ಅಥವಾ
(151) (76) (19) (2) (20) (3) (0) (0) (79) (11) (0) (35) (8) (0) ಅಂ (25) ಅಃ (25) (110) (0) (32) (0) (0) (13) (1) (30) (0) (0) (0) (0) (1) (0) (0) (38) (0) (28) (9) (74) (32) (1) (45) (43) (81) (2) (5) (0) (46) (30) (42) (0) (76) (96) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಹೊಸತಿಲ ಪೂಜಿಸಿ ಹೊಡವಂಟು ಹೋದ ಒಕ್ಕಲಿತಿಯಂತಾುತ್ತೆನ್ನ ಭಕ್ತಿ. ಜಂಗಮವೆನ್ನೊಡೆಯರೆಂದು ಒಕ್ಕುದ ಕೊಂಡು ಉದಾಸೀನವ ಮಾಡಿದಡೆ, ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ ! ಕೂಡಲಸಂಗಮದೇವ ಅಘೋರನರಕದಲ್ಲಿಕ್ಕುವ. 423
--------------
ಬಸವಣ್ಣ
ಹತ್ತು ಮತ್ತರ ಭೂಮಿ, ಬತ್ತದ ಹಯನು, ನಂದಾದೀವಿಗೆಯ ನಡೆಸಿಹೆವೆಂಬವರ ಮುಖವ ನೋಡಲಾಗದು, ಅವರ ನುಡಿಯ ಕೇಳಲಾಗದು. ಅಂಡಜ, ಸ್ವೇದಜ, ಉದ್ಭಿಜ, ಜರಾಯುಜವೆಂಬ ಪ್ರಾಣಿಗಳಿಗೆ ಭವಿತವ್ಯವ ಕೊಟ್ಟವರಾರೊ ಒಡೆಯರಿಗೆ ಉಂಡಲಿಗೆಯ ಮುರಿದಿಕ್ಕಿದಂತೆ ಎನ್ನಿಂದಲೆ ಆುತ್ತು, ಎನ್ನಿಂದಲೆ ಹೋುತ್ತು ಎಂಬವನ ಬಾಯಲ್ಲಿ ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ ಕೂಡಲಸಂಗಮದೇವ 225
--------------
ಬಸವಣ್ಣ
ಹುತ್ತವ ಕಂಡಲ್ಲಿ ಹಾವಾಗಿ, ನೀರ ಕಂಡಲ್ಲಿ [ಒಳ್ಳೆ]ಯಾದವನ ಮಚ್ಚುವನೆ ಬಾರದ ಭವಂಗಳಲ್ಲಿ ಬರಿಸುವನಲ್ಲದೆ ಮಚ್ಚುವನೆ ಅಘೋರನರಕವನುಣಿಸುವನಲ್ಲದೆ, ಮಚ್ಚುವನೆ ಅಟಮಟದ ಭಕ್ತರ ಕಂಡಡೆ, ಕೋಟಲೆಗೊಳಿಸುವ ಕೂಡಲಸಂಗಮದೇವ.
--------------
ಬಸವಣ್ಣ
ಹುತ್ತದ ಮೇಲಣ ರಜ್ಜು ಮುಟ್ಟಿದಡೆ ಸಾವರು ಶಂಕಿತರಾದವರು, ದರ್ಪದಷ್ಟವಾದಡೆಯೂ ಸಾಯರು ನಿಶ್ಯಂಕಿತರಾದವರು. ಕೂಡಲಸಂಗಮದೇವಯ್ಯಾ, ಶಂಕಿತಂಗೆ ಪ್ರಸಾದ ಸಿಂಗಿ, ಕಾಳಕೂಟವಿಷವು.
--------------
ಬಸವಣ್ಣ
ಹಾವಡಿಗನು ಮೂಕೊರತಿಯು: ತನ್ನ ಕೈಯಲ್ಲಿ ಹಾವು, ಮಗನ ಮದುವೆಗೆ ಶಕುನವ ನೋಡಹೋಹಾಗ ಇದಿರಲೊಬ್ಬ ಮೂಕೊರತಿಯ ಹಾವಡಿಗನ ಕಂಡು, ಶಕುನ ಹೊಲ್ಲೆಂಬ ಚದುರನ ನೋಡಾ. ತನ್ನ ಸತಿ ಮೂಕೊರತಿ, ತನ್ನ ಕೈಯಲ್ಲಿ ಹಾವು, ತಾನು ಮೂಕೊರೆಯ. ತನ್ನ ಬ್ಥಿನ್ನವನರಿಯದೆ ಅನ್ಯರನೆಂಬ ಕುನ್ನಿಯನೇನೆಂಬೆ ಕೂಡಲಸಂಗಮದೇವಾ 105
--------------
ಬಸವಣ್ಣ
ಹಗಲಾಯಿತ್ತು [ಹೊತ್ತು] ಹೋಗದು, ಇರುಳಾಯಿತ್ತು ನಿದ್ರೆಬಾರದು, ಉಳಿದವರ ಮಾತು ಸಾಗದು, ಉಳಿದವರ ಮಾತು ಸಾಗದು. ಕೂಡಲಸಂಗಯ್ಯನಲ್ಲದೆ ಒಲ್ಲದು ಮನ.
--------------
ಬಸವಣ್ಣ
ಹರಿ ಹರನೊಂದೆ ಎಂದಡೆ, ಸುರಿಯುವೆ ಬಾಯಲಿ ಬಾಲಹುಳುಗಳು ಹರಿಗೆ ಹತ್ತು ಪ್ರಳಯ, ಬ್ರಹ್ಮಂಗನಂತ ಪ್ರಳಯ, ಹರಂಗೆ ಪ್ರಳಯ ಉಂಟೆಂಬುದ ಬಲ್ಲಡೆ ನೀವು ಹೇಳಿರೆ ಪ್ರಳಯ ಪ್ರಳಯ ಅಂದಂದಿಂಗೆ ಹಳೆಯ, ನಮ್ಮ ಕೂಡಲಸಂಗಮದೇವ.
--------------
ಬಸವಣ್ಣ
ಹಾವಿನ ಡೊಂಕು ಹುತ್ತಕ್ಕೆ ಸಸಿನ, ನದಿಯ ಡೊಂಕು ಸಮುದ್ರಕ್ಕೆ ಸಸಿನ, ನಮ್ಮ ಕೂಡಲಸಂಗನ ಶರಣರ ಡೊಂಕು ಲಿಂಗಕ್ಕೆ ಸಸಿನ. 144
--------------
ಬಸವಣ್ಣ
ಹರಶಕ್ತಿಗಳಲ್ಲಿ ಹುಟ್ಟಿದ ಬೆನಕ ಭೈರವ ಷಣ್ಮುಖರ ಮಹಾಹರನ ಮಕ್ಕಳೆಂಬ ಪಾತಕ ನೀ ಕೇಳೊ. ಹರಿಹರನು ಒಂದೆಂಬ ಶಿವದ್ರೋಹಿ ನೀ ಕೇಳೊ. ಹರಿ ಸಹಿತಾರರಿಂದತ್ತ ಅಜಾತನಚರಿತ್ರ ಅಪ್ರತಿಮಮಹಿಮ ಕೂಡಲಸಂಗಮದೇವನೊಬ್ಬನೆ ಕಾಣಿ ಭೋ.
--------------
ಬಸವಣ್ಣ
ಹೊನ್ನು ಹೆಣ್ಣು ಮಣ್ಣೆಂಬ ಕರ್ಮದ ಬಲೆಯಲ್ಲಿ ಸಿಲುಕಿ, ವೃಥಾಯ ಬರುದೊರೆ ಹೋಹ ಕೆಡುಕ ಹಾರುವ ನಾನಲ್ಲ. ಹಾರುವೆನಯ್ಯಾ ಭಕ್ತರ ಬರವ ಗುಡಿಗಟ್ಟಿ, ಹಾರುವೆನಯ್ಯಾ ಶರಣರ ಬರವ ಗುಡಿಗಟ್ಟಿ, ಕೂಡಲಸಂಗಮದೇವನು ವಿಪ್ರಕರ್ಮವ ಬಿಡಿಸಿ, ಅಶುದ್ಧನ ಶುದ್ಧನ ಮಾಡಿದನಾಗಿ.
--------------
ಬಸವಣ್ಣ
ಹಸಿವು, ತೃಷೆ, ನಿದ್ರೆ, ವಿಷಯಂಗಳ ಮರೆದೆ, ನೀವು ಕಾರಣ ! ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಂಗಳ ಮರೆದೆ, ನೀವು ಕಾರಣ ! ಪಂಚೇಂದ್ರಿಯ, ಸಪ್ತಧಾತು, ಅಷ್ಟಮದಂಗಳ ಮರೆದೆ. ನೀವು ಕಾರಣ ! ಕೂಡಲಸಂಗಮದೇವಯ್ಯಾ, ನಿಮ್ಮ ಶರಣರಿಗೆ ಅಪ್ಯಾಯನವಾದಡೆ ಎನಗೆ ತೃಪ್ತಿಯಾಯಿತ್ತು.
--------------
ಬಸವಣ್ಣ
ಹಲ್ಲು ಹತ್ತಿ ನಾಲಗೆ ಹೊರಳದಿದ್ದಲ್ಲಿ ಮನವೆರಡಾದಡೆ ಆಣೆ, ನಿಮ್ಮಾಣೆ. ಮಾಡುವ ನೇಮಕ್ಕೆ ಛಲವಿಲ್ಲದಿದ್ದಡೆ ಆಣೆ, ನಿಮ್ಮಾಣೆ. ಕೂಡಲಸಂಗಮದೇವ ಎನ್ನ ಮನವ ನೋಡಲೆಂದಟ್ಟಿದಡೆ ಪ್ರಸಾದವಲ್ಲದೆ ಕೊಂಡೆನಾದಡೆ ಆಣೆ, ನಿಮ್ಮಾಣೆ !
--------------
ಬಸವಣ್ಣ
ಹರವ ನದಿಯ ತೆರನ ಹೋಲಬಲ್ಲಡೆ ಭಕ್ತಿ, ಕೂಡೆ ಸಯದಾನವ ನೀಡಬಲ್ಲಡೆ ಭಕ್ತಿ, ನೀಡಿ ಮಿಕ್ಕುದ ಕಾಯ್ದುಕೊಂಡಿರಬಲ್ಲಡೆ ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವ 524
--------------
ಬಸವಣ್ಣ
ಹಾಲ ನೇಮ, ಹಾಲ ಕೆನೆಯ ನೇಮ, ಕೆನೆ ತಪ್ಪಿದ ಬಳಿಕ ಕಿಚ್ಚಡಿಯ ನೇಮ, ಬೆಣ್ಣೆಯ ನೇಮ, ಬೆಲ್ಲದ ನೇಮ, ಅಂಬಲಿಯ ನೇಮದವರನಾರನೂ ಕಾಣೆ. ಕೂಡಲಸಂಗನ ಶರಣರಲ್ಲಿ ಅಂಬಲಿಯ ನೇಮದಾತ ಮಾದಾರ ಚೆನ್ನಯ್ಯ. 232
--------------
ಬಸವಣ್ಣ
ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇುತ್ತು. ಕೊಂದಹರೆಂಬುದನರಿಯದೆ ಬೆಂದ ಒಡಲ ಹೊರೆವುತ್ತಲದೆ. ಅದಂದೆ ಹುಟ್ಟಿತ್ತು, ಅದಂದೆ ಹೊಂದಿತ್ತು. ಕೊಂದವರುಳಿವರೆ ಕೂಡಲಸಂಗಮದೇವಾ. 129
--------------
ಬಸವಣ್ಣ
ಹಗಹದಲ್ಲಿ ಬಿದ್ದವರ ಮೇಲೆ ಒರಳ ನೂಕುವರೆ ಕೋಳದ ಮೇಲೆ ಸಂಕೋಲೆಯನಿಕ್ಕುವರೆ ಬೆಂದ ಹುಣ್ಣ ಕಂಬಿಯಲ್ಲಿ ಕೀಸುವರೆ ಕೂಡಲಸಂಗಯ್ಯ ಕಾಡುವ ಕಾಟ ಸಿರಿಯಾಳಂಗಲ್ಲದೆ ಸೈರಿಸಬಹುದೆ
--------------
ಬಸವಣ್ಣ
ಹೊಲೆಯ ಹೊಲಬಿಗನಾದಡೆ, ಅವನ ಹೊರೆಯಲಿಪ್ಪುದು ಲೇಸು ಕಂಡಯ್ಯಾ. ಹೊಲಬುಗೆಡದೆ ಲಿಂಗ ಶರಣೆನ್ನಿರಯ್ಯಾ. ಹೊಲಬುಗೆಡಬೇಡ, ಶಿವ ಶರಣೆನ್ನಿರಯ್ಯಾ. ನಮ್ಮ ಕೂಡಲಸಂಗನ ಮಹಾಮನೆಯಲು ಮಾದಾರ ಚೆನ್ನಯ್ಯ ಹೊಲಬಿಗನಯ್ಯಾ. 135
--------------
ಬಸವಣ್ಣ
ಹೊನ್ನಿನೊಳಗೊಂದೊರೆಯ, ಸೀರೆಯೊಳಗೊಂದೆಳೆಯ ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣಿ. ನಿಮ್ಮ ಶರಣರಿಗಲ್ಲದೆಮತೊಂದನರಿಯೆ ಕೂಡಲಸಂಗಮದೇವಾ. 436
--------------
ಬಸವಣ್ಣ
ಹಡೆದೊಡವೆ ವಸ್ತುವನು ಮೃಡಭಕ್ತರಿಗಲ್ಲದೆ ಕಡಬಡ್ಡಿಯ ಕೊಡಲಾಗದು. ಬಂದಡೊಂದು ಲೇಸು, ಬಾರದಿದ್ದಡೆರಡು ಲೇಸು. ಅಲ್ಲಿದ್ದಡೆಯೂ ಲಿಂಗಕ್ಕೆ ಬೋನ. ಇಲ್ಲಿದ್ದಡೆಯೂ ಲಿಂಗಕ್ಕೆ ಬೋನ. ಲಿಂಗದೊಡವೆ ಲಿಂಗಕ್ಕೆ ಸಾರಿತ್ತಾಗಿ ಬಂದಿತ್ತೆಂಬ ಪರಿಣಾಮವಿಲ್ಲ, ಬಾರದೆಂಬ ದುಃಖವಿಲ್ಲ. ಇದು ಕಾರಣ ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದೆ, ಕಡಬಡ್ಡಿಯ ಕೊಡಲಾಗದು. 229
--------------
ಬಸವಣ್ಣ
ಹೊಲೆಯೊಳಗೆ ಹುಟ್ಟಿ ಕುಲವನರಸುವೆ, ಎಲವೊ, ಮಾತಂಗಿಯ ಮಗ ನೀನು. ಸತ್ತುದನೆಳೆವನೆತ್ತಳ ಹೊಲೆಯ ಹೊತ್ತು ತಂದು ನೀವು ಕೊಲುವಿರಿ. ಶಾಸ್ತ್ರವೆಂಬುದು ಹೋತಿಂಗೆ ಮಾರಿ, ವೇದವೆಂಬುದು ನಿಮಗೆ ತಿಳಿಯದು. ನಮ್ಮ ಕೂಡಲಸಂಗನ ಶರಣರು. ಕರ್ಮವಿರಹಿತರು, ಶರಣಸನ್ನಿಹಿತರು, ಅನುಪಮಚಾರಿತ್ರರು. ಅವರಿಗೆ ತೋರಲು ಪ್ರತಿಯಿಲ್ಲವೋ.
--------------
ಬಸವಣ್ಣ
ಹೃದಯ ಕತ್ತರಿ, ತುದಿನಾಲಗೆ ಬೆಲ್ಲೇಂ ಭೋ ! ಆಡಿಹೆನು ಏಂ ಭೋ, ಹಾಡಿಹೆನು ಏಂ ಭೋ ! ನಿಚ್ಚ ನಿಚ್ಚ ಶಿವರಾತ್ರಿಯ ಮಾಡಿಹೆನು ಏಂ ಭೋ ! ಆನು ಎನ್ನಂತೆ, ಮನ ಮನದಂತೆ, ಕೂಡಲಸಂಗಮದೇವ ತಾನು ತನ್ನಂತೆ. 280
--------------
ಬಸವಣ್ಣ
ಹಿಡಿವೆಡೆಯನೆ ಕಾಸಿ ಹಿಡಿವ, ಕೈಬೆಂದು ಮಿಡುಮಿಡನೆ ಮಿಡುಕುವ, ಮರುಳ ಮಾನವನೇ ಬಡವರೆಂದೆನಬೇಡ ಲಾಂಛನಧಾರಿಯನು, ಕಡುಸ್ನೇಹದಿಂದವರ ಪೂಜೆಮಾಡುವುದು. ನಿಜವಡಗಿದ ರೂಪು, ನಿರ್ವಯಲಸ್ಥಾನ, ನಡೆಲಿಂಗ ಜಂಗಮ ±ಕೂಡಲಸಂಗಮದೇವ. 416
--------------
ಬಸವಣ್ಣ
ಹಾವು ಹದ್ದು ಕಾಗೆ ಗೂಗೆ ಅನಂತಕಾಲ ಬದುಕವೆ ಬೇಡವೋ ಮಾನವಾ, ಲೇಸೆನಿಸಿಕೊಂಡು ಬದುಕು, ಓ ಮಾನವಾ ಶಿವಭಕ್ತನಾಗಿ. ಅದೆಂತೆಂದಡೆ; ಜೀವಿತಂ ಶಿವಭಕ್ತಾನಾಂ ವರಂ ಪಂಚದಿನಾನಿ ಚ ನಾಜಕಲ್ಪಸಹಸ್ರಾಣಿ ಭಕ್ತಿಹೀನಸ್ಯ ಶಾಂಕರಿ ಎಂದುದಾಗಿ, ನಮ್ಮ ಕೂಡಲಸಂಗಮದೇವರ ಭಕ್ತಿವಿಡಿದು, ಐದು ದಿವಸವಾದಡೂ ಬದುಕಿದಡೆ ಸಾಲದೆ
--------------
ಬಸವಣ್ಣ
ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ ಜಲ-ಬಿಂದುವಿನ ವ್ಯವಹಾರ ಒಂದೇ, ಆಶೆಯಾಮಿಷರೋಷಹರುಷ ವಿಷಯಾದಿಗಳೆಲ್ಲಾ ಒಂದೇ. ಏನನೋದಿ, ಏನ ಕೇಳಿ, ಏನು ಫಲ ಕುಲಜನೆಂಬುದಕ್ಕೆ ಆವುದು ದೃಷ್ಟ ಸಪ್ತಧಾತುಸಮಂ ಪಿಂಡಂ ಸಮಯೋನಿಸಮದ್ಭವಂ ಆತ್ಮಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ ಎಂದುದಾಗಿ, ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದರುಂಟೆ ಜಗದೊಳಗೆ ಇದು ಕಾರಣ ಕೂಡಲಸಂಗಮದೇವಾ, ಲಿಂಗಸ್ಥಲವನರಿದವನೆ ಕುಲಜನು.
--------------
ಬಸವಣ್ಣ
ಹಾವು, ಕಿಚ್ಚ ಮುಟ್ಟಿಹ ಶಿಶುವೆಂದು ಹೆತ್ತತಾಯಿ ಮಗನ ಬೆಂಬತ್ತಿ ಬಪ್ಪಂತೆ ಇಪ್ಪ ನೋಡಾ, ಎನ್ನೊಡನೊಡನೆ ಕೂಡಲಸಂಗಮದೇವ ಕಾಯ್ದುಕೊಂಡಿಪ್ಪನಾಗಿ.
--------------
ಬಸವಣ್ಣ

ಇನ್ನಷ್ಟು ...