ಅಥವಾ
(6) (3) (3) (0) (0) (1) (0) (0) (2) (1) (0) (0) (0) (0) ಅಂ (3) ಅಃ (3) (15) (0) (2) (0) (0) (1) (0) (0) (0) (0) (0) (0) (0) (0) (0) (3) (0) (1) (0) (6) (3) (0) (5) (2) (4) (0) (0) (0) (1) (0) (1) (1) (7) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಮೃತ್ತಿಕೆಯ ತಿಟ್ಟದಿಂದ ಮಯಣದ ಕರುವಿಟ್ಟು, ಆ ಘಟವ ಲಕ್ಷಿಸಲಿಕ್ಕಾಗಿ, ಪುನರಪಿಯಾಗಿ ಮೃತ್ತಿಕೆಯ ಬಲಿದು ಈ ಉಭಯದ ಮಧ್ಯದಲ್ಲಿ ನಿಂದ ತಿಟ್ಟದಂತೆ ಇಂತೀ ತ್ರಿವಿಧ ಜಾರಿ ಉಳುಮೆ ಒಂದೆ ನಿಂದುದನರಿದು, ಭಕ್ತಿಯ ಮರೆಯಲ್ಲಿದ್ದ ಸತ್ಯ, ಸತ್ಯದ ಮರೆಯಲ್ಲಿ ವಿಶ್ರಮಿಸಿದ್ದ ಜ್ಞಾನ, ಜ್ಞಾನವ ವಿಶ್ರಮಿಸಿಕೊಂಡಿಹ ಶಿವಲಿಂಗಮೂರ್ತಿಧ್ಯಾನ, ಅದು ತದ್ಧ್ಯಾನವಾಗಲಿಕ್ಕಾಗಿ, ಅದು ನಿಜದ ಉಳುಮೆ; ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ ಸಾವಧಾನಿಯ ಸಂಬಂಧ.
--------------
ಮೋಳಿಗೆ ಮಹಾದೇವಿ
ಮಾಡಿದ ಭಕ್ತಿಗೆ ಕೈಲಾಸಕ್ಕೆ ಹೋದೆಹೆನೆಂಬುದು ಕೈಕೂಲಿ. ಭಾಷೆಗೆ ತಪ್ಪಿ ಓಸರಿಸಿದ ಮತ್ತೆ ಅನಿಹಿತವ ಹೇಳಿದಲ್ಲಿ ಮತ್ತೆ ಘಾತಕತನದಿಂದ ಎಯ್ದಿಹೆನೆಂಬುದು ಭಕ್ತಿಗೆ ವಿಹಿತವಲ್ಲ. ದೃಷ್ಟದಲ್ಲಿ ಕೊಟ್ಟುದ ಲಕ್ಷಿಸಲರಿಯದೆ, ಅಲಕ್ಷ್ಯವ ಲಕ್ಷಿಸಿ ಕಾಂಬುದಕ್ಕೆ ಲಕ್ಷ್ಯವೇನು ? ಅದು ನಿರೀಕ್ಷಣೆಯ ಲಕ್ಷ್ಯದಿಂದಲ್ಲದೆ, ಆತ್ಮಂಗೆ ಲಕ್ಷ್ಯವಿಲ್ಲ. ಇಂತೀ ಉಭಯದಲ್ಲಿ ಲಕ್ಷಿತವಾದವಂಗೆ ಮರ್ತ್ಯ ಕೈಲಾಸವೆಂಬುದು; ತನ್ನರಿವು ನಿಶ್ಚಯವಾದಲ್ಲಿ ಅದೆ ಲಕ್ಷ್ಯ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನ ಅಲ್ಲಿ ಇಲ್ಲಿ ಎಲ್ಲಿಯೂ ತಾನೆ.
--------------
ಮೋಳಿಗೆ ಮಹಾದೇವಿ
ಮಣ್ಣನಿತ್ತು ನಿಮ್ಮ ಕಂಡೆಹೆನೆಂದಡೆ ಜಗಭರಿತ ನೀನು ಹೊನ್ನನಿತ್ತು ನಿಮ್ಮ ಕಂಡೆಹೆನೆಂದಡೆ ಹಿರಣ್ಯಮೂರ್ತಿ ನೀನು ಹೆಣ್ಣನಿತ್ತು ನಿಮ್ಮ ಕಂಡೆಹೆನೆಂದಡೆ ತ್ರಿವಿಧಶಕ್ತಿಮೂರ್ತಿ ನೀನು ಮನವನಿತ್ತು ನಿಮ್ಮ ಕಂಡೆಹೆನೆಂದಡೆ ಮನೋಮೂರ್ತಿ ನೀನು ಎನಗೇನು ನಿನಗಿತ್ತು ಕಾಬ ಕಾಣಿಕೆ, ನೀನು ಸಿಕ್ಕುವುದಕ್ಕೆ ? ಕ್ರೀಯಲ್ಲಿ ನಿರತ, ಸದ್ಭಾವದಲ್ಲಿ ಶುದ್ಧ, ಹಿಡಿದುದ ಬಿಡದೆ, ಬಿಟ್ಟುದ ಹಿಡಿಯದೆ, ನಿಶ್ಚಯವಾದ ನಿಜಜ್ಞಾನಿಗಳಲ್ಲಿ ಬೆಚ್ಚಂತಿದ್ದಡೆ ನೀನು ಅಲ್ಲಿ ತಪ್ಪದಿಪ್ಪೆ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ.
--------------
ಮೋಳಿಗೆ ಮಹಾದೇವಿ
ಮನೆಯಲ್ಲಿ ವೀರ ಧೀರ; ರಣದಲ್ಲಿ ಓಸರಿಸಿದ ಮತ್ತೆ ಭಾಷೆಯ ಬಂಟನಲ್ಲ. ನೀ ಬಂದ ದೇಶ, ನೀ ಮಾಡುವ ಮಾಟ ನೀ ಪ್ರಮಥರೆಲ್ಲರ ಹಂಗಿಸುವ ನಿರಂಗವಾಚಕನ ಕೂಡಿಹೆನೆಂಬ ಸಂಧಿಯಲ್ಲಿಯೇ ನಿಂದಿತ್ತು ನಿಜಲಿಂಗದಕೂಟ. ಆ ಸುಸಂಗವ ನಿನ್ನ ನೀನೆ ನೋಡಿಕೊ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ.
--------------
ಮೋಳಿಗೆ ಮಹಾದೇವಿ