ಅಥವಾ
(6) (3) (3) (0) (0) (1) (0) (0) (2) (1) (0) (0) (0) (0) ಅಂ (3) ಅಃ (3) (15) (0) (2) (0) (0) (1) (0) (0) (0) (0) (0) (0) (0) (0) (0) (3) (0) (1) (0) (6) (3) (0) (5) (2) (4) (0) (0) (0) (1) (0) (1) (1) (7) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ತುಷರಸವಿದ್ದುದಕ್ಕಲ್ಲದೆ ಫಲ ಫಲಿಸಲಿಲ್ಲ. ಕ್ರಿಯಾಸದ್ಭಾವವಿದ್ದಲ್ಲದೆ ಸತ್ಪಥಭಾವಿಯಲ್ಲ. ತ್ರಿಸಂಧ್ಯಾಕಾಲಂಗಳಲ್ಲಿ ಉಚಿತ ವೇಳೆಯನರಿತು ರಾಜಸ ತಾಮಸಂಗಳಿಲ್ಲದೆ ಪರಸೇವೆ ನಿಶ್ಚಯವಂತನಾಗಿ, ಅನಲ ಅಹಿ ವ್ಯಾಘ್ರ ಚೋರ ರಾಜಭಯ ಮುಂತಾದುವೆಲ್ಲವ ಲಿಂಗ ಕರಸ್ಥಲಕ್ಕೆ ಬಂದಿರಲಿಕ್ಕಾಗಿ, ಆ ಲಿಂಗದ ಮೂರ್ತಿ ಮನಸ್ಥಲದಲ್ಲಿ ನಿರತಿಶಯದಿಂದ ನಿಂದಿರಲಿಕ್ಕಾಗಿ, ಇಂತೀ ಭಾವಂಗಳೆಲ್ಲವು ಮೂರ್ಛೆಯಲ್ಲಿ ಮೂರ್ತಿಗೊಂಡು ಅಮೂರ್ತಿಯಪ್ಪ ವಸ್ತು ಭಿನ್ನಭೇದವಿಲ್ಲದೆ ಸ್ವಯ ಕ್ರಿಯಾಪೂಜೆ ಸರ್ವಜ್ಞಾನ ಸಂತೋಷ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ ಕ್ರಿಯಾಸಂಭವಕೂಟ.
--------------
ಮೋಳಿಗೆ ಮಹಾದೇವಿ
ತನುವಿನ ಮೇಲಿಪ್ಪುದು ಇಷ್ಟಲಿಂಗವೆಂದೆಂಬರು. ಆತ್ಮನ ನೆನಹಿನಲ್ಲಿಪ್ಪುದು ಪ್ರಾಣಲಿಂಗವೆಂದೆಂಬರು. ಇಂತೀ ಘಟಕ್ಕೂ ಆತ್ಮಕ್ಕೂ ಉಭಯ ಲಿಂಗವುಂಟೆ ? ಹೊರಗಳ ಅಸ್ಥಿ ಚರ್ಮಕ್ಕೆ ಬೇರೊಂದು ಅಸುವ ಕಲ್ಪಿಸಬಹುದೆ ? ಒಳಗಳ ಕರುಳು, ಮಜ್ಜೆ, ಮಾಂಸಕ್ಕೆ ಬೇರೊಂದು ಅಸುವಿನ ಕಲೆಯುಂಟೆ ? ಇದಕ್ಕೆ ದೃಷ್ಟವ ಕಂಡಡೆ ಇಷ್ಟಲಿಂಗ ಪ್ರಾಣಲಿಂಗವೆಂಬುದಕ್ಕೆ ಕಟ್ಟುಂಟು. ಅದು ಅಚೇತನವಪ್ಪ ನಿರವಯಕ್ಕೆ ಅಚೇತನವಪ್ಪುದೊಂದು ದೃಷ್ಟ; ನಿರವಯ ಸಾವಯವದಲ್ಲಿ ಸಂಬಂಧಿಸಿ ಕುರುಹಾದ ಭೇದ. ಆ ಕಾಯದ ಒಳ ಹೊರಗಿನ ನೋವಿನ ಭೇದದಂತೆ, ಆ ಉಭಯವನರಿವ ಆತ್ಮ ಒಂದೆಯಾಗಿ, ಇಂತೀ ಕಾಯದ ಇಷ್ಟವೆಂದು, ಆತ್ಮನ ಅರಿವೆಂದು, ಎರಡೆನಿಸುವ ಲಿಂಗವೆಂಬುದೊಂದು ಕುರುಹಿಲ್ಲ. ಅದು ಏಕ ಏವ ಸ್ವರೂಪು; ಅದು ಚಿದ್ಘನ ಸ್ವರೂಪು; ಅದು ಘಟಮಠದ ಬಯಲಿನ ಗರ್ಭದಂತೆ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಲಿಂಗವು ಅತ್ಯತಿಷ್ಠದ್ದಶಾಂಗುಲನಾಗಿಪ್ಪನು.
--------------
ಮೋಳಿಗೆ ಮಹಾದೇವಿ
ತನ್ನ ಕಣ್ಣಿಂದ ಕನ್ನಡಿಯ ನೋಡಿ, ಆ ದೃಷ್ಟಿ ಕಾಣಲಿಕ್ಕೆ ಕಣ್ಣೊ ? ಕನ್ನಡಿಯೊ ? ಆ ಉಭಯದ ದೃಷ್ಟಿಯಿಂದ ಇಷ್ಟದ ದೃಷ್ಟವ ಕಂಡು, ಉಭಯ ನಿಶ್ಚಯವಾದಲ್ಲಿ ಕೈವಲ್ಯವೆಂಬ ಕರ್ಕಶ ಬೇಡ. ಕೈಯ ಮುದ್ದೆಯ ಕೆಡಹಿದಲ್ಲಿ ಬಾಯಿಗೆ ಬಯಲು, ಅದ ನಿಮ್ಮ ನೀವೇ ತಿಳಿದುಕೊಳ್ಳಿ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ.
--------------
ಮೋಳಿಗೆ ಮಹಾದೇವಿ