ಅಥವಾ
(6) (3) (3) (0) (0) (1) (0) (0) (2) (1) (0) (0) (0) (0) ಅಂ (3) ಅಃ (3) (15) (0) (2) (0) (0) (1) (0) (0) (0) (0) (0) (0) (0) (0) (0) (3) (0) (1) (0) (6) (3) (0) (5) (2) (4) (0) (0) (0) (1) (0) (1) (1) (7) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಭಕ್ತಂಗೆ ಭಕ್ತಸ್ಥಲವಲ್ಲದೆ ಮಾಹೇಶ್ವರಸ್ಥಲದಲ್ಲಿ ನಿಲ್ಲ ಮಾಹೇಶ್ವರಂಗೆ ಮಾಹೇಶ್ವರಸ್ಥಲವಲ್ಲದೆ ಪ್ರಸಾದಿಸ್ಥಲದಲ್ಲಿ ನಿಲ್ಲ ಪ್ರಸಾದಿಗೆ ಪ್ರಸಾದಿಸ್ಥಲವಲ್ಲದೆ ಪ್ರಾಣಲಿಂಗಿಸ್ಥಲದಲ್ಲಿ ನಿಲ್ಲ ಪ್ರಾಣಲಿಂಗಿಗೆ ಪ್ರಾಣಲಿಂಗಿಸ್ಥಲವಲ್ಲದೆ ಶರಣಸ್ಥಲದಲ್ಲಿ ನಿಲ್ಲ ಶರಣಂಗೆ ಶರಣಸ್ಥಲವಲ್ಲದೆ ಐಕ್ಯಸ್ಥಲದಲ್ಲಿ ನಿಲ್ಲ ಐಕ್ಯಂಗೆ ಐಕ್ಯಸ್ಥಲವಲ್ಲದೆ ಮಹಾಬೆಳಗಿನ ಕಳೆಗೆ ನಿಲುಕ. ಅದು ಪೂರ್ಣಭಾವ ಪರಿಪೂರ್ಣವಾಗಿಪ್ಪುದು. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಲಿಂಗವು ಭಕ್ತಿಕಾರಣವಾಗಿ ಸ್ಥಲಂಗಳಿಗೆ ಗೊತ್ತಾದ ಭೇದ.
--------------
ಮೋಳಿಗೆ ಮಹಾದೇವಿ
ಭಕ್ತಂಗೆ ವಿಶ್ವಾಸ, ಮಾಹೇಶ್ವರಂಗೆ ನೈಷ್ಢೆ, ಪ್ರಸಾದಿಗೆ ಅಯೋಚಿತ, ಪ್ರಾಣಲಿಂಗಿಗೆ ಮುಟ್ಟಿದಲ್ಲಿ ಅರ್ಪಿತಭೇದ, ಶರಣಂಗೆ ದೃಷ್ಟದಲ್ಲಿ ಮುನ್ನವೆ ಬಿಡುಗಡೆ, ಐಕ್ಯಂಗೆ ಕುರುಹುಗೊಂಬುದಕ್ಕೆ ಮುನ್ನವೆ ನಿರಾಳ. ಇಂತೀ ಷಟ್‍ಸ್ಥಲವಾದ ಭೇದ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಲಿಂಗವು ಎನಗೆ ಉಮಾಮಹೇಶ್ವರನಾದಹನೆಂದು.
--------------
ಮೋಳಿಗೆ ಮಹಾದೇವಿ