್ಯಾ. ಆ ಕೂಸು ಬೀದಿಯಲ್ಲಿ ಒತ್ತೆಗೊಳಲು ನಿಂದಿತ್ತಯ್ಯಾ. ಇದರ ಸಂಗಸುಖದನುಭಾವವನು ಕೂಡಲಸಂಗಮದೇವ ತಾನೆ ಬಲ್ಲ.
--------------
ಬಸವಣ್ಣ
ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು, ಎನ್ನ ನಿಂದಲ್ಲಿ ನಿಲ್ಲಲೀಯದು, ಎನ್ನ ಕುಳಿತಲ್ಲಿ ಕುಳ್ಳಿರಲೀಯದು, ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ. ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ. ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ. ಕೂಡಲಸಂಗಮದೇವಾ ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ, ಎಂದು ನಿಮ್ಮನೊಡಗೂಡುವೆನಯ್ಯಾ.
--------------
ಬಸವಣ್ಣ
ಇಷ್ಟಲಿಂಗಕ್ಕರ್ಪಿಸಿ, ಮೃಷ್ಟಾನ್ನವನುಂಡು, ಇಷ್ಟಾರ್ಥಸಿದ್ಧಿಯ ಪಡೆದೆಹೆವೆಂಬ ಮರಳುಗಳು ನೀವು ಕೇಳಿರೆ; ಪ್ರಾಣಲಿಂಗಸ್ಥಲ ನಿಮಗೆಲ್ಲಿಯದು ಪ್ರಸಾದಸ್ಥಲ ನಿಮಗೆಲ್ಲಿಯದು ಓಗರವನುಂಡು ಆಗಾದೆವೆಂದಡೆ, ಮೂಗಕೊಯ್ಯದೆ ಮಾಣ್ಬನೆ ನಮ್ಮ ಕೂಡಲಸಂಗಮದೇವನು
--------------
ಬಸವಣ್ಣ
ಇತ್ತ ಬಾರಯ್ಯಾ, ಇತ್ತ ಬಾರಯ್ಯಾ ಎಂದು ಭಕ್ತರೆಲ್ಲರೂ ಕೂರ್ತು ಹತ್ತಿರೆ ಕರೆವುತ್ತಿರಲು, ಮತ್ತೆ ಕೆಲಕ್ಕೆ ಸಾರ್ದು, ಶರಣೆಂದು ಹಸ್ತ ಬಾಯನೆ ಮುಚ್ಚಿ, ಕಿರಿದಾಗಿ ಭೃತ್ಯಾಚಾರವ ನುಡಿದು, ವಿನಯ ತದ್ಧ್ಯಾನವುಳ್ಳಡೆ ಎತ್ತಿಕೊಂಬನಯ್ಯಾ, ಕೂಡಲಸಂಗಮದೇವ ಪ್ರಮಥರ ಮುಂದೆ. 245
--------------
ಬಸವಣ್ಣ
ಇರಿಸಿಕೊಂಡು ಭಕ್ತರಾದರೆಮ್ಮವರು, ತರಿಸಿಕೊಂಡು ಭಕ್ತರಾದರೆಮ್ಮವರು, ಕೊರೆಸಿಕೊಂಡು ಭಕ್ತರಾದರೆಮ್ಮವರು, ಜರಿಸಿಕೊಂಡು ಭಕ್ತರಾದರೆಮ್ಮವರು. ಕೂಡಲಸಂಗನ ಶರಣರಿಗೆ ಮುಳಿಸ ತಾಳಿ ಎನ್ನ ಭಕ್ತಿ ಅರೆಯಾುತ್ತು. 255
--------------
ಬಸವಣ್ಣ
ಇಂದ್ರನಾವಾಸ, ಉಪೇಂದ್ರನ ಓಲಗ ಚಂದ್ರವರಿõ್ಞಳಿಯನರಿಯದೆ ಹೋಯಿತ್ತು, ಬಂಧಮೋಕ್ಷದ ಭವಬಂಧನ ಬಿಡದನ್ನಕ್ಕರ ಮತ್ತೊಂದರ ಮುಖ ಜನಿಸಿತಲ್ಲಾ. ಕೂಡಲಸಂಗಮದೇವಾ, ಚೆನ್ನಬಸವಣ್ಣನ ಸನ್ನಿಧಿಯಿಂದಲಾನು ಬದುಕಿದೆನು.
--------------
ಬಸವಣ್ಣ
ಇಂದೆನ್ನ ಮನೆಗೆ ಪ್ರಮಥರು ಬಂದಾರೆಂದು ಗುಡಿ ತೋರಣವ ಕಟ್ಟಿ, ಷಡುಸಮ್ಮಾರ್ಜನೆಯ ಮಾಡಿ, ರಂಗವಾಲಿಯನಿಕ್ಕಿ `ಉಘೇ, ಚಾಂಗು ಭಲಾ' ಎಂದೆಂಬೆ. ಕೂಡಲಸಂಗನ ಶರಣರು ತಮ್ಮ ಒಕ್ಕುದನಿಕ್ಕಿ ಸಲಹುವರಾಗಿ. 377
--------------
ಬಸವಣ್ಣ
ಇಂದಿಂಗೆಂತು ನಾಳಿಂಗೆಂತು ಎಂದು- ಬೆಂದ ಒಡಲ ಹೊರೆಯ ಹೋಯಿತ್ತೆನ್ನ ಸಂಸಾರ ! ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲ, ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲ. ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ ಕೊಂದುದಯ್ಯಾ ಈ ಮಾಯೆ, ಕೂಡಲಸಂಗಮದೇವಾ. 17
--------------
ಬಸವಣ್ಣ
ಇಬ್ಬರು ಮೂವರು ದೇವರೆಂದು ಉಬ್ಬಿ ಮಾತನಾಡಬೇಡ, ಒಬ್ಬನೆ ಕಾಣಿರೊ, ಇಬ್ಬರೆಂಬುದು ಹುಸಿ ನೋಡಾ ! ಕೂಡಲಸಂಗಮದೇವನಲ್ಲದಿಲ್ಲೆಂದಿತ್ತು ವೇದ.
--------------
ಬಸವಣ್ಣ
ಇಷ್ಟಲಿಂಗವೊಂದು ಪ್ರಾಣಲಿಂಗ[ವೊಂದು, ಭಾವಲಿಂಗ]ವೊಂದೆಂಬ ಮಿಟ್ಟಿಯ ಭಂಡರ, ಅವರ ಮಾತ ಕೇಳಲಾಗದು. ಅಂಗಳದೊಳಗೊಬ್ಬ ಗಂಡ, ಮನೆಯೊಳಗೊಬ್ಬ ಗಂಡ, ಹಿತ್ತಿಲೊಳಗೊಬ್ಬ ಗಂಡನೆಂಬ ಸತಿಯರ ಲೋಕದ ಮಾನವರು ಮೆಟ್ಟಿ ಮೂಗಕೊಯ್ಯದೆ ಮಾಣ್ಬರೆ, ಅಯ್ಯಾ ? ಲಿಂಗತ್ರಯವೆಂದು ತೋರಿದವರಾರೊ ? `ಲಿಂಗಮೇಕಂ ಪರಂ ನಾಸ್ತಿ ಎಂದು ಸದ್ಗುರುಸ್ವಾಮಿ ಅರುಹಿದನಾಗಿ. ಷಟ್ತ್ರಿಂಶತ್ತತ್ವಕ್ಕೆ ಆಲಯಮಪ್ಪಂತಹ ಮಹಾಘನಲಿಂಗದ ಬೆಳಗು ಕರಸ್ಥಲದಲ್ಲಿ, ಮನಸ್ಥಲದಲ್ಲಿ, [ಭಾವಸ್ಥಲದಲ್ಲಿ] ವೇದ್ಯವಾದ ಬಳಿಕ ಸರ್ವಾಂಗಲಿಂಗ, ಕೂಡಲಸಂಗಯ್ಯಾ ನಿಮ್ಮ ಶರಣಂಗೆ.
--------------
ಬಸವಣ್ಣ
ಇಂದ್ರಿಯ ನಿಗ್ರಹವ ಮಾಡಿದಡೆ ಹೊಂದುವವು ದೋಷಂಗಳು, ಮುಂದೆ ಬಂದು ಕಾಡುವವು ಪಂಚೇಂದ್ರಿಯಂಗಳು. ಸತಿಪತಿರತಿಸುಖವ ಬಿಟ್ಟರೆ ಸಿರಿಯಾಳ ಚಂಗಳೆಯವರು ಸತಿಪತಿರತಿಸುಖಭೋಗೋಪಭೋಗವ, ವಿಳಾಸವ ಬಿಟ್ಟನೆ ಸಿಂಧುಬಲ್ಲಾಳನು ನಿಮ್ಮ ಮುಟ್ಟಿ ಪರಧನ-ಪರಸತಿಯರಿಗೆಳಸಿದಡೆ ನಿಮ್ಮಾಚಾರಕ್ಕೆ ದೂರ, ಕೂಡಲಸಂಗಮದೇವಾ.
--------------
ಬಸವಣ್ಣ
ಇಪ್ಪತ್ತುನಾಲ್ಕು ತಿಥಿಯಿಂದ ವೆಗ್ಗಳ, ಗ್ರಹಣ-ಸಂಕ್ರಾಂತಿಯಿಂದ ವೆಗ್ಗಳ, ಏಕಾದಶಿ-ವ್ಯತೀಪಾತದಿಂದ ವೆಗ್ಗಳ, ಸೂಕ್ಷ್ಮಶಿವಪಥವನರಿದಂಗೆ ಹೋಮ-ನೇಮ-ಜಪ-ತಪದಿಂದ ವೆಗ್ಗಳ, ಕೂಡಲಸಂಗಮದೇವಾ ನಿಮ್ಮ ಮಾಣದೆ ನೆನೆವಂಗೆ
--------------
ಬಸವಣ್ಣ
ಇಲಿ ಗಡಹನೊಡ್ಡಿದಲ್ಲಿ ಇಪ್ಪಂತೆ ಎನ್ನ ಸಂಸಾರ, ಕೆಡೆವನ್ನಕ್ಕ ಮಾಣದು ಹೆರರ ಬಾಧಿಸುವುದನು ತನು ಕೆಡೆವನ್ನಕ್ಕ ಮಾಣದು, ಹೆರರ ಛಿದ್ರಿಸುವುದನು ಮನ ಕೆಡೆವನ್ನಕ್ಕ ಮಾಣದು. ಅಕಟಕಟಾ, ಸಂಸಾರಕ್ಕೆ ಆಸತ್ತೆ ಕೂಡಲಸಂಗಮದೇವಾ. 10
--------------
ಬಸವಣ್ಣ
ಇಟ್ಟಿಯ ಹಣ್ಣ ನರಿ ತಿಂದು ಸೃಷ್ಟಿ ತಿರುಗಿತ್ತೆಂಬಂತೆ ಮಟ್ಟಿಯನಿಟ್ಟ ದ್ವಿಜರ ಮಾತದೇಕೆ ಹಗಲುಗಾಣದ ಗೂಗೆ ಇರುಳಾಯಿತ್ತೆಂದಡೆ, ಜಗಕ್ಕೆ ಇರುಳಪ್ಪುದೆ ಮರುಳೆ ಹೋಮದ ನೆವದಲ್ಲಿ ಹೋತನು ಕೊಂದು ತಿಂಬ ಅನಾಮಿಕರೊಡನಾಡಿ ಗೆಲಿವುದೇನು ಕೂಡಲಸಂಗಮದೇವಾ.
--------------
ಬಸವಣ್ಣ
ಇಲ್ಲವೆಯ ಮೇಲೆ ಕಂಚೊಡೆದಂತೆ ಬಡ ಮನವೆನ್ನ ಕಾಡಿಹಿತಯ್ಯಾ, ಮತಿುಲ್ಲದ ಮರುಳ ನಾನಯ್ಯಾ, ಭಕ್ತಿುಲ್ಲದ ಬಡವ ನಾನು. ನಿಮ್ಮ ನೆನಹವಿಲ್ಲದೆ ನಿರ್ಭಾಗ್ಯನಾದೆ, ಎನಗೆ ನೀ ಕರುಣಿಸು ಕೂಡಲಸಂಗಮದೇವಾ. 257
--------------
ಬಸವಣ್ಣ
ಇರುಳೆಂದೇನೋ ಕುರುಡಂಗೆ, ಹಗಲೆಂದೇನೋ ಕುರುಡಂಗೆ ! ತಾಳವಬಾರಿಸಿದಡೇನೋ,ಪಂಚಮಹಾಶಬುದವ ಬಾರಿಸಿದಡೇನೋ ಕಿವುಡಂಗೆ ! ಕೂಡಲಸಂಗಮದೇವಯ್ಯನ ಪಥವಿನ್ನಾವುದೆಂದರಿಯದವಂಗೆ !
--------------
ಬಸವಣ್ಣ
ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ. ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ. ಕೂಡಲಸಂಗಮದೇವಾ ನಿಮ್ಮ ಮನೆಯ ಮಗನೆಂದೆನಿಸಯ್ಯಾ. 62
--------------
ಬಸವಣ್ಣ
ಇಂದು ಹುಟ್ಟಿದ ಕೂಸಿಂಗೆ ಇಂದೆ ಜವ್ವನವಾುತ್ತಯ್ಯಾ. ಆ ಕೂಸು ಬೀದಿಯಲ್ಲಿ ಒತ್ತೆಗೊಳಲು ನಿಂದಿತ್ತಯ್ಯಾ. ಇದರ ಸಂಗಸುಖದನುಭಾವವನು ಕೂಡಲಸಂಗಮದೇವ ತಾನೆ ಬಲ್ಲ. 516
--------------
ಬಸವಣ್ಣ
ಇಹದ ಪೂರ್ವವ ಜರೆದು, ಪರದ ಪೂರ್ವವನರಿದು, ಗುರುಕಾರುಣ್ಯವ ಪಡೆದು, ಅಂತರ್ಬಾಹ್ಯದ ಭವಿಯ ತೊರೆದು ಭಕ್ತಿಪರಾಯಣರಾಗಿ ನಿಂದುದೆ ಲಿಂಗದ ನಿಜದಂಗ. ಅದೆಂತೆಂದಡೆ; ತ್ರಿಗುಣಂ ಪಂಚಕಂ ಚೈವ ಚತ್ವಾರಿ ಷಡ್ವಿಧೈವ ಚ ಸಘಾತಂ ವ್ಯಸನಂ ಚೈವ ಇತ್ಯಾದಿ ಭವಿಮಿಶ್ರಿತಂ ಎಂದುದಾಗಿ, ಅಂತರಂಗದ ಭವಿಯನು ಹಿಂಗಿ, ಅನೃತಮಸ್ಥಿರಂ ವಾಕ್ಯಂ ವಂಚನಂ ಪಙ್ತಭೇದನಂ ಔದಾಸೀನಂ ನಿರ್ದಯತ್ವಂ ಷಡ್ವಿಧಂ ಭವಿಮಿಶ್ರಿತಂ ಎಂಬೀ ಮಾನವರಂಗದ ಭವಿಯನು ಕಳೆದು, ಅರ್ಚನಾದಿ ಕ್ರಿಯಾಕಾಲೇ ಪ್ರಚ್ಛನ್ನಂ ಪಟಮುತ್ತಮಂ ಪಾಪೀ ಕೋಪೀ ಪರಿಭ್ರಷ್ಟೋನಾಸ್ತಿಕೋ ವ್ರತದೂಷಕಃ ದುರ್ಜನಶ್ಚ ದುರಾಚಾರೀ ದುರ್ಮುಖಶ್ಚಾಪ್ಯದೀಕ್ಷಿತಃ ಪ್ರಮಾದಾದ್ದೃಶ್ಯತೇ ಯೇನ ತಸ್ಯ ಪೂಜಾ ತು ನಿಷ್ಫಲಂ ಎಂಬೀ ಬಹಿರಂಗದ ಭವಿಯನ್ನು ತೊಲಗಿಸಿ, ಇಂತೀ ತ್ರಿವಿಧಭವಿಯನು ದೂರಮಾಡಿ, ಶಿವಭಕ್ತಿಯೆ ಅಂಗವಾದ ಲಿಂಗೈಕ್ಯ ಲಿಂಗಪೂಜಕರಿಗೆ ಪೂರ್ವವರ್ಣಾಶ್ರಮಾದಿ ಸೂತಕವಿಲ್ಲ, ಕೂಡಲಸಂಗಯ್ಯಾ.
--------------
ಬಸವಣ್ಣ