ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಒಡೆಯರಿಲ್ಲದ ಮನೆಯ ತುಡುಗುಣಿ ನಾಯಿ ಹುಗುವಂತೆ, ನೀನಿಲ್ಲದವರ ಮನೆಯ ಹೊಗೆನು, ಸಂಗಯ್ಯಾ, ಶ್ವಪಚೋಪಿಗಳಾಗಲಿ, ಕೂಡಲಸಂಗಯ್ಯಾ ನೀನಿದ್ದವನೆ ಕುಲಜನು.
--------------
ಬಸವಣ್ಣ
ಒಕ್ಕುದ ಮಿಕ್ಕುದನುಂಡು ಕಿವಿಕಿವಿದಾಡುವೆ. ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು, ಕೂಡಲಸಂಗನ ಶರಣರ ಮನೆಯ ಭಕ್ತಿಯ ಮರುಳ ನಾನು. 461
--------------
ಬಸವಣ್ಣ
ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ ಧರೆ ಹತ್ತಿ ಉರಿದಡೆ ನಿಲಲುಬಾರದು. ಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ, ನಾರಿ ತನ್ನ ಮನೆಯಲ್ಲಿ ಕಳುವಡೆ, ತಾಯ ಮೊಲೆವಾಲು ನಂಜಾಗಿ ಕೊಲುವಡೆ, ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ ! 26
--------------
ಬಸವಣ್ಣ
ಒಡಲ ಕಳವಳಕ್ಕೆ, ಬಾಯ ಸವಿಗೆ, ಬಯಸಿ ಉಂಡೆನಾದಡೆ ನಿಮ್ಮ ತೊತ್ತಿನ ಮಗನಲ್ಲ. ಬೇಡೆ, ಬೇಡೆ, ನಿಮ್ಮ ನಂಬಿದ ಸದ್ಭಕ್ತರ. ಅವರೊಕ್ಕುದನುಂಬೆನೆಂದಂತೆ ನಡೆವೆ. ಎನ್ನೊಡೆಯ ಕೂಡಲಸಂಗಮದೇವನೊಲ್ಲದವರ ಹಿಡಿದೆನಾದಡೆ ನಿಮ್ಮ ಪಾದದಾಣೆ.
--------------
ಬಸವಣ್ಣ
ಒಲ್ಲೆನಯ್ಯಾ, ಒಲ್ಲೆನಯ್ಯಾ, ನಿಮ್ಮವರಲ್ಲದವರ, ಒಲ್ಲೆನಯ್ಯಾ, ಒಲ್ಲೆನಯ್ಯಾ, ಜಗವೆಲ್ಲರಿಯಲು, ಒಲ್ಲೆನಯ್ಯಾ, ಒಲ್ಲೆನಯ್ಯಾ, ನೀ ಮುನಿದಡೆ ಮುನಿ. ಕೂಡಲಸಂಗಮದೇವಾ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ.
--------------
ಬಸವಣ್ಣ
ಒಡೆಯರ ಕಂಡಡೆ ಕಳ್ಳನಾಗದಿರಾ, ಮನವೆ. ಭವದ ಬಾರಿಯ ತಪ್ಪಿಸಿಕೊಂಬಡೆ ನೀನು ನಿಯತನಾಗಿ, ಭಯಭರಿತನಾಗಿ, ಅಹಂಕಾರಿಯಾಗದೆ ಶರಣೆನ್ನು, ಮನವೆ. ಕೂಡಲಸಂಗನ ಶರಣರಲ್ಲಿ ಭಕ್ತಿಯ ನೋನುವಡೆ ಕಿಂಕಿಲನಾಗಿ ಬದುಕು, ಮನವೆ. 275
--------------
ಬಸವಣ್ಣ
ಒಲೆಯ ಬೂದಿಯ ಬಿಲಿಯಲು ಬೇಡ, ಒಲಿದಂತೆ ಹೂಸಿಕೊಂಡಿಪ್ಪುದು. ಹೂಸಿ ಏನು ಫಲ, ಮನದಲ್ಲಿ ಲೇಸಿಲ್ಲದನ್ನಕ್ಕ ಒಂದನಾಡಹೋಗಿ ಒಂಬತ್ತನಾಡುವ ಡಂಬಕರ ಮೆಚ್ಚ ಕೂಡಲಸಂಗಯ್ಯ. 114
--------------
ಬಸವಣ್ಣ
ಒಡಲಿಲ್ಲದ ಭಕ್ತನ ಪರಿಯ ನೋಡಾ, ಮನಪ್ರಾಣಮುಕ್ತ, ಭವರಹಿತಜಂಗಮದ ಪರಿಯ ನೋಡಾ. ಸಿಡಿಲ ಮಿಂಚಿನ ಬೆಳಗನೊಂದೆಡೆಯಲ್ಲಿ ಹಿಡಿಯಲುಂಟೆ ಉಭಯ ಒಂದಾದವರ ಕಂಡಡೆ, ನೀವೆಂಬೆ ಕೂಡಲಸಂಗಮದೇವಾ.
--------------
ಬಸವಣ್ಣ
ಒಂದೆತ್ತಿಗೈವರು ಗೊಲ್ಲರು, ಅಯ್ವರಯ್ವರಿಗೆ ಐದೈದಾಗಿ ಐವರಾಳಯ್ಯಾ. ತಮ್ಮ ತಮ್ಮಿಚ್ಛೆಗೆ ಹರಿಹರಿದಾಡಿ ತಾವು ಕೆಟ್ಟು, ಎತ್ತನು ಕೆಡಿಸಿದರಯ್ಯಾ. ಎತ್ತಿನ ಹೊಯ್ಲಿನ್ನಾರಿಗೆ ಹೇಳುವೆ ಕೂಡಲಸಂಗಮದೇವಯ್ಯಾ.
--------------
ಬಸವಣ್ಣ
ಒಡಲುಗೊಂಡು ಹುಟ್ಟಿದ ಘಟ್ಟಕ್ಕೆ ಅಷ್ಟೋತ್ತರಶತವ್ಯಾಧಿ. ಅದಕ್ಕೆ ನಾನಾ ಔಷಧಿಯ ತಂದು ಹೊರೆವರು, ಆ ಪರಿಯ ನಾನದ ಹೊರಿಯೆನು. ಅದೇನು ಕಾರಣವೆಂದೆಡೆ : ಭವರೋಗವೈದ್ಯ, ಭವಹರನೆಂಬ ಬಿರಿದು ನಿಮ್ಮದಾಗಿ. ಇದು ಕಾರಣ ಕೂಡಲಸಂಗಮದೇವಾ, ನಿಮ್ಮ ಪುರಾತನರ ಪ್ರಸಾದವಲ್ಲದೆ ಕೊಂಡಡೆ ನಿಮ್ಮಾಣೆ.
--------------
ಬಸವಣ್ಣ
ಒಳ್ಳಿಹ ಮೈಲಾರನ ಒಳಗೆಲ್ಲ ಸಣಬು, ಹೊರಗಣ ಬಣ್ಣ ಕರ ಲೇಸಾುತ್ತಯ್ಯಾ. ಶ್ವಾನನ ನಿದ್ರೆ, ಅಜ್ಞಾನಿಯ ತಪದಂತೆ ಆುತ್ತಯ್ಯಾ ಎನ್ನ ಮತಿ, ಕೂಡಲಸಂಗಮದೇವಾ. 281
--------------
ಬಸವಣ್ಣ
ಒಂದುವನರಿಯದ ಸಂದೇಹಿ ನಾನಯ್ಯಾ, ನಂಬುಗೆುಲ್ಲದ ಡಂಬಕ ನಾನಯ್ಯಾ, ನಿಮ್ಮ ನಂಬಿದ ಶರಣರ ಡಿಂಗರಿಗ ನಾನು, ಕೂಡಲಸಂಗಮದೇವಾ. 465
--------------
ಬಸವಣ್ಣ
ಒಣಗಿಸಿ ಎನ್ನ ಘಣಘಣಲನೆ ಮಾಡಿದಡೆಯೂ, ಹರಣವುಳ್ಳನ್ನಕ್ಕ ನಿಮ್ಮ ಚರಣದ ನೆನೆವುದ ಮಾಣೆ, ಮಾಣೆ. ಶರಣೆಂಬುದ ಮಾಣೆ, ಮಾಣೆ. ಕೂಡಲಸಂಗಮದೇವಯ್ಯಾ, ಎನ್ನ ಹೆಣನ ಮೇಲೆ ಕಂಚಿಟ್ಟುಂಡಡೆಯೂ ಮಾಣೆ, ಮಾಣೆ.
--------------
ಬಸವಣ್ಣ
ಒಡವೆ ಭಂಡಾರ ಕಡವರ ದ್ರವ್ಯವ ಬಡ್ಡಿ ಬೆವಹಾರಕ್ಕೆ ಕೊಟ್ಟು ಮನೆಯ ಗೋಂಟಿನಲ್ಲಿ ಹೊಯಿದುಕೊಂಡಿದ್ದೆನಾದಡೆ ಅದು ಎನ್ನರ್ಥವಲ್ಲ, ಅನರ್ಥವೆಂದೆಂಬೆ. ಸಂಗಮದೇವಾ, ನೀನು ಜಂಗಮರೂಪಾಗಿ ಬಂದು ಆ ಧನವನು ನೀನು ಬಲ್ಲಂತೆ ಎನ್ನ ಮುಂದೆ ಸೂರೆಗೊಳುತಿರ್ದಡೆ, ನಾನು ಬೇಕು ಬೇಡೆಂದು ಮನದಲ್ಲಿ ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಕಾಮನೇಮವೆಂಬ ಸಿಂಧುಬಲ್ಲಾಳನ ವಧುವ ಸರ್ವಭುವನದೊಡೆಯ ಸಂಗಮದೇವರು ಬೇಡುವಂತಲ್ಲ. ಎನ್ನ ಸತಿ ನೀಲಲೋಚನೆ ಪೃಥ್ವಿಗಗ್ಗಳೆಯ ಚೆಲುವೆ, ಆಕೆಯನು ಸಂಗಮದೇವಾ, ನೀನು ಜಂಗಮರೂಪಾಗಿ ಬಂದು ಎನ್ನ ಮುಂದೆ ಸಂಗವ ಮಾಡುತ್ತಿರಲು ಎನ್ನೊಡನಿರ್ದ ಸತಿಯೆಂದು ಮಾಯಕ್ಕೆ ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಪ್ರತ್ಯಕ್ಷವಾಗಿ ಸಿರಿಯಾಳಸೆಟ್ಟಿ ಚಂಗಳವ್ವೆಯ ಮನೆಗೆ ಬಂದು ಅವರ ಮಗನ ಬೇಡುವಂತಲ್ಲ. ಸಂಗಮದೇವಾ, ನಿಮ್ಮ ಹೆಸರ ಚಿಕ್ಕಸಂಗಯ್ಯನಿದ್ದಾನೆ. ನೀನು ಜಂಗಮರೂಪಾಗಿ ಬಂದು, ಆತನ ಹಿಡಿದು ಎನ್ನ ಮುಂದೆ ಹೆಡಗುಡಿಯ ಕಟ್ಟಿ, ಚಿನಿಖಂಡವ ಮಾಡಿ ಬಾಣಸವ ಮಾಡುವಲ್ಲಿ, ಎನ್ನ ಉದರದಲ್ಲಿ ಬಂದ ಪುತ್ರನೆಂದು ಮಾಯಕ್ಕೆ ನಾನು ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಇಂತೀ ತ್ರಿವಿಧವೂ ಹೊರಗಣವು. ಎನ್ನ ನೋವಿನೊಳಗಲ್ಲ, ಎನ್ನ ಬೇನೆಯೊಳಗಲ್ಲ. ಇನ್ನು ನಾನಿದೇನೆ, ಕದ್ದ ಕಳ್ಳನ ಕಟ್ಟುವಂತೆ ಕಟ್ಟಿ, ನೀನು ಜಂಗಮರೂಪಾಗಿ ಬಂದು ಎನ್ನಂಗದ ಮೇಲೆ ಶಸ್ತ್ರವನಿಕ್ಕಿ ನೋಡು, ಬಸಿದ ಶೂಲಪ್ರಾಪ್ತಿಯ ಮಾಡಿ ನೋಡು, ಸೂಜಿಯ ಮೊನೆಯಂತಿರ್ದ ಶೂಲದ ಮೇಲಿಕ್ಕಿ ನೋಡು, ನವಖಂಡವ ಮಾಡಿ ಕಡಿಕಡಿದು ನೋಡು, ಆ ಶೂಲವೈದೈದು ಮುಖವಾಗಿ ಹಾಯುವಾಗ ಹರಿತಿನಿಸಿ ನೋಡು. ಈ ರೀತಿಯಲ್ಲಿ ಎನ್ನ ಭಂಗಬಡಿಸಿ ನೋಡಿದಡೆಯೂ ಲಿಂಗಾರ್ಚನೆಯ ಮಾಡುವುದ ಬಿಡೆ, ಜಂಗಮದಾಸೋಹವ ಮಾಡುವುದ ಬಿಡೆ, ಪಾದತೀರ್ಥಪ್ರಸಾದವ ಕೊಂಬುದ ಬಿಡೆ. ಇಂತೀ ತ್ರಿವಿಧಕ್ಕೆ ರೋಷವ ಮಾಡಿಬಿಟ್ಟೆನಾದಡೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ಇಷ್ಟರೊಳಗೆ ತಪ್ಪುಳ್ಳಡೆ ಮೂದಲಿಸಿ ಮೂಗಕೊಯಿ, ಕೂಡಲಸಂಗಮದೇವಾ. ಬಡ್ಡಿ ಬೆವಹಾರಕ್ಕೆ ಕೊಟ್ಟು ಮನೆಯ ಗೋಂಟಿನಲ್ಲಿ ಹೊಯಿದುಕೊಂಡಿದ್ದೆನಾದಡೆ ಅದು ಎನ್ನರ್ಥವಲ್ಲ, ಅನರ್ಥವೆಂದೆಂಬೆ. ಸಂಗಮದೇವಾ, ನೀನು ಜಂಗಮರೂಪಾಗಿ ಬಂದು ಆ ಧನವನು ನೀನು ಬಲ್ಲಂತೆ ಎನ್ನ ಮುಂದೆ ಸೂರೆಗೊಳುತಿರ್ದಡೆ, ನಾನು ಬೇಕು ಬೇಡೆಂದು ಮನದಲ್ಲಿ ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಕಾಮನೇಮವೆಂಬ ಸಿಂಧುಬಲ್ಲಾಳನ ವಧುವ ಸರ್ವಭುವನದೊಡೆಯ ಸಂಗಮದೇವರು ಬೇಡುವಂತಲ್ಲ. ಎನ್ನ ಸತಿ ನೀಲಲೋಚನೆ ಪೃಥ್ವಿಗಗ್ಗಳೆಯ ಚೆಲುವೆ, ಆಕೆಯನು ಸಂಗಮದೇವಾ, ನೀನು ಜಂಗಮರೂಪಾಗಿ ಬಂದು ಎನ್ನ ಮುಂದೆ ಸಂಗವ ಮಾಡುತ್ತಿರಲು ಎನ್ನೊಡನಿರ್ದ ಸತಿಯೆಂದು ಮಾಯಕ್ಕೆ ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಪ್ರತ್ಯಕ್ಷವಾಗಿ ಸಿರಿಯಾಳಸೆಟ್ಟಿ ಚಂಗಳವ್ವೆಯ ಮನೆಗೆ ಬಂದು ಅವರ ಮಗನ ಬೇಡುವಂತಲ್ಲ. ಸಂಗಮದೇವಾ, ನಿಮ್ಮ ಹೆಸರ ಚಿಕ್ಕಸಂಗಯ್ಯನಿದ್ದಾನೆ. ನೀನು ಜಂಗಮರೂಪಾಗಿ ಬಂದು, ಆತನ ಹಿಡಿದು ಎನ್ನ ಮುಂದೆ ಹೆಡಗುಡಿಯ ಕಟ್ಟಿ, ಚಿನಿಖಂಡವ ಮಾಡಿ ಬಾಣಸವ ಮಾಡುವಲ್ಲಿ, ಎನ್ನ ಉದರದಲ್ಲಿ ಬಂದ ಪುತ್ರನೆಂದು ಮಾಯಕ್ಕೆ ನಾನು ಮರುಗಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ. ಇಂತೀ ತ್ರಿವಿಧವೂ ಹೊರಗಣವು. ಎನ್ನ ನೋವಿನೊಳಗಲ್ಲ, ಎನ್ನ ಬೇನೆಯೊಳಗಲ್ಲ. ಇನ್ನು ನಾನಿದೇನೆ, ಕದ್ದ ಕಳ್ಳನ ಕಟ್ಟುವಂತೆ ಕಟ್ಟಿ, ನೀನು ಜಂಗಮರೂಪಾಗಿ ಬಂದು ಎನ್ನಂಗದ ಮೇಲೆ ಶಸ್ತ್ರವನಿಕ್ಕಿ ನೋಡು, ಬಸಿದ ಶೂಲಪ್ರಾಪ್ತಿಯ ಮಾಡಿ ನೋಡು, ಸೂಜಿಯ ಮೊನೆಯಂತಿರ್ದ ಶೂಲದ ಮೇಲಿಕ್ಕಿ ನೋಡು, ನವಖಂಡವ ಮಾಡಿ ಕಡಿಕಡಿದು ನೋಡು, ಆ ಶೂಲವೈದೈದು ಮುಖವಾಗಿ ಹಾಯುವಾಗ ಹರಿತಿನಿಸಿ ನೋಡು. ಈ ರೀತಿಯಲ್ಲಿ ಎನ್ನ ಭಂಗಬಡಿಸಿ ನೋಡಿದಡೆಯೂ ಲಿಂಗಾರ್ಚನೆಯ ಮಾಡುವುದ ಬಿಡೆ, ಜಂಗಮದಾಸೋಹವ ಮಾಡುವುದ ಬಿಡೆ, ಪಾದತೀರ್ಥಪ್ರಸಾದವ ಕೊಂಬುದ ಬಿಡೆ. ಇಂತೀ ತ್ರಿವಿಧಕ್ಕೆ ರೋಷವ ಮಾಡಿಬಿಟ್ಟೆನಾದಡೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ಇಷ್ಟರೊಳಗೆ ತಪ್ಪುಳ್ಳಡೆ ಮೂದಲಿಸಿ ಮೂಗಕೊಯಿ, ಕೂಡಲಸಂಗಮದೇವಾ.
--------------
ಬಸವಣ್ಣ
ಒಡೆಯರು ಬಂದಡೆ ಗುಡಿ ತೋರಣವ ಕಟ್ಟಿ, ನಂಟರು ಬಂದಡೆ ಸಮಯವಿಲ್ಲೆನ್ನಿ. ಅಂದೇಕೆ ಬಾರರು ನೀರಿಂಗೆ ನೇಣಿಂಗೆ ಹೊರಗಾದಂದು, ಸಮಯಾಚಾರಕ್ಕೆ ಒಳಗಾದಂದು. ಪರುಷ ಮುಟ್ಟಲು ಕಬ್ಬುನ ಸುವರ್ಣವಾಯಿತ್ತು. ಬಳಿಕ ಬಂಧುಗಳುಂಟೆ, ಕೂಡಲಸಂಗಮದೇವಾ 449
--------------
ಬಸವಣ್ಣ
ಒತ್ತಿ ಹೊಸೆದ ಕಿಚ್ಚ ನಾ ಮಾಡಿದೆನೆಂದು ಮುಟ್ಟಿ ಹಿಡಿದಡೆ, ಕೈ ಬೇಯದಿಹುದೆ ಎನ್ನಿಂದಾಯಿತ್ತು, ಎನ್ನಿಂದಾಯಿತ್ತು, ಎನ್ನಿಂದಾಯಿತ್ತು ಎನ್ನದಿರು ಮನವೆ, ನಾನು ಮಾಡಿದೆನೆನ್ನದಿರು ಮನವೆ. ಕೂಡಲಸಂಗಮದೇವ ಕೇಳಯ್ಯಾ, ಚೆನ್ನಬಸವಣ್ಣನ ಪಾದಕ್ಕೆ ನಮೋ ನಮೋ ಎಂಬೆನು.
--------------
ಬಸವಣ್ಣ
ಒಲಿದ ಗಂಡನೊಮ್ಮೆ ಒಲ್ಲದಿಪ್ಪ ಕಂಡವ್ವಾ. ತಪ್ಪೆನ್ನದು, ತಪ್ಪೆನ್ನದು ! ತನು ಮನ ಧನದಲ್ಲಿ ಮಾಟಕೂಟವೆಂದರಿಯದ ತಪ್ಪೆನ್ನದು, ತಪ್ಪೆನ್ನದು ! ಕಡೆುಲ್ಲದ ಹುಸಿ ಎನ್ನದು, ಕೂಡಲಸಂಗಮದೇವಾ. 315
--------------
ಬಸವಣ್ಣ
ಒಪ್ಪವ ನುಡಿವಿರಯ್ಯಾ ತುಪ್ಪವ ತೊಡೆದಂತೆ, ಶರಣ ತನ್ನ ಮೆರೆವನೆ ಬಿನ್ನಾಣಿಯಂತೆ ಕೂಡಲಸಂಗನ ಪ್ರಸಾದದಿಂದ ಬದುಕುವನಲ್ಲದೆ ತನ್ನ ಮೆರೆವನೆ
--------------
ಬಸವಣ್ಣ
ಒಂದು ಮೊಲಕ್ಕೆ ನಾಯನೊಂಬತ್ತು ಬಿಟ್ಟಂತೆ, ಎನ್ನ ಬಿಡು, ತನ್ನ ಬಿಡು ಎಂಬುದು ಕಾಯವಿಕಾರ, ಎನ್ನ ಬಿಡು, ತನ್ನ ಬಿಡು, ಎಂಬುದು ಮನೋವಿಕಾರ. ಕರಣೇಂದ್ರಿಯಂಗಳೆಂಬ ಸೊಣಗ ಮುಟ್ಟದ ಮುನ್ನ ಮನ ನಿಮ್ಮನೈದುಗೆ, ಕೂಡಲಸಂಗಮದೇವಾ. 36
--------------
ಬಸವಣ್ಣ
ಒಡೆಯರುಳ್ಳಾಳಿಂಗೆ ಕೇಡಿಲ್ಲ ಕಾಣಿರೊ ! ಊರೆನ್ನದೆ ಅಡವಿಯೆನ್ನದೆ, ಆಳನರಸಿ ಬಹ[ಆಳ್ದ]ರುಂಟೆ ? ಜೋಳವಾಳಿಂಗೆ ಬಿಜ್ಜಳಂಗೆ ಆಳಾದಡೇನು ವೇಳೆವಾಳಿಂಗೆ ಕೂಡಿಕೊಂಡಿಪ್ಪ ಕೂಡಲಸಂಗಮದೇವ.
--------------
ಬಸವಣ್ಣ
ಒಬ್ಬ ಕೆಂಚ, ಒಬ್ಬ ಕರಿಕ, ಒಬ್ಬ ಶುದ್ಧಧವಳಿತನೆಂತಯ್ಯಾ ಲಿಂಗವೆ ಒಬ್ಬರಿಗೊಬ್ಬರು ಘನವೆಂಬರು, ಅದೆಂತಯ್ಯಾ ಒಬ್ಬರಿಗೊಬ್ಬರು ಹಿರಿದೆಂಬರು, ಎಂತಯ್ಯಾ ಬ್ರಹ್ಮಂಗೆ ಪ್ರಳಯ, ವಿಷ್ಣುವಿಂಗೆ ಮರಣ ಉಂಟು. ಕೂಡಲಸಂಗಂಗಿಲ್ಲ.
--------------
ಬಸವಣ್ಣ
ಒಡನೆ ಹುಟ್ಟಿದುದಲ್ಲ, ಒಡನೆ ಬೆಳೆದುದಲ್ಲ, ಎಡೆಯಲಾದ ಒಂದು ಉಡುಗೆಯನುಟ್ಟು ಸಡಿಲಿದಡೆ ಲಜ್ಜೆ ನಾಚಿಕೆಯಾಯಿತ್ತೆಂಬ ನುಡಿ ದಿಟವಾಯಿತ್ತು ಲೌಕಿಕದಲ್ಲಿ. ಹಡೆದ ಗುರುಕರುಣವ, ಒಡನೆ ಹುಟ್ಟಿದ ನೇಮವನು ಬಿಡದಿರೆಲವೊ. ಬಿಟ್ಟಡೆ ಕಷ್ಟ, ಕೂಡಲಸಂಗಮದೇವನಡಸಿ ಕೆಡಹುವ ನಾಯಕನರಕದಲ್ಲಿ.
--------------
ಬಸವಣ್ಣ
ಒಡೆಯರೊಡವೆಯ ಕೊಂಡಡೆ ಕಳ್ಳಂಗಳಲಾಯಿತ್ತೆಂಬ ಗಾದೆ ಎನಗಿಲ್ಲಯ್ಯಾ. ಇಂದೆನ್ನ ವಧುವ, ನಾಳೆನ್ನ ಧನವ, ನಾಡಿದ್ದೆನ್ನ ತನುವ ಬೇಡರೇಕಯ್ಯಾ ಕೂಡಲಸಂಗಮದೇವಾ, ಆನು ಮಾಡಿದುದಲ್ಲದೆ ಬಯಸಿದ ಬಯಕೆ ಸಲುವುದೆ ಅಯ್ಯಾ.
--------------
ಬಸವಣ್ಣ
ಒಡೆಯರಿಗೆ ಒಡವೆಯನೊಪ್ಪಿಸಲಾರದೆ ಮೊರೆುಡುವ ಮನವ ನಾನೇನೆಂಬೆ ನೆತ್ತಿಯಲ್ಲಿ ಆಲಗ ತಿರುಹುವಂತಪ್ಪ ವೇದನೆಯಹುದೆನಗೆ. ಕೊಯ್ದ ಮೂಗಿಂಗೆ ಕನ್ನಡಿಯ ತೋರುವಂತಪ್ಪ ವೇದನೆಯಹುದೆನಗೆ. ಬೆಂದ ಹುಣ್ಣ ಕಂಬಿಯಲ್ಲಿ ಕೀಸುವಂತಪ್ಪ ವೇದನೆಯಹುದೆನಗೆ. ಕೂಡಲಸಂಗಮದೇ[ವಾ] ನೀ ಮಾಡಿ ನೋಡುವ ಹಗರಣವ ನಾ ಮಾಡಿಹೆನೆಂದಡೆ, ಮನಕ್ಕೆ ಮನ ನಾಚದೆ ಅಯ್ಯಾ 304
--------------
ಬಸವಣ್ಣ
ಒಬ್ಬನ ಮನೆಯಲುಂಡು ಹೊತ್ತುಗಳೆದೆ, ಒಬ್ಬನ ಮನೆಯಲುಡಲೊಂದ ಗಳಿಸಿದೆ, ಗರ್ವ ಬೇಡ ಬೇಡ ನಿನಗೆ. ಚೆನ್ನಯ್ಯನ ಮನೆಯಲಂಬಲಿಯನುಂಡು ಬದುಕಿದೆ. ಗರ್ವ ಬೇಡ ಬೇಡ. ಕೂಡಲಸಂಗಯ್ಯಾ, ಸಿರಿಯಾಳನಿಂದ ಮಾನಿಸಲೋಕಗಂಡೆ.
--------------
ಬಸವಣ್ಣ

ಇನ್ನಷ್ಟು ...