ಅಂಗದ ಮೇಲೆ ಲಿಂಗವ ಬಿಜಯಂಗೈಸಿಕೊಂಡು,
ಲಿಂಗವಿಲ್ಲದಂಗನೆಯರನಪ್ಪಿದಡೆ, ಸುರಾಭಾಂಡವನಪ್ಪಿದಂತೆ ಕೇಳಿರಣ್ಣ.
ಲಿಂಗಸಾಹಿತ್ಯವಾಗಿರ್ದು, ಲಿಂಗವಿಲ್ಲದ ಸತಿಯರ ಕೂಡಿಕೊಂಡಿಹ ಪರಿಯೆಂತಯ್ಯ !
ಲಿಂಗವುಳ್ಳ ತನು ಲಿಂಗವಿಲ್ಲದ ತನುವಿನೊಡನೆ ಸಂಯೋಗಮಂ
ಮಾಡಿದಡೆಂತಕ್ಕು,
ಹಾಲಗಡಿಗೆಯ ಹಂದಿ ಮುಟ್ಟಿದಂತಕ್ಕು !
ಅದೆಂತೆಂದಡೆ :
ಲಿಂಗೇನ ಸಹಿತೋ ದೇಹೀ ಲಿಂಗಹೀನಾಂ ತು ಯಃ ಸತೀಮ್ |
ಸಹವಾಸೇ ಸಹತೇ ನಿತ್ಯಂ ಕಿಂ ಫಲಂ ಕಿಂ ಕೃತಂ ಭವೇತ್ ||
ಕಿಂ ತೇನ ಕ್ಷೀರಭಾಂಡೇನ ಸೂಕರೈ ಃ ಸಹ ವರ್ತಿನಾ |
ಎಂದುದಾಗಿ, ಲಿಂಗವುಳ್ಳ ಲಿಂಗಾರ್ಚಕರು ಲಿಂಗೈಕ್ಯರು,
ಲಿಂಗವಿಲ್ಲದೆ ಭವಿಯಾಗಿರ್ದ ಸತಿಯರ ಆಲಿಂಗನ, ಚುಂಬನವ ಮಾಡಿದಡೆ,
ಗುರುಕಾರುಣ್ಯ ಉಂಟೆಂದು ಸಾಧಾರಣಪಕ್ಷದಲ್ಲಿ ಮಾಡಿಕೊಂಡಿರ್ದಡೆ,
ಮಾಡಿದ ಲಿಂಗಾರ್ಚನೆ ನಿಷ್ಫಲಂ.
ಶತಜನ್ಮ ಪರಿಯಂತರ ಹೊಲೆಯರಲ್ಲಿಕ್ಕದೆ ಮಾಣ್ಬನೆ,
ನಮ್ಮ ದೇವರಾಯ ಸೊಡ್ಡಳ.