ಅಂತರಂಗ ಬಹಿರಂಗ ಶುದ್ಭವಿಲ್ಲದೆ ನುಡಿವರು ಸಂತೆಯ ಸೂಳೆಯರಂತೆ.
ಅಂತರಂಗ ಬಹಿರಂಗವೆಂಬುದಿಲ್ಲ ನಮ್ಮ ಶಿವಶರಣರಿಗೆ.
ಅಂತರಂಗವೆಲ್ಲ ಅರುಹಾಯಿತ್ತು; ಬಹಿರಂಗದಲ್ಲಿ ಲಿಂಗವಾಯಿತ್ತು,
ಆ ಲಿಂಗದಲ್ಲೆ ನುಡಿದು, ಲಿಂಗದಲ್ಲೆ ನಡೆದು,
ಲಿಂಗದಲ್ಲೆ ಮುಟ್ಟಿ, ಲಿಂಗದಲ್ಲೆ ವಾಸಿಸಿ,
ಲಿಂಗದಲ್ಲೆ ಕೇಳಿ, ಲಿಂಗವಾಗಿ ನೋಡಿ,
ಸರ್ವಾಂಗವು ಲಿಂಗವಾಗಿ, ಆ ಲಿಂಗವ ನೋಡುವ ಕಂಗಳಲ್ಲೆ ಐಕ್ಯ.
ಕಂಡೆಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ