ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ನೋಡುವರುಳ್ಳಡೆ ಮಾಡುವೆ ದೇಹಾರವ. ಎನಗೊಂದು ನಿಜವಿಲ್ಲ, ಎನಗೊಂದು ನಿಷ್ಪತ್ತಿುಲ್ಲ. ಲಿಂಗವ ತೋರಿ ಉದರವ ಹೊರೆವ ಭಂಗಗಾರ ನಾನು, ಕೂಡಲಸಂಗಮದೇವಾ. 307
--------------
ಬಸವಣ್ಣ
ನೆಲನೊಂದೆ:ಹೊಲಗೇರಿ ಶಿವಾಲಯಕ್ಕೆ, ಜಲವೊಂದೆ:ಶೌಚಾಚಮನಕ್ಕೆ, ಕುಲವೊಂದೆ:ತನ್ನ ತಾನರಿದವಂಗೆ, ಫಲವೊಂದೆ:ಷಡುದರುಶನ ಮುಕ್ತಿಗೆ, ನಿಲವೊಂದೆ:ಕೂಡಲಸಂಗಮದೇವಾ, ನಿಮ್ಮನರಿದವಂಗೆ.
--------------
ಬಸವಣ್ಣ
ನೆಲ್ಲ ಗಿಡುವಿನೊಳಗೆ ನಾನೊಂದು ಹುಲ್ಲಾಗಿ ಹುಟ್ಟಿದೆನಯ್ಯಾ. ಆನು ಭಕ್ತನೆಂದೆಂಬೆನೆ, ಆನು ಯುಕ್ತನೆಂದೆಂಬೆನೆ ಆನು ಕೂಡಲಸಂಗನ ಶರಣರೊಕ್ಕುದನುಂಡಡೆ, ಪಾದರಕ್ಷೆಗೆ ಸರಿಯಹೆನೆ
--------------
ಬಸವಣ್ಣ
ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ ಸಲಹುತ್ತ, ಶಿವ ಶಿವಾ ಎಂದೋದಿಸಯ್ಯಾ. ಭಕ್ತಿಯೆಂಬ ಪಂಜರದೊಳಗಿಕ್ಕಿ ಸಲಹು, ಕೂಡಲಸಂಗಮದೇವಾ. 58
--------------
ಬಸವಣ್ಣ
ನೋಡಿರೇ ನೋಡಿರೇ ಪೂರ್ವದತ್ತವ; ವರುಣ ಹೆಳವ, ರವಿ ಕುಷ್ಟ, ಶುಕ್ರನಂಧಕ, ಶನಿಗೆ ಸಂಕಲೆ, ಬಲಿಗೆ ಬಂಧನ, ಸೀತೆಗೆ ಧ್ರೌಪದಿಗೆ ಸೆರೆ, ಹರಿ ಹಂದಿಯಾದ, ಅರುಹಂಗೆ ಲಜ್ಜೆ, ಬ್ರಹ್ಮನ ಶಿರಹೋಯಿತ್ತು, ಬಲ್ಲಿದನೆಂಬವನ ಕೊಡೆವಿಡಿಸದೆ ವಿದ್ಥಿ ಜತ್ತಕನೆಂಬವನ ಕತ್ತೆಯ ಮಾಡಿತ್ತು. ದಶಮುಖನ ನಾಯ ಡೋಣಿಯಲ್ಲಿ ಉಣಿಸಿತ್ತು. ದೇವೇಂದ್ರನ ಮೈಯ್ಯ ನಾಣುಗೆಡಿಸಿತ್ತು. ಶೂದ್ರಕನ ತಲೆ ಕಂಚಿಯಾಲದಲ್ಲಿ ನೇರಿತ್ತು. ಕೂಡಲಸಂಗಮದೇವಯ್ಯಾ, ನೀ ಮಾಡಿದ ಮಾಯೆಯನಂತರನಾಳಿಗೊಂಡಿತ್ತು.
--------------
ಬಸವಣ್ಣ
ನೂರನೋದಿ ನೂರ ಕೇಳಿ ಏನು ಆಸೆ ಬಿಡದು, ರೋಷ ಪರಿಯದು. ಮಜ್ಜನಕ್ಕೆರೆದು ಫಲವೇನು ಮಾತಿನಂತೆ ಮನವಿಲ್ಲದ ಜಾತಿ [ಡಂ]ಬರ ನೋಡಿ ನಗುವ ನಮ್ಮ ಕೂಡಲಸಂಗಮದೇವ.
--------------
ಬಸವಣ್ಣ
ನಮಃ ಶಿವಾಯ ನಮಃ ಶಿವಾಯ ನಮಃ ಶಿವಾಯ ಶರಣೆಂದಿತ್ತು ಲಲಾಟಲಿಖಿತ, ಬರೆದ ಬಳಿಕ ಪಲ್ಲಟವ ಮಾಡಬಾರದು. ಎನ್ನ ಉರದ ಉಂಡಿಗೆ, ಶಿರದ ಅಕ್ಷರ ಕೂಡಲಸಂಗಯ್ಯಾ ಶರಣೆಂದಿತ್ತು. 86
--------------
ಬಸವಣ್ಣ
ನಿನ್ನ ಜನ್ಮದ ಪರಿಭವವ ಮರದೆಯಲ್ಲಾ ಮನವೆ, ಲಿಂಗವ ನಂಬು ಕಂಡಾ ಮನವೆ, ಜಂಗಮವ ನೆರೆ ನಂಬು ಕಂಡಾ, ಎಲೆ ಮನವೆ, ಕೂಡಲಸಂಗಮದೇವರ ಬೆಂಬತ್ತು ಕಂಡಾ, ಎಲೆ ಮನವೆ.
--------------
ಬಸವಣ್ಣ
ನಿಮ್ಮ ಭಕ್ತಿಯಲ್ಲಿ ಧರಧುರನೆಂಬೆ. ದಿಟಕ್ಕೆ ಬಂದಡೆ ಅಡ್ಡ ಮುಖವನಿಕ್ಕುವೆ- ಗರುಡಂಗೆ ಘಟಸರ್ಪನ ತೋರುವಂತೆ ! ಶಿವಶರಣೆಂದಡೆ ಕಿವಿ ಕೇಳದಂತಿಹೆನು, ಮನಕ್ಕೆ ಮನವೇ ಸಾಕ್ಷಿಯಯ್ಯಾ, ಕೂಡಲಸಂಗಮದೇವಾ. 312
--------------
ಬಸವಣ್ಣ
ನೇಹದ ಸುಖವ ನೋಟ ನುಂಗಿತ್ತು, ನೋಟದ ಸುಖವ ಕೂಟ ನುಂಗಿತ್ತು, ಕೂಟದ ಸುಖವ ಆಲಿಂಗನ ನುಂಗಿತ್ತು, ಆಲಿಂಗದ ಸುಖವ ಸಂಗ ನುಂಗಿತ್ತು, ಸಂಗದ ಸುಖವ ಪರವಶ ನುಂಗಿತ್ತು, ಪರವಶದ ಸುಖವ ಕೂಡಲಸಂಗಯ್ಯ ತಾನೆ ಬಲ್ಲ.
--------------
ಬಸವಣ್ಣ
ನಾನೊಂದ ನೆನೆದಡೆ ತಾನೊಂದ ನೆನೆವುದು, ನಾನಿತ್ತಲೆಳೆದಡೆ ತಾನತ್ತಲೆಳೆವುದು. ತಾ ಬೇರೆ ಎನ್ನನಳಲಿಸಿ ಕಾಡಿತ್ತು, ತಾ ಬೇರೆ ಎನ್ನ ಬಳಲಿಸಿ ಕಾಡಿತ್ತು. ಕೂಡಲಸಂಗನ ಕೂಡಿಹೆನೆಂದಡೆ ತಾನೆನ್ನ ಮುಂದುಗೆಡಿಸಿತ್ತು ಮಾಯೆ. 14
--------------
ಬಸವಣ್ಣ
ನೋಡಿ ನೋಡಿ ಮಾಡುವ ನೇಮ ಸಲ್ಲವು, ಸಲ್ಲವು. ತನುವುದ್ದೇಶ, ಮನವುದ್ದೇಶವಾಗಿ ಮಾಡುವ ನೇಮ ಸಲ್ಲವು, ಸಲ್ಲವು. ಗುರುಪಥವ ಮೀರಿ ಮಾಡುವ ನೇಮ ಸಲ್ಲವು, ಸಲ್ಲವು. ಕೂಡಲಸಂಗಮದೇವಯ್ಯಾ ಇವು ನಿಮ್ಮ ನಿಜದೊಳಗೆ ನಿಲ್ಲವು, ನಿಲ್ಲವು. 71
--------------
ಬಸವಣ್ಣ
ನಾಗಂಗೆ ಹೊಸತನಿಕ್ಕಿಹೆವೆಂಬರು, ನಾಗ ಬಂದಡೆ ಕೋಲ ಕಳೆದುಕೊಂಬರು. ಆಗದಯ್ಯಾ, ಜಂಗಮಲಿಂಗವೆಂಬ ಶಬ್ದವಾಗದಯ್ಯಾ, ಕೂಡಲಸಂಗಮದೇವನಲ್ಲಿ ಸಿಂಧುಬಲ್ಲಾಳಂಗಲ್ಲದೆ ಆಗದಯ್ಯಾ. 195
--------------
ಬಸವಣ್ಣ
ನಾ ನಿಮ್ಮ ನೆನೆವನು, ನೀವೆನ್ನನರಿುರಿ. ನಾ ನಿಮ್ಮನೋಲೈಸುವೆನು, ನೀವೆನ್ನ ಕಾಣಿರಿ. ನಾನೆಂತು ಬದುಕುವೆನೆಂತು ಜೀವಿಸುವೆನಯ್ಯಾ ಕೂಡಲಸಂಗಮದೇವಾ, ಎನಗೆ ನೀವೆ ಪ್ರಾಣ ಗತಿ ಮತಿ, ನೋಡಯ್ಯಾ. 480
--------------
ಬಸವಣ್ಣ
ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ ಎನ್ನೊಳಗಿದ್ದು ನಿನ್ನ ತೋರಲಿಕೆ ನೀನೆ ರೂಪಾದೆ. ಇನ್ನು ಜಂಗಮವೆ ಲಿಂಗವೆಂದು ನಂಬಿದೆ, ಕೂಡಲಸಂಗಮದೇವಾ.
--------------
ಬಸವಣ್ಣ
ನೀವು ಹಿರಿಯರೆಂಬಿರಿ, ಕರ್ಮಿಗಳು, ನೀವು ಕೇಳಿರಿ, ನಿಮ್ಮ ವೇದಶಾಸ್ತ್ರಂಗಳು ಆರ ಹೊಗಳುತ್ತಿದ್ದಾವು `ಓಂ ದ್ಯಾವಾ ಭೂಮೀ ಜನಯನ್ ದೇವ ಏಕಃ' ಎಂದು ಶ್ರುತಿ ಸ್ಮøತಿಗಳು ಸಾರುತ್ತಿದ್ದಾವು. `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬುದು ಹುಸಿ, `ವರ್ಣಾನಾಂ ಗುರುಃ' ನಮ್ಮ ಕೂಡಲಸಂಗನ ಶರಣರು.
--------------
ಬಸವಣ್ಣ
ನಾಳೆ ಬಪ್ಪುದು ನಮಗಿಂದೆ ಬರಲಿ, ಇಂದು ಬಪ್ಪುದು ನಮಗೀಗಲೆ ಬರಲಿ, ಇದಕಾರಂಜುವರು, ಇದಕಾರಳುಕುವರು `ಜಾತಸ್ಯ ಮರಣಂ ಧ್ರುವಂ' ಎಂದುದಾಗಿ ನಮ್ಮ ಕೂಡಲಸಂಗಮದೇವರು ಬರೆದ ಬರೆಹವ ತಪ್ಪಿಸುವಡೆ ಹರಿಬ್ರಹ್ಮಾದಿಗಳಿಗಳವಲ್ಲ.
--------------
ಬಸವಣ್ಣ
ನಿಮಿಷದ ನಿಮಿಷಂ ಭೋ, ಕ್ಷಣದೊಳಗರ್ಧಂ ಭೋ, ಕಣ್ಣುಮುಚ್ಚಿ ಬಿಚ್ಚುವಿನಿಸು ಬೇಗಂ ಭೋ, ಸಂಸಾರದಾಗುಂ ಭೋ, ಸಂಸಾರದ ಹೋಗುಂ ಭೋ, ಸಂಸಾರಂ ಭೋ : ಕೂಡಲಸಂಗಮದೇವ ಮಾಡಿದ ಮಾಯಂ ಭೋ, ಅಭ್ರಚ್ಛಾಯಂ ಭೋ. 168
--------------
ಬಸವಣ್ಣ
ನೀರ ಕಂಡಲ್ಲಿ ಮುಳುಗುವರಯ್ಯಾ, ಮರನ ಕಂಡಲ್ಲಿ ಸುತ್ತುವರಯ್ಯಾ. ಬತ್ತುವ ಜಲವ, ಒಣಗುವ ಮರನ ಮಚ್ಚಿದವರು ನಿಮ್ಮನೆತ್ತ ಬಲ್ಲರು ಕೂಡಲಸಂಗಮದೇವಾ.
--------------
ಬಸವಣ್ಣ
ನೆರೆ ನಂಬೋ ನೆರೆ ನಂಬೋ ಧರಧುರವಿಲ್ಲದೆ ಸಾಮವೇದಿಗಳಂತೆ, ನೆರೆ ನಂಬೋ ನೆರೆ ನಂಬೋ ದಾಸ-ದುಗ್ಗಳೆಯಂತೆ, ನೆರೆ ನಂಬೋ ನೆರೆ ನಂಬೋ ಸಿರಿಯಾಳ-ಚಂಗಳೆಯಂತೆ, ನೆರೆ ನಂಬೋ ನೆರೆ ನಂಬೋ ಸಿಂಧು-ಬಲ್ಲಾಳನಂತೆ, ನೆರೆ ನಂಬಿದೆಯಾದಡೆ ತನ್ನನೀವ ಕೂಡಲಸಂಗಮದೇವ. 149
--------------
ಬಸವಣ್ಣ
ನಾನೊಂದು ಕಾರಣ ಮತ್ರ್ಯಕ್ಕೆ ಬಂದೆನು, ಬಂದ ಬಳಲಿಕೆಯ ಪರಿಹರಿಸಲಿಕ್ಕೆ ಚೆನ್ನಬಸವಣ್ಣ ಬಂದನು, ಇನ್ನು ಬಾರದಂತೆ ಪ್ರಭುದೇವರು ಬಂದರು, ಇದಕ್ಕೆ ಆಜ್ಞಾಕರ್ತೃ ಮಡಿವಾಳ ಮಾಚಿತಂದೆ ಬಂದನು. ನಾನಿನ್ನಾರಿಗಂಜೆನು, ಬದುಕಿದೆನು ಕಾಣಾ ಕೂಡಲಸಂಗಮದೇವಾ.
--------------
ಬಸವಣ್ಣ
ನಡೆಯಲರಿಯದೆ, ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು ! ಫಲವೇನು ! ಅವರ ದುಃಖವೆನ್ನ ದುಃಖ, ಅವರ ಸುಖವೆನ್ನ ಸುಖ. ಕೂಡಲಸಂಗನ ಶರಣರ ಮನನೊಂದಡೆ ಆನು ಬೆಂದೆನಯ್ಯಾ. 409
--------------
ಬಸವಣ್ಣ
ನಂಬಿದಡೆ ಪ್ರಸಾದ; ನಂಬದಿದ್ದಡೆ ವಿಷವು. ತುಡುಕಬಾರದು ನೋಡಾ, ಲಿಂಗನ ಪ್ರಸಾದ, ಕೂಡಲಸಂಗನ ಪ್ರಸಾದ ಸಿಂಗಿ, ಕಾಳಕೂಟ ವಿಷವು.
--------------
ಬಸವಣ್ಣ
ನೀವಿರಿಸಿದ ಮನದಲ್ಲಿ ನಾನಂಜೆನಯ್ಯಾ, ಮನವು ಮಹಾಘನಕ್ಕೆ ಶರಣುಗತಿವೊಕ್ಕುದಾಗಿ. ನೀವಿರಿಸಿದ ಧನದಲ್ಲಿ ನಾನಂಜೆನಯ್ಯಾ, ಧನವು ಸತಿಸುತಮಾತಾಪಿತರಿಗೆ ಸವೆಯದಾಗಿ. ನೀವಿರಿಸಿದ ತನುವಿನಲ್ಲಿ ನಾನಂಜೆನಯ್ಯಾ, ತನುವು ಸರ್ವಾರ್ಪಿತದಲ್ಲಿ ನಿಯತಪ್ರಸಾದಭೋಗಿಯಾಗಿ. ಇದು ಕಾರಣ, ವೀರಧೀರಸಮಗ್ರನಾಗಿ ನಿಮಗಾನಂಜೆ, ಕೂಡಲಸಂಗಮದೇವಾ.
--------------
ಬಸವಣ್ಣ
ನಿಧಾನವನರಸಿಹೆನೆಂದು ಹೋದಡೆ, ವಿಘ್ನಬಪ್ಪುದು ಮಾಬುದೆ ಸದಾಶಿವನೆಂದಡೆ, ಬೆದರಟ್ಟಿ ಸುಡುವುದು ಮಾಬುದೆ ಹದುಳಿಗನಾಗಿ ಉಳಿದಡೆ ಪದವನೀವ ಕಾಣಾ ಕೂಡಲಸಂಗಮದೇವ.
--------------
ಬಸವಣ್ಣ

ಇನ್ನಷ್ಟು ...