ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಏನಿದ್ದಡೇನಿದ್ದಡೊಲ್ಲದು ನಿಮ್ಮನುಭಾವಕ್ಕೆನ್ನ ಮನವು. ಡಂಬಕನೆಂಬವ ನಾನು ಕಂಡಯ್ಯಾ, ಕೂಡಲಸಂಗಮದೇವರ ಪೂಜಿಸಿ ಮಾನವರಾಸೆ ಬಿಡದಾಗಿ. 273
--------------
ಬಸವಣ್ಣ
ಏರಂಡದ ಬಿತ್ತಿನಂತೆ, ರಸವಾರಿಯಂತೆ, ಪಶುವಿನ ಪಿಸಿತದಲ್ಲಿ ತಲೆದೋರುವ ಅಮೃತದಂತೆ, ಕಾಯವಿಡಿದು ಬಂದಡೆ ನಿನಗಾ ಭಾವವಿಲ್ಲ. ಕೂಡಲಸಂಗಮದೇವರಲ್ಲಿ ಪ್ರಭುದೇವರ ಸುಳುಹು ಅಗಮ್ಯವಾಯಿತ್ತು.
--------------
ಬಸವಣ್ಣ
ಏನಯ್ಯಾ, ವಿಪ್ರರು ನುಡಿದಂತೆ ನಡೆಯರು, ಇದೆಂತಯ್ಯಾ ತಮಗೊಂದು ಬಟ್ಟೆ, ಶಾಸ್ತ್ರಕೊಂದು ಬಟ್ಟೆ ! ಕೂಡಲಸಂಗಮದೇವಯ್ಯಾ, ಹೊಲೆಯರ ಬಸುರಲ್ಲಿ ವಿಪ್ರರು ಹುಟ್ಟಿ ಗೋಮಾಂಸ ತಿಂಬರೆಂಬುದಕ್ಕೆ ಇದೆ ದೃಷ್ಟ.
--------------
ಬಸವಣ್ಣ
ಏತ ತಲೆವಾಗಿದಡೇನು, ಗುರುಭಕ್ತನಾಗಬಲ್ಲುದೆ ಇಕ್ಕುಳ ಕೈಮುಗಿದಡೇನು, ಭೃತ್ಯಾಚಾರಿಯಾಗಬಲ್ಲುದೆ ಗಿಳಿಯೋದಿದಡೇನು, ಲಿಂಗವೇದಿಯಾಗಬಲ್ಲುದೆ ಕೂಡಲಸಂಗನ ಶರಣರು ಬಂದ ಬರವ, ನಿಂದ ನಿಲವ ಅನಂಗಸಂಗಿಗಳೆತ್ತಬಲ್ಲರು! 125
--------------
ಬಸವಣ್ಣ
ಏನ ಮಾಡುವೆ ಎನ್ನ ಪುಣ್ಯವ ಫಲವು ! ಶಾಂತಿಯ ಮಾಡಹೋದಡೆ ಬೇತಾಳನಾಯಿತ್ತು. ಕೂಡಲಸಂಗಮದೇವರ ಪೂಜಿಸಿಹೆನೆಂದಡೆ ಭಕ್ತಿಯೆಂಬ ಮೃಗ ಎನ್ನನಟ್ಟಿ ಬಂದು ನುಂಗಿತ್ತಯ್ಯಾ.
--------------
ಬಸವಣ್ಣ
ಏನೆಂದುಪಮಿಸುವೆನಯ್ಯಾ ತನ್ನಿಂದ ತಾ ತೋರದೆ, ಗುರುಮುಖದಿಂದ ತೋರಿದ ತನ್ನ ನಿಲವ, ನಿರುಪಮನು. ಶಬ್ದಮುಗ್ಧವಾಗಿ, ಇದ್ದೆಡೆಯನಿದಿರಿಂಗೆ ತೋರದೆ ಇರವೆ ಪರವಾಗಿರ್ದ ಅಜಡನು. ಇನನುದಯಕಾಲಕ್ಕೆ ಕುಕ್ಕುಟ ಧ್ವನಿದೋರುವಂತೆ ಘನಮಹಿಮರ ದರ್ಶನದಿಂದ ಸತ್ಪ್ರಣವವ ತಾನಾಗಿ ನುಡಿದ ಮೂಲಿಗನು, ಕೂಡಲಸಂಗಮದೇವರಲ್ಲಿ ಬೆರೆಸಿ ಬೇರಿಲ್ಲದಿಪ್ಪ ಮರುಳುಶಂಕರದೇವರ ನಿಲವ ಪ್ರಭುದೇವರು ಸಿದ್ಧರಾಮಯ್ಯದೇವರು ಹಡಪದಪ್ಪಣ್ಣನಿಂದ ಕಂಡು ಎನ್ನ ಜನ್ಮ ಸಫಲವಾಯಿತ್ತಯ್ಯಾ.
--------------
ಬಸವಣ್ಣ
ಏನಿ ಬಂದಿರಿ, ಹದುಳಿದ್ದಿರೆ ಎಂದಡೆ ನಿ[ಮ್ಮೈ]ಸಿರಿ ಹಾರಿ ಹೋಹುದೆ ಕುಳ್ಳಿರೆಂದಡೆ ನೆಲ ಕುಳಿಹೋಹುದೆ ಒಡನೆ ನುಡಿದಡೆ ಸಿರ, ಹೊಟ್ಟೆಯೊಡೆವುದೆ ಕೊಡಲಿಲ್ಲದಿದ್ದಡೊಂದು ಗುಣವಿಲ್ಲದಿದ್ದಡೆ ಮೂಗ ಕೊಯ್ವುದ ಮಾಬನೆ ಕೂಡಲಸಂಗಮದೇವಯ್ಯ 241
--------------
ಬಸವಣ್ಣ
ಏನನೋದಿ, ಏನ ಕೇಳಿ, ಏನ ಮಾಡಿಯೂ ಫಲವೇನು, ನಿಮ್ಮವರೊಲಿಯದನ್ನಕ್ಕ ಶಿವ ಶಿವ, ಮಹಾದೇವಾ, ಬಾಳಿಲ್ಲದವಳ ಓಲೆಯಂತಾುತ್ತೆನಗೆ, ಕೂಡಲಸಂಗಮದೇವಾ. 297
--------------
ಬಸವಣ್ಣ
ಏನನಾದಡೆಯೂ ಸಾಧಿಸಬಹುದು, ಮತ್ತೇನನಾದಡೆಯೂ ಸಾಧಿಸಬಹುದಯ್ಯಾ ತಾನಾರೆಂಬುದ ಸಾಧಿಸಬಾರದು, ಕೂಡಲಸಂಗಮದೇವರ ಕರುಣವುಳ್ಳವಂಗಲ್ಲದೆ.
--------------
ಬಸವಣ್ಣ
ಏನೆಂಬೆ, ಏನೆಂಬೆ ಒಂದೆರಡಾದುದ ಏನೆಂಬೆ, ಏನೆಂಬೆ ಎರಡೊಂದಾದುದ ಏನೆಂಬೆ, ಏನೆಂಬೆ ಅವಿರಳ ಘನವ ಮಹಾದಾನಿ ಕೂಡಲಸಂಗಮದೇವಯ್ಯ ತಾನೆ ಬಲ್ಲ.
--------------
ಬಸವಣ್ಣ
ಏನ ಮಾಡುವೆ ಎನ್ನ ಪುಣ್ಯವ ಫಲವು ! ಶಾಂತಿಯ ಮಾಡಹೋದಡೆ ಬೇತಾಳನಾುತ್ತು. ಕೂಡಲಸಂಗಮದೇವರ ಪೂಜಿಸಿಹೆನೆಂದಡೆ ಭಕ್ತಿಯೆಂಬ ಮೃಗ ಎನ್ನನಟ್ಟಿ ಬಂದು ನುಂಗಿತ್ತಯ್ಯಾ. 525
--------------
ಬಸವಣ್ಣ