ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಬಲಿಯ ಭೂಮಿ, ಕರ್ಣನ ಕವಚ, ಖಚರನ ಆಸ್ಥಿ, ಶಿಬಿಯ ಮಾಂಸ ವೃಥಾ ಹೋುತ್ತಲ್ಲಾ, ಶಿವಭಕ್ತಿಮತಿಕ್ರಮ್ಯ ಯದ್ದಾನಂ ಚ ವಿದ್ಥೀಯತೇ ನಿಷ್ಫಲಂ ತು ಭವೇದ್ದಾನಂ ರೌರವಂ ನರಕಂ ವ್ರಜೇತ್ ಇಂತೆಂದುದಾಗಿ, ಕೂಡಲಸಂಗನ ಶರಣರನರಿಯದೆ ಕೀರ್ತಿವಾರ್ತೆಗೆ ಮಾಡಿದವನ ಧನವು ವೃಥಾ ಹೋುತ್ತಲ್ಲಾ. 224
--------------
ಬಸವಣ್ಣ
ಬಿದಿರಲಂದಣವಕ್ಕು, ಬಿದಿರೆ ಸತ್ತಿಗೆಯಕ್ಕು, ಬಿದಿರಲ್ಲಿ ಗುಡಿಯು ಗೂಡಾರವಕ್ಕು, ಬಿದಿರಲ್ಲಿ ಸಕಲಸಂಪದವೆಲ್ಲವು, ಬಿದಿರದವರ ಮೆಚ್ಚ ಕೂಡಲಸಂಗಮದೇವ. 221
--------------
ಬಸವಣ್ಣ
ಬಡಗವಾಗಿಲ ¥õ್ಞಳಿಯ ಭರವಸದಿಂ ಪೊಕ್ಕು, ಪಶ್ಚಿಮದ್ವಾರದ ಧವಳಾರಮಂ ಪಶ್ಚಿಮದಿ ಪೊಕ್ಕು, ತ್ರಿವಿಧಗತಿಯ ಶೂನ್ಯಸಿಂಹಾಸನದ ಮೇಲೆ ತರಹರವಾದಡೆ ನಂಬುವುದೆನ್ನ ಮನವು. ಕೂಡಲಸಂಗಮದೇವರು ಸಾಕ್ಷಿಯಾಗಿ, ನೀನು ನಮ್ಮ ಕೋಪಿಸಿದಡೆ ಕೋಪಿಸು, ಚೆನ್ನಬಸವಣ್ಣಾ.
--------------
ಬಸವಣ್ಣ
ಬ್ರಹ್ಮಸಭೆ ನೆರೆದಲ್ಲಿ ಬ್ರಹ್ಮವಿತ್ತುಗಳು ಬ್ರಹ್ಮತ್ವವಡೆದು, ತಮ್ಮ ವಚನಬ್ರಹ್ಮರೆನಿಸಿಕೊಂಡು ನೆಮ್ಮುವರು ವಿಷ್ಣುವನು- ತಮ್ಮ ದೈವವ ಬಿಡುವುದಾವುದುಚಿತ ವಿಷ್ಣು ಶಿವಭಕ್ತನಾಗಿ ನಿಷ್ಠೆಯಿಂದ ಕಣ್ಣನಿತ್ತು ಹಡೆದನು ಶಿವಭಕ್ತಿಯಿಂದ. ಕಷ್ಟಜಾತಿ ಜೀವಿಗಳಿಗೆ ಮಟ್ಟಿ ಎಂತು ಬಂದತ್ತೊ ! ಮುಟ್ಟರೊಂದುವನು ಮೂವಿಧಿಬಟ್ಟರೊ ! ಹುಸಿವನೆ ಹೊಲೆಯನೆಂದು ವಚನವುಂಟು ಲೋಕದಲ್ಲಿ. ಹುಸಿದಜನ ಶಿರ ಹೋಯಿತ್ತಾದಿಯಲ್ಲಿ, ಎಸವೋದ ಕಿರುಪಶುವನುಸರಲೀಯದೆ ವಿ[ದಾರಿ]ಸಿ ತಿಂಬ ಜನ್ಮ ಅದಾವ ಫಲವೋ. ದಕ್ಷ ಯಾಗವ ಮಾಡಿ ನಿಕ್ಷೇತ್ರ ನೆರೆದ ಅಕಟಕಟಾ, ಕೇಳಿಯೂ ಏಕೆ ಮಾಣಿರೊ ಮಮಕರ್ತ ಕೂಡಲಸಂಗನ ಶರಣರು ಅಕ್ಷಯರದ್ಥಿಕರು, ವಿಪ್ರರು ಕೀಳು ಜಗವೆಲ್ಲರಿಯಲು !
--------------
ಬಸವಣ್ಣ
ಬೇರೂರಲಿದ್ದು ಬಂದ ಜಂಗಮವೆ ಲಿಂಗವೆಂದು, ಮನೆಯಲಿದ್ದ ಜಂಗಮವನುದಾಸೀನವ ಮಾಡಿದಡೆ ನಾನು ಬೆಂದೆನಯ್ಯಾ. ಆನು ಬೆಂದ ಬೇಗೆಯನರಿಯೆ, ಕಾಣಾ ಕೂಡಲಸಂಗಮದೇವಾ. 411
--------------
ಬಸವಣ್ಣ
ಬೇವಿನ ಬೀಜವ ಬಿತ್ತಿ, ಬೆಲ್ಲದ ಕಟ್ಟಿಯ ಕಟ್ಟಿ, ಆಕಳ ಹಾಲನೆರೆದು, ಜೇನುತುಪ್ಪವ ಹೊಯ್ದಡೆ, ಸಿಹಿಯಾಗಬಲ್ಲುದೆ, ಕಹಿಯಹುದಲ್ಲದೆ ಶಿವಭಕ್ತರಲ್ಲದವರ ಕೂಡೆ ನುಡಿಯಲಾಗದು, ಕೂಡಲಸಂಗಮದೇವಾ.
--------------
ಬಸವಣ್ಣ
ಬಲ್ಲಿದರೊಡನೆ ಬವರವಾದಡೆ ಗೆಲಲುಂಟು, ಸೋಲಲುಂಟು, ಕ[ಳ]ನೊಳಗೆ ಭಾಷೆ ಪೂರಾಯವಯ್ಯಾ. ನಮ್ಮ ಕೂಡಲಸಂಗನ ಶರಣರಿಗೆ ಮಾಡಿ ಮಾಡಿ ಧನ ಸವೆದು ಬಡವನಾದಡೆ ಆ ಭಕ್ತನು ಆ ಲಿಂಗಕ್ಕೆ ಪೂಜೆಯಹನು. 150
--------------
ಬಸವಣ್ಣ
ಬಿತ್ತದೆ ಬೆಳೆಯದೆ ಬೆಳೆದ ಹೆಬ್ಬೆಳಸಿನ ರಾಶಿಯ ನೋಡಾ, ಸುಗಂಧ ಬಂಧುರದಂತೆ ಹುಟ್ಟುತ್ತವೆ ಪರಿಮಳ ! ಆದಿ ಅನಾದಿಯಿಲ್ಲದ ಮುನ್ನ ತನ್ನಿಂದವೆ ತಾನಾಗಿರ್ದ ಕಾರಣ ಮುಟ್ಟದೆ ತಟ್ಟದೆ ಗುರುಕಾರುಣ್ಯವ ಪಡೆದು, ಲಿಂಗ ಸಯವಾಗಿ, ಎನಗೆ ಗತಿಪಥವ ತೋರಿಸಬೇಕೆಂದು ಆಗಾದನು, ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.
--------------
ಬಸವಣ್ಣ
ಬಂಜೆ ಬೇನೆಯನರಿಯದಂತೆ ಒಬ್ಬರೊಂದ ನುಡಿವಿರಿ, ಕೇಳಿರಯ್ಯಾ. ಎನಗೆ ಆಯುಷ್ಯ ಭವಿಷ್ಯ, ಎನ್ನ ಭಕ್ತರು. ಎನಗೆ ಆಯುಷ್ಯ ಭವಿಷ್ಯ, ಎನ್ನ ಪ್ರಮಥರು ಕಂಡಯ್ಯಾ. ಕೂಡಲಸಂಗನ ಶರಣರು ಮುಖಲಿಂಗಿಗಳಯ್ಯಾ. 410
--------------
ಬಸವಣ್ಣ
ಬಣ್ಣವನಿಟ್ಟು ಮೆರೆವ ಅಣ್ಣನ ಭಕ್ತಿ ಸುಣ್ಣದ ಕಲ್ಲ ಕಟ್ಟಿ ಮಡುವ ಬಿದ್ದಂತೆ ಆಯಿತ್ತು. ತನ್ನ [ಬಣ್ಣ ತನ್ನ ಸು]ಡುವುದು, ತನ್ನ ಸುಡದ ಹಾಗೆ ನೆನೆಯಾ, ಕೂಡಲಸಂಗಮದೇವನ.
--------------
ಬಸವಣ್ಣ
ಬೆದರಿಸುವ, ಬೆಚ್ಚಿಸುವ, ಮುಯ್ಯಾನುವ, ಮೇಳವಾಡುವ, ಆಳಿಗೊಳಿಸುವ, ಆಳಲಿ ನುಡಿಸುವ, ಬಳಲಿಸುವನೊತ್ತಿ ನೋಡುವ, ಒಳಹೊರಗೆ ಹೊಳದು ಹೋಹ, ಕೇಳದೆ ಬಹ, ಬೇಳು ಮಾಡುವನಾಳವಾಡುವ, ಹೊಳೆದು ಹೋಹ, ನಾ ಇದಕ್ಕಂಜೆ ಕೂಡಲಸಂಗಮದೇವಾ.
--------------
ಬಸವಣ್ಣ
ಬಂಡಿ ತುಂಬ ಪತ್ರೆಯ ತಂದು ಕಂಡ ಕಂಡಲ್ಲಿ ಮಜ್ಜನಕ್ಕೆರೆವಿರಿ. ತಾಪತ್ರಯವ ಕಳೆದು ಪೂಜಿಸಿ, ತಾಪತ್ರಯವ ಲಿಂಗನೊಲ್ಲ. ಕೂಡಲಸಂಗಮದೇವ ಬರಿಯುದಕದಲ್ಲಿ ನೆನೆವನೆ 184
--------------
ಬಸವಣ್ಣ
ಬಂದ ಯೋನಿಯನರಿದು ಸಲಹೆನ್ನ ತಂದೆ. ಬೆಂದ ಮನವೆನ್ನ ಗತಿಗೆಡಿಸಿ ಕಾಡಿತ್ತು, ಬೆಂದ ಮನವೆನ್ನ ಮತಿಗೆಡಿಸಿ ಕಾಡಿತ್ತು, ಎನ್ನ ತಂದೆ ಕೂಡಲಸಂಗಮದೇವಾ, ಮಾಣಿಸು ನಿಮ್ಮ ಧರ್ಮ. 49
--------------
ಬಸವಣ್ಣ
ಬಡಹಾರುವನೇಸು ಭಕ್ತನಾದಡೆಯೂ ನೇಣಿನ ಹಂಗ ಬಿಡ ! ಮಾಲೆಗಾರನೇಸು ಭಕ್ತನಾದಡೆಯೂ ಬಾವಿಯ ಬೊಮ್ಮನ ಹಂಗ ಬಿಡ ! ಬಣಜಿಗನೇಸು ಭಕ್ತನಾದಡೆಯೂ ಒಟ್ಟಿಲ ಬೆನಕನ ಹಂಗ ಬಿಡ ! ಕಂಚುಗಾರನೇಸು ಭಕ್ತನಾದಡೆಯೂ ಕಾಳಿಕಾದೇವಿಯ ಹಂಗ ಬಿಡ ! ನಾನಾ ಹಂಗಿನವನಲ್ಲ, ನಿಮ್ಮ ಶರಣರ ಹಂಗಿನವನಯ್ಯಾ ಕೂಡಲಸಂಗಮದೇವಾ. 451
--------------
ಬಸವಣ್ಣ
ಬಾಳತ್ವಕ್ಕೆಂದು ಮಧುವ ತಂದು ಕೊಡನ ತುಂಬಿದ ಜೇನಹುಳುವಿನಂತೆ ತಾನುಂಬುದು, ತನ್ನೆಂಜಲ ಜಗವುಂಬುದು ನೋಡಯ್ಯಾ. ಶಿವಭಕ್ತನಾಗಿ ಶಿವಾನ್ನವನೆ ಕೊಂಡು, ಒಕ್ಕಮಿಕ್ಕ ವಸ್ತುವ ಜಂಗಮಕ್ಕಿಕ್ಕುವಾತನೆ ಭಕ್ತ, ಕೊಂಡಾತನೆ ಜಂಗಮ. ನಡುವೆ ನೀ ಬಂದು ಭಂಡು ಮಾಡದಿರೈ ಕೂಡಲಸಂಗಮದೇವಾ.
--------------
ಬಸವಣ್ಣ
ಬಿಡದೆ ಬಾಗಿಲ ಎಂಜಲ ಕಾ್ದುಪ್ಪೆನು, ಕಿಂಕರನು. ಕಿಂಕರರ ಮನೆಯಲ್ಲಿ ಕಿಂಕಿಲವನು ಆನು ಹಾರುತ್ತಿಪ್ಪೆನು, ನಮ್ಮ ಕೂಡಲಸಂಗನ ಶರಣರ ಒಕ್ಕುದ ಮಿಕ್ಕುದನುಂಬ ಕಿಂಕರ ನಾನು. 466
--------------
ಬಸವಣ್ಣ
ಬಿಳಿಯ ಕರಿಕೆ, ಕಣಿಗಿಲೆಲೆಯ, ತೊರೆಯ ತಡಿಯ ಮಳಲ ತಂದು, ಗೌರಿಯ ನೋನುವ ಬನ್ನಿರೆ. ಚಿಕ್ಕ ಚಿಕ್ಕ ಮಕ್ಕಳೆಲ್ಲರು ನೆರೆದು ಅನುಪಮದಾನಿ ಕೂಡಲಸಂಗಮದೇವ ಗಂಡನಾಗಬೇಕೆಂದು.
--------------
ಬಸವಣ್ಣ
ಬೇಡದಿರು ಶಿವಭಕ್ತರಲ್ಲದವರ, ಬೇಡಿ ಬೋಡಾಗದಿರು, ಬೇಡಿದಡೆ ಹುರುಳಿಲ್ಲ. ಬೇಡಿದ ಕೈಗೆ ಕಡೆಯಿಲ್ಲದೆ ಕೊಡಬಲ್ಲರು ಕೂಡಲಸಂಗನ ಶರಣರು.
--------------
ಬಸವಣ್ಣ
ಬಚ್ಚಲ ನೀರು ತಿಳಿದಡೇನು ಸಲ್ಲದ ಹೊನ್ನು ಮತ್ತೆಲ್ಲಿದ್ದಡೇನು ಆಕಾಶದ ಮಾವಿನ ಫಲವೆಂದಡೇನು ಕೊಯ್ಯಲಿಲ್ಲ, ಮೆಲ್ಲಲಿಲ್ಲ. ಕೂಡಲಸಂಗನ ಶರಣರ ಅನುಭಾವವಿಲ್ಲದವ ಎಲ್ಲಿದ್ದಡೇನು, ಎಂತಾದಡೇನು 122
--------------
ಬಸವಣ್ಣ
ಬಂದೆಹೆನೆಂದು ಬಾರದೆ ಇದ್ದಡೆ, ಬಟ್ಟೆಗಳ ನೋಡುತ್ತಿದ್ದೇನಯ್ಯಾ. ಇನ್ನಾರನಟ್ಟುವೆ, ಇನ್ನಾರನಟ್ಟುವೆ, ಇನ್ನಾರ ಪಾದವ ಹಿಡಿವೆನಯ್ಯಾ ಕೂಡಲಸಂಗನ ಶರಣರು ಬಾರದಿದ್ದಡೆ ಅಟ್ಟುವೆನೆನ್ನ ಪ್ರಾಣವನು.
--------------
ಬಸವಣ್ಣ
ಬಾಗಿಲ ಮುಂದೆ ಬಾಳೆ ಬಿತ್ತುವುದಯ್ಯಾ. ಬಾಳೆಗೊನೆವಾಗದ ಮುನ್ನ ಕೂಡಿಕೊಳ್ಳಿ ಕೂಡಲಸಂಗಮದೇವನ.
--------------
ಬಸವಣ್ಣ
ಬಾರದು ಬಾರದು, ಭಕ್ತಂಗೆ ಪರಧನ ಪರಸತಿ, ಬಾರದು ಬಾರದು, ವಿಷಯಿಗೆ ಪಶುಪತಿಬ್ರತವು, ಬಾರದು ಬಾರದು, ಭವಭಾರಿಗೆ ಕೂಡಲಸಂಗಮದೇವನ ಒಕ್ಕುದ ಕೊಳಬಾರದು.
--------------
ಬಸವಣ್ಣ
ಬಿತ್ತು ಬೆಳೆಯಿತ್ತು, ಕೆಯ್ಯ ಕೊಯ್ಯಿತ್ತು, ಗೂಡು ಮುರಿಯಿತ್ತು, ಕುತ್ತುರಿಯೊಟ್ಟಿತ್ತು, ಒಕ್ಕಿತ್ತು ತೂರಿತ್ತು ಅಳೆಯಿತ್ತು, ಸಲಗೆ ತುಂಬಿತ್ತು. ಕೂಡಲಸಂಗಮದೇವಯ್ಯಾಮೇಟಿ ಕಿತ್ತಿತ್ತು, ಕಣ ಹಾಳಾಯಿತ್ತಯ್ಯಾ.
--------------
ಬಸವಣ್ಣ
ಬಡಪಶು ಪಂಕದಲ್ಲಿ ಬಿದ್ದಡೆ ಕಾಲ ಬಡಿವುದಲ್ಲದೆ, ಬೇರೆ ಗತಿಯುಂಟೆ ಶಿವ ಶಿವ ಹೋದೆಹೆ, ಹೋದೆಹೆನಯ್ಯಾ. ನಿಮ್ಮ ಮನದತ್ತಲೆನ್ನ ತೆಗೆಯಯ್ಯಾ. ಪಶುವಾನು, ಪಶುಪತಿ ನೀನು, ತುಡುಗುಣಿಯೆಂದು ಎನ್ನ ಹಿಡಿದು ಬಡಿಯದ ಮುನ್ನ ಒಡೆಯಾ ನಿಮ್ಮ ಬಯ್ಯದಂತೆ ಮಾಡು, ಕೂಡಲಸಂಗಮದೇವಾ. 53
--------------
ಬಸವಣ್ಣ
ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ ತಿಳಿಯಲೀಯದು, ಎಚ್ಚರಲೀಯದು. ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯಾ, ಲಿಂಗತಂದೆ ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವಾ. 50
--------------
ಬಸವಣ್ಣ

ಇನ್ನಷ್ಟು ...