ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಊರ ಮುಂದೆ ಹಾಲ ಹಳ್ಳ ಹರಿವುತ್ತಿರಲು, ಒರೆಯಾವಿನ ಬೆನ್ನ ಹರಿಯಲದೇಕಯ್ಯಾ ಲಜ್ಜೆಗೆಡಲೇಕೆ ನಾಣುಗೆಡಲೇಕೆ ಕೂಡಲಸಂಗಮದೇವನುಳ್ಳನ್ನಕ್ಕ ಬಿಜ್ಜಳನ ಭಂಡಾರವೆನಗೇಕಯ್ಯಾ.
--------------
ಬಸವಣ್ಣ
ಊಡುವ ಉಡಿಸುವ ಗಂಡನಿದ್ದಂತೆ ಜೋಡೆ, ಮಿಂಡಂಗೆ ಕಣ್ಣ ಚೆಲ್ಲುವಳ ಕೇಡಿಂಗೆ ಬೆರಗಾದೆ ನಾನು. ಕೂಡಲಸಂಗಮದೇವನು ಸಿಂಗಾರದ ಮೂಗ ಬಣ್ಣಿಸಿ, ಹಲುದೋರೆ ಕೊಯ್ವ.
--------------
ಬಸವಣ್ಣ
ಊರ ಸೀರೆಗೆ ಅಸಗ ಬಡಿ ಹಡೆದಂತೆ ಹೊನ್ನೆನ್ನದು, ಮಣ್ಣೆನ್ನದು ಎಂದು ಮರುಳಾದೆ, ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆ, ಕೂಡಲಸಂಗಮದೇವಾ. 310
--------------
ಬಸವಣ್ಣ