ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ರಂಗವಾಲೆಯೆಂದಡೆ ಅಂಗವಿಸದಯ್ಯಾ ಎನ್ನ ಮನವು, ಷಡುಸಮ್ಮಾರ್ಜನೆಯೆಂದಡೆ ಸೊಗಸದಯ್ಯಾ ಎನ್ನ ಮನಕ್ಕೆ. ಅದೇನು ಕಾರಣವೆಂದಡೆ, ಭಕ್ತರಂಗಳ ವಾರಣಾಸಿಯೆಂದುದಾಗಿ. ತಾ ಹುಟ್ಟಿ ತಮ್ಮವ್ವೆಯ ಬಂಜೆಯೆನ್ನಬಹುದೆ ಕೂಡಲಸಂಗಮದೇವಾ
--------------
ಬಸವಣ್ಣ
ರುದ್ರ ಮುಖದಲ್ಲಿ ವಿಷ್ಣು ಭುಜದಲ್ಲಿ, ಜಂಘೆಯಲ್ಲಿ ಅಜ ಜನನವೊ. ಇಂದ್ರ ಪಾದದಲ್ಲಿ ಚಂದ್ರ ಮನದಲ್ಲಿ, ಚಕ್ಷುವಿನಲ್ಲಿ ಸೂರ್ಯ ಜನನವೊ. ಮುಖದಲ್ಲಿ ಅಗ್ನಿಯು ಪ್ರಾಣದಲ್ಲಿ ವಾಯು ನಾಭಿಯಲ್ಲಿ ಅಂತರಿಕ್ಷವೊ. ಸಿರದಲುದಯ ತೆತ್ತೀಸಕೋಟಿ ದೇವತೆಗಳು ಪಾದತಳದಲ್ಲಿ ಭೂಮಿ ಜನನವೊ. ಶ್ರೋತ್ರದಲ್ಲಿ ದಶದಿಕ್ಕುವೊ. ಜಗವ ನಿಕ್ಷೇಪಿಸಿದ ಕುಕ್ಷಿಯಲ್ಲಿ, ಅಕ್ಷಯನಗಣಿತನು. ಸಾಸಿರ ತಲೆ, ಸಾಸಿರ ಕಣ್ಣು, ಸಾಸಿರ ಕೈ, ಸಾಸಿರ ಪಾದ. ಸಾಸಿರ ಸನ್ನಿಹಿತ ನಮ್ಮ ಕೂಡಲಸಂಗಯ್ಯ.
--------------
ಬಸವಣ್ಣ
ರತ್ನೇ ಪ್ರಸಾದವನಾರಾಧಿಸುತ್ತಿರಲು ಆ ಪ್ರಸಾದ[ವ]ಲ್ಲಿ ಬೀಳುತ್ತ ಆಳುತ್ತಲಿದ್ದಿತ್ತು. ನೋಡಾ. ಅದ ಹಲಬರು ನೋಡಿ ನೋಡಿ ಹೋರುತ್ತಿದ್ದಾರು, ಆ ಪ್ರಸಾದ ತಾನೇ ಬಂದು ಎನ್ನ ಸುತ್ತಿಕೊಂಡಿತ್ತು. ಇದರ ಪದಾರ್ಥವ ಮಾಡಿಕೊಡಯ್ಯಾ ಕೂಡಲಸಂಗಮದೇವಾ.
--------------
ಬಸವಣ್ಣ
ರೂಪು ಅರೂಪಿನಲ್ಲಿ ನಿಂದಿತ್ತು, ಅರೂಪು ನಿಜರೂಪವನವಗ್ರಹಿಸಿತ್ತು. ನಿಜರೂಪು ನಿರ್ಣಯದಲ್ಲಿ ನಿಷ್ಪತ್ತಿಯಾಯಿತ್ತು, ನಿಷ್ಪತ್ತಿಯಾದ ನಿಜಶರಣರ ನಿಲವು ಕಾಯವಿಡಿದು ಕಂಡೆಹೆನೆಂದಡೆ ಕಾಣಬಹುದೆ ! ಕೂಡಲಸಂಗಮದೇವರ ಶರಣ ಪ್ರಭುದೇವರ ನಿಲವು ಎನಗೆ ಸಾಧ್ಯವಪ್ಪುದೆ !
--------------
ಬಸವಣ್ಣ
ರಚ್ಚೆಯ ನೆರವಿಗೆ ನಾಣುನುಡಿ ಇಲ್ಲದಿಹುದೆ ಅದರಂತೆನಬಹುದೆ ಸಜ್ಜನ ಸ್ತ್ರೀಯ ಅದರಂತೆನಬಹುದೆ ಭಕ್ತಿರತಿಯ ಕರುಳಕಲೆ ಪ್ರಕಟಿತವುಂಟೆ, ಕೂಡಲಸಂಗಮದೇವಾ
--------------
ಬಸವಣ್ಣ