ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಓಡುವಾತ ಲೆಂಕನಲ್ಲ, ಬೇಡುವಾತ ಭಕ್ತನಲ್ಲ. ಓಡಲಾಗದು ಲೆಂಕನು, ಬೇಡಲಾಗದು ಭಕ್ತನು. ಓಡೆನಯ್ಯಾ, ಬೇಡೆನಯ್ಯಾ, ಕೂಡಲಸಂಗಮದೇವಾ. 442
--------------
ಬಸವಣ್ಣ
ಓಂ ನಮಃ ಶಿವಾಯ ಎಂಬ ಮಂತ್ರವ ಮೀರಲಮ್ಮದೆ ನಿಂದವು ವೇದ, ಓಂ ನಮಃ ಶಿವಾಯ ಎಂಬ ಮಂತ್ರವ ಮೀರಲಮ್ಮದೆ ನಿಂದವು ಶಾಸ್ತ್ರ, ಓಂ ನಮಃ ಶಿವಾಯ ಎಂಬ ಮಂತ್ರವ ಮೀರಲಮ್ಮದೆ ನಿಂದವು ತರ್ಕ. ಭಯಂಕರ ಭ್ರಮೆಗೊಂಡಿತ್ತು ಮಂತ್ರ-ತಂತ್ರ, ಶಿವನಂತುವನರಿಯದೆ ಚಿಂತಿಸುತ್ತಿದ್ದಿತ್ತು ಲೋಕ, ಕೂಡಲಸಂಗಮದೇವ ಶ್ವಪಚನ ಮೆರೆದಡೆ ಜಾತಿಭೇದವ ಮಾಡಲಮ್ಮವು.
--------------
ಬಸವಣ್ಣ
ಓಡಲಾರದ ಮೃಗವು ಸೊಣಗಂಗೆ ಮಾಂಸವನೀವಂತೆ ಮಾಡಲಾಗದು ಭಕ್ತನು, ಕೊಳಲಾಗದು ಜಂಗಮ, ಹಿರಿಯರು ನರಮಾಂಸವ ಭುಂಜಿಸುವರೆ ತನುವುಕ್ಕಿ ಮನವುಕ್ಕಿ ಮಾಡಬೇಕು ಭಕ್ತನು, ಮಾಡಿಸಿಕೊಳ್ಳಬೇಕು ಜಂಗಮ, ಕೂಡಲಸಂಗಮದೇವಾ. 230
--------------
ಬಸವಣ್ಣ
ಓದಿದಡೇನು, ಕೇಳಿದಡೇನು, ಶಿವಪಥವನರಿಯದನ್ನಕ್ಕ ಓದಿತ್ತು ಕಾಣಿರೋ ಶುಕನು, ಶಿವಜ್ಞಾನವನರಿಯದನ್ನಕ್ಕ. ಓದಿದ ಫಲವು ಮಾದಾರ ಚೆನ್ನಯ್ಯಂಗಾುತ್ತು ಕೂಡಲಸಂಗಮದೇವಾ. 143
--------------
ಬಸವಣ್ಣ
ಓಡೆತ್ತ ಬಲ್ಲುದು ಅವಲಕ್ಕಿಯ ಸವಿಯ ಕೋಡುಗ ಬಲ್ಲುದೆ ಸೆಳೆಮಂಚದ ಸುಖವ ಕಾಗೆ ನಂದನವನದೊಳಗಿದ್ದಡೇನು, ಕೋಗಿಲೆಯಾಗಬಲ್ಲುದೆ ಹೇಳಾ ಕೊಳನ ತಡಿಯಲೊಂದು ಹೊರಸು ಕುಳ್ಳಿರ್ದಡೇನು, ಕಳಹಂಸಿಯಾಗಬಲ್ಲುದೆ, ಕೂಡಲಸಂಗಮದೇವಾ 98
--------------
ಬಸವಣ್ಣ
ಓಡದಿರು, ಓಡದಿರು ನಿನ್ನ ಬೇಡುವಾತ ನಾನಲ್ಲ ಶಿವನೆ, ನೋಡುವೆನು ಕಣ್ಣ ತುಂಬ, ಆಡಿ ಪಾಡಿ ನಲಿದಾಡುವೆ. ಬೇಡೆನ್ನ ಕೂಡೆ ಮಾತಾಡಲಾಗದೆ, ಎಲೆ ಶಿವನೆ. ಕೂಡಲಸಂಗಮದೇವಾ, ನೀನಾಡಿಸುವ ಬೊಂಬೆ ನಾನು.
--------------
ಬಸವಣ್ಣ
ಓದಿನ ಹಿರಿಯರು, ವೇದದ ಹಿರಿಯರು, ಶಾಸ್ತ್ರದ ಹಿರಿಯರು, ಪುರಾಣದ ಹಿರಿಯರು, ವೇಷದ ಹಿರಿಯರು, ಭಾಷೆಯ ಹಿರಿಯರು, ಇವರೆಲ್ಲರು ತಮ್ಮ ತಮ್ಮನೆ ಮೆರೆದರಲ್ಲದೆ ನಿಮ್ಮ ಮೆರೆದುದಿಲ್ಲ. ತಮ್ಮ ಮರೆದು ನಿಮ್ಮ ಮೆರೆದಡೆ ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವರು.
--------------
ಬಸವಣ್ಣ
ಓತಿ ಬೇಲಿವರಿವಂತೆ ಎನ್ನ ಮನವಯ್ಯಾ, ಹೊತ್ತಿಗೊಂದು ಪರಿನಪ್ಪ ಗೋಸುಂಬೆಯಂತೆನ್ನ ಮನವು, ಬಾವುಲ ಬಾಳುವೆಯಂತೆನ್ನ ಮನವು. ನಡುವಿರುಳೆದ್ದ ಕುರುಡಂಗೆ ಅಗುಸೆಯಲ್ಲಿ ಬೆಳಗಾದಂತೆ ನಾನಿಲ್ಲದ ಭಕ್ತಿಯ ಬಯಸಿದಡುಂಟೆ ಕೂಡಲಸಂಗಮದೇವಾ 288
--------------
ಬಸವಣ್ಣ