ಅಥವಾ
(76) (90) (24) (5) (11) (20) (1) (0) (2) (2) (23) (41) (8) (0) ಅಂ (52) ಅಃ (52) (52) (0) (9) (2) (0) (6) (0) (11) (0) (0) (0) (0) (0) (0) (0) (29) (0) (13) (8) (61) (42) (0) (44) (15) (50) (2) (4) (0) (7) (13) (7) (4) (56) (39) (0)

ಪದದಿಂದ ಪ್ರಾರಂಭವಾಗುವ ವಚನಗಳು:

ರವಿ ಶಶಿಗಳಿಲ್ಲದಂದು, ಕತ್ತಲೆ ಕಾಳಾಂಧಗಳಿಲ್ಲದಂದು, ಜ್ಞಾನ ಮಹಾಜ್ಞಾನಂಗಳು ಇಲ್ಲದಂದು, ಅತ್ತತ್ತಲೆ ತಾನೆ ತಂದೆಯಾಗಿದ್ದೆಯಯ್ಯ. ತನಗೆ ಮಕ್ಕಳು ಬೇಕಾಗಿ ನೆನಹಂಗೈಯಲು. ಓಂಕಾರವೆಂಬ ಪ್ರಣವ ಪುಟ್ಟಿತ್ತು ನೋಡಾ. ಆ ಓಂಕಾರವೆಂಬ ಪ್ರಣವದಲ್ಲಿ ಅಕಾರ ಉಕಾರ ಮಕಾರಂಗಳಾದವು ನೋಡಾ. ಅಕಾರ ಉಕಾರ ಮಕಾರಂಗಳೊಡನೆ ಷಡಕ್ಷರಂಗಳು ಆದವು ನೋಡಾ. ಆ ಷಡಕ್ಷರಂಗಳೊಡನೆ ಷಟ್ಚಕ್ರಂಗಳಾದವು ನೋಡಾ. ಆ ಷಟ್ಚಕ್ರಂಗಳೊಡನೆ ಷಡ್ವಿಧಮೂರ್ತಿಗಳಾದವು ನೋಡಾ. ಆ ಷಡ್ವಿಧಮೂರ್ತಿಗಳೊಡನೆ ಷಡ್ವಿಧಲಿಂಗವಾದವು ನೋಡಾ. ಆ ಷಡ್ವಿಧಲಿಂಗದೊಡನೆ ಷಡ್ವಿಧಶಕ್ತಿಯರಾದರು ನೋಡಾ. ಆ ಷಡ್ವಿಧಶಕ್ತಿಯರೊಡನೆ ಷಡ್ವಿಧಭಕ್ತಿಯಾಯಿತು ನೋಡಾ. ಆ ಷಡ್ವಿಧಭಕ್ತಿಯನರಿತು ನಾದಬಿಂದುಕಲೆಗಳ ಮೀರಿ ಪರಕೆ ಪರವಾದ ಲಿಂಗವನಾಚರಿಸುತಿರ್ದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ರವಿಶಶಿಯ ಬೆಳಗನೊಳಕೊಂಡಿಹ ಪರಶಿವತತ್ವದಲ್ಲಿ ಪರಿಣಾಮಿತನಾಗಿ ಪರಕ್ಕೆ ಪರವನೈದಿದ ಮಹಿಮನ ಎನಗೊಮ್ಮೆ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ರೇಚಕ ಪೂರಕಂಗಳಿಲ್ಲದಂದು, ನೋಟ ಬೇಟಂಗಳಿಲ್ಲದಂದು, ಮಾಟ ಕೂಟಂಗಳಿಲ್ಲದಂದು, ಶಬ್ದ ನಿಃಶಬ್ದಂಗಳಿಲ್ಲದಂದು, ಭಾವ ನಿರ್ಭಾವಗಳಿಲ್ಲದಂದು, ತತ್ವ ಪರತತ್ವಂಗಳಿಲ್ಲದಂದು, ಇವೇನೇನೂ ಇಲ್ಲದಂದು, ಅತ್ತತ್ತಲೆ. ಸ್ವಯಂಭೂ ಅಖಂಡತೇಜೋಮಯ ನಿಷ್ಕಲಲಿಂಗ ತಾನೇ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ರೂಪ ಕುರೂಪವನೊಳಕೊಂಡು ಪರಿಣಾಮದಿಂದ ಪರಬ್ರಹ್ಮಲಿಂಗದಲ್ಲಿ ಕೂಡಿ ಪರವಶನಾದನಯ್ಯ ನಿಮ್ಮ ಶರಣನು ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ