ಅಥವಾ
(37) (13) (6) (1) (1) (0) (0) (0) (13) (3) (0) (2) (8) (0) ಅಂ (8) ಅಃ (8) (13) (0) (12) (1) (0) (0) (0) (16) (0) (0) (0) (0) (0) (0) (0) (7) (0) (7) (1) (15) (29) (0) (8) (9) (12) (1) (3) (0) (34) (17) (46) (0) (28) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಂತರಂಗ ಬಹಿರಂಗವೆಂದೆಂಬರು, ಆವುದು ಮುಂದು ಆವುದು ಹಿಂದೆಂದರಿಯರು. ಎಳ್ಳೊಳಗಣ ಎಣ್ಣೆ ಕಲ್ಲೊಳಗಣ ಹೇಮ ಹಾಲೊಳಗಣ ತುಪ್ಪ ಕಾಷ*ದೊಳಗಣ ಅಗ್ನಿಯಿಪ್ಪಂತಿಪ್ಪ ಚಿನುಮಯ ಮೂರ್ತಿಯನೂ ಶ್ರೀಗುರುಹಸ್ತಾಬ್ಜಮಂ ಶಿಷ್ಯನ ಮಸ್ತಕದಲ್ಲಿಟ್ಟು ಆಕರ್ಷಣಂ ಮಾಡಿ ತೆಗೆದು ತಲ್ಲಿಂಗವನಂಗದಲ್ಲಿ ಸ್ಥಾಪ್ಯವಂ ಮಾಡಿ ಸುಜ್ಞಾನಕ್ರೀಯ ಉಪದೇಶವಂ ಮಾಡಲು ಘಟದ ಹೊರಗಿಹ ಆನಲನೂ ಆ ಘಟವ ಭೇದಿಸಿ ತಜ್ಜಲವ ಹಿಡಿದು ತೆಗೆದುಕೊಂಬಂತೆ ಬಾಹ್ಯದಿಂ ಮಾಡುವ ಸತ್ಕ್ರಿಯಾವರ್ತನದಿಂ ಜೀವಶಿವ ಸಂಗವಹ ಬಟ್ಟೆಯನರಿಯದೆ ಹಲವು ಬಟ್ಟೆಯಲ್ಲಿ ಹರಿವರು, ಅಜ್ಞಾನಸಂಬಂಧಿಗಳು, ಗುರುವಚನಪರಾಙ್ಮುಖರು, ಕರ್ಮನಿರ್ಮಲವಾಗದ ಜಡರುಗಳು, ಲಿಂಗನಿಷಾ*ವಿರಹಿತರು, ನಿಮ್ಮನೆತ್ತಬಲ್ಲರಯ್ಯ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಚ್ಚಭವಿತನದಿಂದ ನಿಚ್ಚನರಕಕ್ಕಿಳಿವ ಕರ್ಮಚಾಂಡಾಲವಿಪ್ರರು ನೀವು ಕೇಳಿರೇ ! ಈಶಭಕ್ತರ ಕಂಡು ದೂಷಿಸಿ ನರಕಕ್ಕಿಳಿವ ಶಾಪಹತರು ನೀವು ಕೇಳಿರೇ ! ವಿಭೂತಿಯನೊಲ್ಲದೆ ಬಿಳೆಯ ಮಣ್ಣನಿಡುವ ಶ್ವಪಚರೆಲ್ಲಾ ನೀವು ಕೇಳಿರೇ ! ಹರಿಯೂ ಹರನೂ ಹರಿಯೆಂದು ಗಳುಹುವ ಮರುಳವಿಪ್ರರರು ನೀವು ಕೇಳಿರೇ ! ಆದಿಯಲ್ಲಿ ಶ್ರೀವಿಷ್ಣು ಮೇದಿನಿಯರಿಯೆ ಒಂದು ನಯನವನು ಪುಷ್ಪಮಾಗಿತ್ತು ಪಡೆಯನೇ ವೈಕುಂಠವನು ? ವೇದಕ್ಕೆ ನೆಲಗಟ್ಟಾವುದೆಂದು ಬಲ್ಲಡೆ ನೀವು ಹೇಳಿರೆ ! ಬ್ರಾಹ್ಮಣಿಕೆಗೆ ನೆಲೆಗಟ್ಟಾವುದೆಂಬುದು ಬಲ್ಲಡೆ ನೀವು ಹೇಳಿರೆ ! ವೇದಕ್ಕೆ ನೆಲೆಗಟ್ಟು ಓಂಕಾರ, ಬ್ರಾಹ್ಮಣಕ್ಕೆ ನೆಲಗಟ್ಟು ಗಾಯತ್ರೀ. ಓಂಕಾರವೇನ ಹೇಳಿತ್ತು, ಗಾಯತ್ರಿಯೇನ ಹೇಳಿತ್ತೆಂಬುದ ತಿಳಿದು ವಿಚಾರಿಸಿಕೊಳ್ಳಿರೇ ಶ್ರುತಿಗಳೊಳಗೆ. ಅದೆಂತೆಂದಡೆ: ಓಂಕಾರಪ್ರಭವಾ ವೇದಾ ಓಂಕಾರಪ್ರಭವಾಸ್ಸ್ವರಾಃ ಓಂಕಾರಪ್ರಭವಂ ಸರ್ವಂ ತ್ರೈಲೋಕ್ಯಂ ಸಚರಾಚರಂ ಇನ್ನು ಗಾಯತ್ರಿ: ಓಂ ಮಹಃ ಓಂ ಜನಃ ಓಂ ತಪಃ ಓಂ ಸತ್ಯಂ ಓಂ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್' ಎಂದು ಶ್ರಾದ್ಧ ತದ್ದಿನ ಪಿತ್ಯಕಾರ್ಯವ ಮಾಡುವಲ್ಲಿ ವಿಶ್ವದೇವರ ಸ್ಥಾಪನೆಯಂ ಮಾಡುವಿರಿ. `ವಿಶ್ವದೇವಾಯ ಸ್ವಾಹಾ' ಎಂದು ಅರ್ಚನೆ ವಂದನೆಯಂ ಮಾಡುವಿರಿ ಯಥೋಕ್ತವಾಗಲಿ ಯಥಾಕಾಲವಾಗಲೆಂದು ಬೇಡಿಕೊಂಬಿರಿ. `ಗಯಾಯಾಂ ಶ್ರೀರುದ್ರಪಾದೇ ದತ್ತಮಸ್ತು' ಎಂದೆಂಬಿರಲ್ಲಾ `ಗಯಾಯಾಂ ಶ್ರೀವಿಷ್ಣುಪಾದೇ ದತ್ತಮಸ್ತು' ಎಂದೆಂದುಂಟಾದಡೆ ಹೇಳಿರೇ. ಸತಿಗೆ ಪಿಂಡವ ಕೊಡುವಲ್ಲಿ ವಸುರುದ್ರಾದಿತ್ಯರೂಪೇಭ್ಯೋ ಮಧ್ಯಪಿಂಡಸ್ತು ಪುತ್ರದಃ ವೇದೋಕ್ತರುದ್ರನಿರ್ಮಾಲ್ಯಂ ಉರಸ್ಥಾನ್ಯಪವಿತ್ರಕಂ ಆದಿಪಿಂಡಾಂತ್ಯಪಿಂಡಂ ಚ ವರ್ಜಯೇತ್ ಸತತಂ ಬುಧಃ ಎಂದು ರುದ್ರಪಿಂಡದಿಂದ ಉತ್ಪತ್ಯವಾಗಿ ಮರಳಿ ಭಕ್ತರ ಜರಿದು ಗಳಹುವಾ ಪಾತಕರೆಲ್ಲರೂ ನೀವು ಕೇಳಿರೇ ಭಕ್ತರು ಕೊಂಬುದೇ ಪಾದೋದಕ ಪ್ರಸಾದ, ನೀವು ಉಂಬುದೇ ಭೂತಶೇಷ. ಅದೆಂತೆಂದೊಡೆ ಮಂತ್ರ: `ಪ್ರಾಣಾಯ ಸಾಹಾ ಅಪಾನಾಯ ಸ್ವಾಹಾ ವ್ಯಾನಾಯ ಸ್ವಾಹಾ ಉದಾನಾಯ ಸ್ವಾಹಾ ಸಮನಾಯ ಸ್ವಾಹಾ' ಎಂದು ಪಂಚಭೂತಕ್ಕೆ ಬಲಿಯನಿಕ್ಕಿ ಆ ಭೂತಶೇಷವ ತಿಂಬ ಭೂತಪ್ರಾಣಿಯ ಲಿಂಗಪ್ರಾಣಿಗೆ ಸರಿಯೆಂಬವನ ಬಾಯಲ್ಲಿ ಕೆರ್ಪನಿಕ್ಕಿ ಈಶಭಕ್ತಿಯ ಮೆರೆವ ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಯ್ಯಾ, ಪಾದೋದಕವ ಮುಗಿಸಿ ಪ್ರಸಾದವ ಮುಗಿಸಬೇಕಲ್ಲದೆ, ಪ್ರಸಾದವ ಮುಗಿಸಿ ಪಾದೋದಕವ ಮುಗಿಸಲಾಗದು. ಪ್ರಸಾದವು ಮುಗಿದ ಮೇಲೆ, ಪ್ರಸಾದೋದಕವಲ್ಲದೆ ಪಾದೋದಕವೆಲ್ಲುಂಟು ಹೇಳಾ ? ಸಂಬಂಧಾಚರಣೆಗಳ ಮುಖದಿಂದ ಪ್ರಾಣಲಿಂಗಾರ್ಪಿತವಾದ ಮೇಲೆ ಇಷ್ಟಲಿಂಗಕ್ಕೆ ಪ್ರಸಾದವರ್ಪಿತವಯ್ಯಾ. ಪಾದೋದಕಸ್ವರೂಪವಾದ ಇಷ್ಟಲಿಂಗಕ್ಕೆ ಪಾದೋದಕವನರ್ಪಿಸಿ ಕೊಳಬೇಕಯ್ಯ. ಪ್ರಸಾದಸ್ವರೂಪವಾದ ಪ್ರಾಣಲಿಂಗಕ್ಕೆ ಪ್ರಸಾದವನರ್ಪಿಸಿ ಕೊಳಬೇಕಯ್ಯ, ಇಂತು ವಿಚಾರಮುಖದಿಂದ ಪಾದೋದಕ ಪ್ರಸಾದವ ದಿವಾರಾತ್ರಿಗಳೆನ್ನದೆ [ಕೊಂಡು] ಸಂತೃಪ್ತನಾದಡೆ, ಪ್ರಸಾದಲಿಂಗಕ್ಕಂಗವಾದ ಅಚ್ಚ ಶಿವಶರಣನೆಂಬೆ ನೋಡಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅರಿದು ಮರೆದವನು ಶಿವಭಕ್ತನೆ ? ಅಲ್ಲ. ಶಿವಭಕ್ತನರಿದ ಬಳಿಕ ಮರೆಯನು. ಅರಿದು ಮರೆದವನು ಮದ್ದಗುಣಿಕೆಯ ಮೆಲಿದವನು. ಮದಮಧುವ ಸೇವಿಸಿದವನು. ಅರಿದು ಮರೆದವನು ಅಜ್ಞಾನಿಗಳ ಸಂಗವ ಮಾಡಿದವನು. ಶ್ವಾನಮೂತ್ರವನುಂಡವನು. ಅವಿದರುಗಳಿಗೆ ಅರಿವು ಮರವೆ ಸಹಜವಾದ ಕಾರಣ ಅರಿದವನಲ್ಲ, ಅರಿತು ಮರೆದವನಲ್ಲ ಶಿವಭಕ್ತನು. ನಂಬುವನಲ್ಲ ನಂಬುಗೆಗೆಡುವನಲ್ಲ ಶಿವಭಕ್ತನು. ವಿಶ್ವಾಸವ ಮಾಡುವನಲ್ಲ ಅವಿಶ್ವಾಸವ ಮಾಡುವನಲ್ಲ ಶಿವಭಕ್ತನು. ಮರೆದಡೆ ಮರೆದವರಂತೆ ಅರಿದಡೆ ಶಿವನಂತೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅನಂತ ಜನ್ಮಗಳ ಪಾಪಂಗಳು ಸವೆದು ಹೋಗಿ ಶ್ರೀಗುರುವಿನ ಕರುಣಾಕಟಾಕ್ಷದಿಂದ ಪ್ರಾಣಲಿಂಗೋಪದೇಶವ ಪಡೆದು ಸದ್ಭಕ್ತರಾಗಿ ಶಿವಲಿಂಗ ದರ್ಶನ ಸ್ಪರ್ಶನವ ಮಾಡಿ ಆ ಲಿಂಗವನಂಗದಲ್ಲಿ ಧರಿಸಿಕೊಂಡು ಅಂಗವೇ ಲಿಂಗ ಲಿಂಗವೇ ಅಂಗ ಪ್ರಾಣವೇ ಲಿಂಗ ಲಿಂಗವೇ ಪ್ರಾಣವಾಗಿ ಅಂತರಂಗ ಬಹಿರಂಗ ಸರ್ವಾಂಗವೆಲ್ಲವೂ ಲಿಂಗವಾದ ಬಳಿಕ ಇಂತೀ ಶ್ರೀಗುರು ಕೊಟ್ಟ ಲಿಂಗವ ಬಿಟ್ಟು ಬೋರೆ ಮತ್ತೆ ಆತ್ಮತತ್ತ್ವವ ವಿಚಾರಿಸಿ ನೋಡಬೇಕೆಂದು ಪರಮಾತ್ಮನಲ್ಲಿ ಯೋಗವ ಮಾಡಿ ಯೋಗಿಗಳಾಗಿ ಮುಕ್ತರಾದೆವೆಂಬಿರಿ. ಶಿವಶಿವಾ, ಆತ್ಮನನು ಪರಮಾತ್ಮನನು ಶ್ರೀ ಗುರುಸ್ವಾಮಿ ಒಂದು ಮಾಡಿ ಇದೇ ನಿನ್ನ ನಿಜತತ್ತ್ವವೆಂದು ಅರುಹ ಹೇಳಿ ತೋರಿಸಿಕೊಟ್ಟ ಬಳಿಕ ಇಂತಹ ಗುರುಸ್ವಾಮಿಯ ಆಜ್ಞೆಯ ಮೀರಿ ಲಿಂಗವನರಿಯದೆ ಲಿಂಗಬಾಹಿರರಾದ ದ್ವಿಜರನು ಯೋಗಿಯನು ಸನ್ಯಾಸಿಯನು ಗುರುವೆಂದು ಭಾವಿಸಬಹುದೆ ? ಶಿವ ಶಿವಾ, ಅದು ಗುರುದ್ರೋಹ. ಪರಶಿವಮೂರ್ತಿಯಾದ ಗುರುಸ್ವಾಮಿಯು ಷಡ್ದರ್ಶನಗಳಿಗೂ ಸಮಸ್ತಮತಂಗಳಿಗೂ ಸಮಸ್ತಾಗಮಂಗಳಿಗೆಯೂ ಶಿವನೊಬ್ಬನೇ ಕರ್ತನೆಂದು, ಶಿವದರ್ಶನವೇ ವಿಶೇಷವೆಂದು, ಅಧಿಕವೆಂದು ಹೇಳಿ ತೋರಿ ಕೊಟ್ಟ ಬಳಿಕ ಶೈವವೆಂದು ಶಾಕ್ತೇಯವೆಂದು ವೈಷ್ಣವವೆಂದು ಗಾಣಪತ್ಯವೆಂದು ¸õ್ಞರವೆಂದು ಕಾಪಾಲಿಕವೆಂದು ಇಂತೀ ಷಡ್ದರ್ಶನಂಗಳಿಗೆಯೂ ಶಿವನೊಬ್ಬನೇ ಕರ್ತ, ಇಂತೀ ಷಡ್ದರ್ಶನಕ್ಕೆ ಶಿವದರ್ಶನವೇ ಅಧಿಕವೆಂದು, ಇಂತೀ ಶಿವದರ್ಶನ ಮಾರ್ಗವಿಲ್ಲದೆ ಮುಕ್ತಿಯಿಲ್ಲವೆಂದು, ಆ ಪರಶಿವನೆಂಬ ಗುರುಮೂರ್ತಿ ಅರುಹಿ ಕಾಣಿಸಿ ಹೇಳಿ ತೋರಿ ಕೊಟ್ಟ ಬಳಿಕ ಅದೆಂತೆಂದಡೆ ಶಿವಧರ್ಮೇ_ ದರ್ಶನ ಷಡ್ವಿಧಂ ಪ್ರೋಕ್ತಂ ಶೈವಂ ಶಾಕ್ತಂ ವೈಷ್ಣವಂ ಗಣಾಪತ್ಯಂ ಚ ¸õ್ಞರಂ ಚ ಕಾಪಾಲಿಕಮಿತಿ ಸ್ಮೃತಮ್ ಮತ್ತಂ ಷಡ್ದರ್ಶನಾದಿ ದೇವೋ ಹಿ ಮಹಾದೇವೋ ನ ಸಂಶಯಃ ಮಂತ್ರಪೂಜಾದಿ ಭಿನ್ನಾನಾಂ ಮೂಲಂ ಪರಶಿವಸ್ತಥಾ ಎಂಬುದಾಗಿ, ಇನ್ನು ವೈಷ್ಣವವೆಂದು ಆತ್ಮಯೋಗವೆಂದು ಶಾಕ್ತಿಕವೆಂದು ವೈದಿಕವೆಂದು ಇಂತೀ ಭ್ರಾಂತಿನ ದರ್ಶನಮತಂಗಳನು ಕೇಳಿ, ಅಲ್ಲಿಯ ಧರ್ಮಾಧರ್ಮಂಗಳನು ಕೇಳಿ, ಅಲ್ಲಿ ಉಪದೇಶವ ಮಾಡಿಸಿಕೊಳ್ಳಬಹುದೇ ? ಶಿವಶಿವಾ, ಅದು ಗುರುದ್ರೋಹ, ಆ ಶ್ರೀಗುರುವಿನಾಜ್ಞೆಯ ಮೀರದಿರಿ. ಆ ಪರಶಿವಮೂರ್ತಿತತ್ತ್ವವೇ ಗುರುಸ್ವಾಮಿಯಾಗಿ ಚೆನ್ನಾಗಿ ಅರುಹಿ ತೋರಿ ಹೇಳಿ ಕೊಟ್ಟನಲ್ಲದೆ ಆ ಗುರುಸ್ವಾಮಿ ಏನು ತಪ್ಪಿ ಹೇಳಿದುದಿಲ್ಲ. ಶ್ರುತಿ ``ಏಕೋ ದೇವೋ ನ ದ್ವಿತೀಯಾಯ ತಸ್ಥೇ' ಎಂದುದಾಗಿ ಶಿವನೊಬ್ಬನೇ ದೈವವೆಂದು ತೋರಿಕೊಟ್ಟ ಶ್ರೀಗುರು. ಶ್ರುತಿ ``ಏಕೋ ಧ್ಯೇಯಃ' ಎಂದು ಶಿವನೊಬ್ಬನನ್ನೇ ಧ್ಯಾನಿಸಿ ಪೂಜಿಸೆಂದು ಹೇಳಿ ತೋರಿಕೊಟ್ಟನು ಶ್ರೀಗುರು. ಶ್ರುತಿ ``ನಿರ್ಮಾಲ್ಯಮೇವ ಭಕ್ಷಯಂತಿ' ಎಂದುದಾಗಿ ಶಿವಪ್ರಸಾದವನೆ ಗ್ರಹಿಸಿಯೆಂದು ಪ್ರಸಾದವ ಕರುಣಿಸಿದ ಶ್ರೀಗುರು ಇಂತಹ ಶ್ರೀಗುರು ಮರುಳನು, ನೀನು ಬುದ್ಧಿವಂತನೇ ? ಕೇಳಾ, ನಿಮ್ಮ ಗುರುವ ಮರುಳ ಮಾಡಿದಿರಿ, ಅದೆಂತೆಂದಡೆ: ನಿಮ್ಮಿಚ್ಛೆಯಲ್ಲಿಯೇ ಬಂದುದಾಗಿ, ಅದಲ್ಲದೆ ಮತ್ತೆ ಕೇಳು: ಪೂರ್ವದ ಪುರುಷರು ಮರುಳರು, ನೀನೊಬ್ಬನೇ ಬುದ್ಧಿವಂತ ? ಕೇಳೋ: ದೂರ್ವಾಸ ಉಪಮನ್ಯು ದಧೀಚಿ ಜಮದಗ್ನಿ ಮಾರ್ಕಂಡೇಯ ಪರಾಶರ ಮೊದಲಾದ ಋಷಿಗಳೆಲ್ಲ ಶಿವಾರ್ಚನೆಯಂ ಮಾಡಿದರು. ಬ್ರಹ್ಮವಿಷ್ಣು ಮೊದಲಾದವರೆಲ್ಲರೂ ಶಿವಲಿಂಗಾರ್ಚನೆಯ ಮಾಡಿದರು, ಕೇಳಿರೇ ನೋಡಿರೇ ದೃಷ್ಟವನು. ಮತ್ಸ್ಯಕೇಶ್ವರ ಕೂರ್ಮೇಶ್ವರ ವರಾಹೇಶ್ವರ ನಾರಸಿಂಹೇಶ್ವರ ರಾಮೇಶ್ವರ ಎಂಬ ದಶಾವತಾರಗಳಲ್ಲಿ ಶಿವಲಿಂಗಪ್ರತಿಷೆ*ಯಂ ಮಾಡಿ ಶಿವಲಿಂಗಾರ್ಚಾನೆಯಂ ಮಾಡಿದರು. ಅನೇಕ ವೇದಶಾಸ್ತ್ರಾಗಮಪುರಾಣಂಗಳ ಕೇಳಿರೇ ನೋಡಿರೇ. ಯಂ ಯಂ ಕಾಮಯತೇ ಕಾಮಂ ತಂ ತಂ ಲಿಂಗಾರ್ಚನಾಲ್ಲಭೇತ್ ನ ಲಿಂಗೇ [ನ] ವಿನಾ ಸಿದ್ದಿದುರ್ಲಭಂ ಪರಮಂ ಪದಂ ಮತ್ತಂ ಅಸುರಾ ದಾನವಾಶ್ಚೈವ ಪಿಶಾಚೋರಗರಾಕ್ಷಸಾಃ ಆರಾಧ್ಯಂ ಪರಮಂ ಲಿಂಗಂ ಪ್ರಾಪುಸ್ತೇ ಸಿದ್ಧಿಮುತ್ತಮಾಮ್ ಮತ್ತಂ ಅಗ್ನಿಹೋತ್ರಶ್ಚವೇದಶ್ಚ ಯಜ್ಞಾಶ್ಚ ಬಹುದಕ್ಷಿಣಾಃ ಶಿವಲಿಂಗಾರ್ಚನಸ್ಯೈತೇ ಕೋಟ್ಯಂಶೇನಾಪಿ ನೋ ಸಮಾಃ ಎಂದುದಾಗಿ, ಇಂತು ಇದು ಮೊದಲಾದ ದೇವಜಾತಿಗಳೆಲ್ಲ ಶಿವಲಿಂಗಾರ್ಚನೆಯಂ ಮಾಡಿದುದಕ್ಕೆ ದೃಷ್ಟ ನೋಡಿರೇ: ಕಾಶೀಕ್ಷೇತ್ರದಲ್ಲಿ ಬ್ರಹ್ಮೇಶ್ವರ ಇಂದ್ರೇಶ್ವರ ಯಕ್ಷಸಿದ್ದೇಶ್ವರ ಎಂಬ ಲಿಂಗಂಗಳಂ ಪ್ರತಿಷಿ*ಸಿ ಶಿವಲಿಂಗಾರ್ಚನೆಯಂ ಮಾಡಿದರು. ತಾರಕ ರಾವಣಾದಿಗಳೆಲ್ಲ ಶಿವಲಿಂಗಾರ್ಚನೆಯಂ ಮಾಡಿದರು. ಇಂತವರೆಲ್ಲರು ಮರುಳರು, ನೀನೊಬ್ಬನೇ ಬುದ್ಧಿವಂತನೆ ? ಅದು ಕಾರಣ, ಆ ಶ್ರೀಗುರುವಿನಾಜ್ಞೆಯಂ ಮೀರಿ ಕೆಡದಿರಿ ಕೆಡದಿರಿ. ಆ ಮಹಾ ಶ್ರೀಗುರುವಿನ ವಾಕ್ಯವನೇ ನಂಬಿ, ಗುರುಲಿಂಗಜಂಗಮವನೊಂದೇಯೆಂದು ನಿಶ್ಚಯಿಸಿ, ಇದೇ ಅಧಿಕ, ಇದರಿಂದ ಬಿಟ್ಟು ಮತ್ತಾವುದು ಅಧಿಕವಿಲ್ಲ. ಅಂದು ಗುರುಲಿಂಗಜಂಗಮದಲ್ಲಿಯ ಭಕ್ತಿಯೆ ಭಕ್ತಿ, ಅರ್ಚನೆಯೇ ಅರ್ಚನೆ, ಆ ಸಂಗವೇ ಶಿವಯೋಗ, ಇದು ಸತ್ಯ ಶಿವನಾಣೆ, ಉರಿಲಿಂಗಪೆದ್ಧಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಅಗ್ನಿಮುಟ್ಟಲು ತೃಣವಗ್ನಿಯಪ್ಪುದು ತಪ್ಪದಯ್ಯ. ಗುರುಪ್ರಸಾದವಂಗವ ಸೋಂಕಿದಲ್ಲಿ ಸರ್ವಾಂಗ ಗುರುವಪ್ಪುದು ತಪ್ಪದಯ್ಯ. ಲಿಂಗಪ್ರಸಾದ ಮನವ ಸೋಂಕಿದಲ್ಲಿ ಮನ ಲಿಂಗವಪ್ಪುದು ತಪ್ಪದಯ್ಯ. ಜಂಗಮಪ್ರಸಾದ ಅರಿವ ಸೋಂಕಿದಲ್ಲಿ ಅಖಂಡಿತ ಪ್ರಸನ್ನಪ್ರಸಾದವಪ್ಪುದು ತಪ್ಪದಯ್ಯ. ಶಿವಶಿವಾ, ಪ್ರಸಾದದ ಮಹಿಮೆಯನೇನೆಂದುಪಮಿಸುವೆ ? ಪ್ರಸಾದವೇ ಗುರು, ಪ್ರಸಾದವೇ ಲಿಂಗ, ಪ್ರಸಾದವೇ ಜಂಗಮ, ಪ್ರಸಾದವೇ ಪರಾತ್ಪರ, ಪ್ರಸಾದವೇ ಪರಮಾನಂದ, ಪ್ರಸಾದವೇ ಪರಮಾಮೃತ, ಪ್ರಸಾದವೇ ಪರಮಜ್ಞಾನ, ಪ್ರಸಾದವೇ ವಾಙ್ಮನೋತೀತ, ಪ್ರಸಾದವೇ ನಿತ್ಯಪರಿಪೂರ್ಣ. ಇಂತಪ್ಪ ಪ್ರಸಾದವ ಕೊಂಡು ಬದುಕಿದೆನಯ್ಯ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅರಿಯದ ಕಾರಣ ಭವಕ್ಕೆ ಬಂದರು. ಅರಿವಿಲ್ಲದವಂಗೆ ಆಚಾರವಿಲ್ಲ, ಆಚಾರವಿಲ್ಲದವಂಗೆ ಅರಿವಿಲ್ಲ. ಅರಿವಿಲ್ಲದವಂಗೆ ಗುರುವಿಲ್ಲ, ಗುರುವಿಲ್ಲದವಂಗೆ ಲಿಂಗವಿಲ್ಲ. ಲಿಂಗವಿಲ್ಲದವಂಗೆ ಜಂಗಮವಿಲ್ಲ, ಜಂಗಮವಿಲ್ಲದವಂಗೆ ಪ್ರಸಾದವಿಲ್ಲ. ಪ್ರಸಾದವಿಲ್ಲದವಂಗೆ ಮಹಾಲಿಂಗವಿಲ್ಲವಯ್ಯಾ. ಈ ಆರು ಸಹಿತ ಆಚಾರ, ಆಚಾರಸಹಿತ ಗುರು ಗುರುಸಹಿತ ಲಿಂಗ, ಲಿಂಗಸಹಿತ ಜಂಗಮ ಜಂಗಮಸಹಿತ ಪ್ರಸಾದ, ಪ್ರಸಾದಸಹಿತ ಮಹಾಲಿಂಗ. ಆದಿಲಿಂಗ ಅನಾದಿಶರಣನಾಗಿಬಂದು ಷಡುಸ್ಥಲವ ನಡೆದು ತೋರಿದ. ಅಂತಲ್ಲದೆ ಒಂದೊಂದ ಕಳೆದು ನಡೆದನೆಂದಡೆ ಸೋಪಾನದ ಕಟ್ಟೆಯ ಕಲ್ಲು ಬಿದ್ದಂತೆ. ಇದು ಆರಿಗೂ ಅಳವಡದು ಬಸವಣ್ಣಂಗಳವಟ್ಟಿತ್ತು. ಆ ಬಸವಣ್ಣನ ಭೃತ್ಯನಾಗಿರಿಸಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಂಡಜನುದರದಲ್ಲಿ ತಂದಿಕ್ಕಿದಾ ತತ್ತಿ ಮುಂದಣಾಧಿಕ್ಯವನರಿಯಲ್ಲುದೆ ನೋಡಾ. ಪಿಂಡಾಧಿಕ್ಯದ ಸಂದಳಿಯದ ಮುನ್ನ ಮುಂದೆ ಬಂದಿಪ್ಪುದು ಅದು ನೋಡಾ. ಒಬ್ಬ ಹೆಂಗೂಸಿಂಗೆ ಗಂಡು ನಾಲ್ವರು, ಗರ್ಭಿಣಿಯಾಗದ ಮುನ್ನ ಪ್ರಸೂತೆ, ಬಂಜೆಯ ಮಕ್ಕಳು ಮೂವರೈದಾರೆ, ನಾಲ್ವರ ಮೂಲವರಿಯದ ಕಾರಣ ಧರೆಯ ಮೇಲೆನಿಸಿದವು ? ಉಪಮೆಗುಡದ ಬಣ್ಣ ನೋಡಿ ಸಿಲಿಕಿದ ಕೂಟ ಉಂಟು ದಣಿಯದ ತೃಪ್ತಿ ಶ್ರೋತ್ರೇಂದ್ರಿಯದಲ್ಲಿ ಸವಿದು ಹರಿಯದ ಪರಿಮಳ ಸಂದು ಸವೆದೊಂದಾದ ಕೂಟ ನೋಡುವ ನೋಟವರಿತು ವಾಸಿಸುವ ವಾಸನೆ ಅರಿತು . ಆಚಾರ ಪ್ರಾಣವಾಗಿ ಅರಿವರಿತು ಮರಹು ನಷ್ಟವಾದಾತನೈಕ್ಯನು. ಆಚಾರವರಿತು ಅನಾಚಾರ ನಷ್ಟವಾದಾತನನುಪಮಮಹಿಮನು. ಶುದ್ಧ ಸಿದ್ಧ ಪ್ರಸಿದ್ಧಕ್ಕಾತ ನೆಲಮನೆ, ಆತನ ಮೀರುವದೊಂದೊಡ್ಡವಣೆಯ ಕಾಣೆ. ಕರುಣಾಮೃತಪೂರ್ಣವಾದ ಕುಂಭಕ್ಕೆ ವಿರಳ ಉಂಟೆ ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯನನೊಡಗೂಡಿ ಸಂದಳಿದ ಶರಣಂಗೆ ಬಳಕೆಯ ಬೇಟದ ಬಣ್ಣ ಉಂಟೆ ?
--------------
ಉರಿಲಿಂಗಪೆದ್ದಿ
ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ, ಮರಳಿ ಅನ್ಯದೈವಂಗಳನಾರಾಧಿಸುವ ಕುನ್ನಿಗಳು ನೀವು ಕೇಳಿಭೋ ವಿಷ್ಣುವೇ ದೈವವೆಂದು ಆರಾಧಿಸಿದ ಬಲಿಗೆ ಬಂಧನವಾಯಿತ್ತು. ವಿಷ್ಣುವೇ ದೈವವೆಂದು ಆರಾಧಿಸಿದ ಕರ್ಣನ ಕವಚ ಹೋಯಿತ್ತು. ವಿಷ್ಣುವೇ ದೈವವೆಂದು ಆರಾಧಿಸಿದ ನಾಗಾರ್ಜುನನ ಶಿರ ಹೋಯಿತ್ತು. ಅದಂತಿರಲಿ, ಬ್ರಾಹ್ಮಣನೇ ದೈವವೆಂದು ಆರಾಧಿಸಿದ ಗೌತಮಂಗೆ ಗೋವಧೆಯಾಯಿತ್ತು. ಬ್ರಾಹ್ಮಣನೇ ದೈವವೆಂದು ಆರಾಧಿಸಿದ ದಕ್ಷಂಗೆ ಕುರಿದಲೆಯಾಯಿತ್ತು. ಮೈಲಾರನೇ ದೇವರೆಂದಾರಾಧಿಸಿದಾತನು ಕೊರಳಲ್ಲಿ ಕವಡೆಯ ಕಟ್ಟಿ, ನಾಯಾಗಿ ಬೊಗಳುತಿರ್ಪ. ಭೈರವನೇ ದೇವರೆಂದಾರಾಧಿಸಿದಾತನು ಕೊರಳಲ್ಲಿ ಕವಡೆಯ ಕಟ್ಟಿ, ಕರುಳ ಬೆರಳ ಕಡಿದಿಕ್ಕಿ, ಬಾಹಿರನಾದನು. ಮಾಯಿರಾಣಿಯೇ ದೈವವೆಂದು ಆರಾಧಿಸಿದಾತನು ಕೊರಳಿಗೆ ಕವಡಿಯ ಕಟ್ಟಿ, ತಲೆಯಲ್ಲಿ ಕೆರಹ ಹೊತ್ತು, ಬೇವಿನ ಸೊಪ್ಪನುಟ್ಟು ಲಜ್ಜೆಯ ನೀಗಿದ. ಈ ಬಿನುಗು ದೈವಂಗಳ ಭಕ್ತಿ ಬಣಗು ನಾಯಿ ಒಣಗಿದೆಲುವ ಕಚ್ಚಿಕೊಂಡು ಕಂಡ ಕಂಡೆಡೆಗೆ ಹರಿದಂತಾಯಿತ್ತು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅರ್ಹನ್, ಬುದ್ಧ, ಚಾರ್ವಾಕ, ಮೀಮಾಂಸಕ, ನೀಲಪಟರೆಂಬವರು ಕಾಯದರುಶನಂಗಳಲ್ಲಿ ದೀಕ್ಷಿತರಾಗಿ ¸õ್ಞರ ಶಾಕ್ತೇಯ ವೈಷ್ಣವ ಗಾಣಾಪತ್ಯ ದರುಶನಂಗಳಂ ಹೊಕ್ಕು, ಒಡಲ ಮುಡುಹಂ ಸುಟ್ಟು, ಮುಟ್ಟಿಯನಿಟ್ಟು ಉಭಯಗೆಟ್ಟು ಶಿವಧ್ಯಾನವಿಲ್ಲದೆ ನರಕಕ್ಕಿಳಿದು ಅಧಮರಾಗಿ ಹೋಗಿ ಎಂದು ಹೇಳಿತ್ತೆಯಾ ವೇದ ? `ಶಿವಾರ್ಚನವಿಹೀನಂ ತು ಜನ್ಮಮೃತ್ಯೂನ ಮುಂಚತಃ' ಎಂದುದಾಗಿ ಮರಳಿ ಮರಳಿ ಜನ್ಮಕ್ಕೆ ಬಂದು ಮಾಡಿದ ಕರ್ಮದಿಂದ ನರಕಕ್ಕಿಳಿದು ಮಗ್ನರಾಗಹೇಳಿತ್ತೆಯಾ ವೇದ ? `ಓಂ ಅಪ್ರಶಿಖಾಯಾಂ ತ್ವಾಮಯಾಧನ್ಯ ಜೀವಾಗಮತ್ (?)' ಎಂದು ಹೇಳಿದ ಶ್ರುತ್ಯರ್ಥವನರಿಯದೆ ಹೋತನಂ ಕೊಂದು ಹೋಮಂಗಿಕ್ಕಿ ಚಾಂಡಾಲರಾಗ ಹೇಳಿತ್ತೆಯಾ ವೇದ ? ಶಿವಾರ್ಚಕಪದದ್ವಂದ್ವಯಜನಾದ್ಧಾರಣಾದಪಿ ಶಿವನಾಮ್ನಸ್ಸದಾಕಾಲಂ ಜಪಾದ್ವಿಪ್ರೋ ಭವಿಷ್ಯತಿ ಎಂಬರ್ಥವನರಿದು ಅರಿಯದೆ ನರಕಕ್ಕಿಳಿಯ ಹೇಳಿತ್ತೆಯಾ ವೇದ ? `ಏವಂ ರುದ್ರಾಯ ವಿಶ್ವದೇವಾಯ ರುದ್ರಪಾದಾಯ ದತ್ತಮಸ್ತು' ಎಂದುದಲ್ಲದೆ `ವಿಷ್ಣುಪಾದಾಯ ದತ್ತಮಸ್ತು' ಎಂದು ಹೇಳುವ ವೇದ ಉಳ್ಳರೆ ಹೇಳಿ ? ಅದಂತಿರಲಿ, ಕಾಶಿಕಾಂಡದಲ್ಲಿ ಹೇಳಿದ ಪುರಾಣಾರ್ಥದ ಹಾಗೆ ವ್ಯಾಧನ ಕೈಯಿಂದ ವಿಷ್ಣು ಹತವಾದನೆಂದಡೆ ಪರಿಣಾಮಿಸುವರು, ವೀರಭದ್ರನ ಕೈಯಿಂದ ವಿಷ್ಣು ಹತವಾದನೆಂದಡೆ ಅದು ಮಿಥ್ಯವೆಂಬರು. ಮಹಾಭಾರತದಲ್ಲಿ ವಿಷ್ಣು ಈಶ್ವರಂಗೆ ಬಿನ್ನಹಂ ಮಾಡಿದುದು: ಮನ್ನಾಥೋ ಲೋಕನಾಥಶ್ಚ ಅದ್ಯಕ್ಷರಸಮಾಯುತಃ ಏಕ ಏವ ಮಹಾದೇವೋ ಮಹೇಶಾನಃ ಪರಸ್ಥಿತಃ ಈಶ್ವರಸ್ಯ ಸಮೋ ನಾಸ್ತಿ ಬ್ರಹ್ಮಾ ವಿಷ್ಣುಶ್ಚ ಕಿಂಕರಃ ಶಿವವಾಕ್ಯಸಮೋ ನಾಸ್ತಿ ವೇದಶಾಸ್ತ್ರಾಗಮೇಷು ಚ ಎಂಬ ಮಹಾವಿಷ್ಣುವಿನ ಮಹಾಭಾಷ್ಯವ ಕೇಳರಿಯಿರೇ, ಓದಿದ ವೇದದ ಮಾತು ತಥ್ಯವೇ ? ಅಲ್ಲ. ನಿಮ್ಮಧಿದೇವತೆಯಾಗುತಂ ಇಹ ವಿಷ್ಣುವಿನ ಮಾತು ಮಿಥ್ಯವೆಂದರೆ ಬಿಡಿ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯನ ಜಾತನೆಂದಿಕ್ಕಿದೆ ಮುಂಡಿಗೆಯನಾರ್ಪವರೆತ್ತಿಕೊಳ್ಳಿರೆ.
--------------
ಉರಿಲಿಂಗಪೆದ್ದಿ
ಅಕಾರ ಉಕಾರ ಮಕಾರಂಗಳು ಪ್ರಕೃತಿಯಲ್ಲಿ ನಾದ ಬಿಂದು ಕಳೆಯಾದವು. ಅಕಾರ ನಾದ, ಉಕಾರ ಬಿಂದು, ಮಕಾರ ಕಳೆ. ಅಕಾರ ರುದ್ರ, ಉಕಾರ ಈಶ್ವರ, ಮಕಾರ ಸದಾಶಿವ. ಅಕಾರ ಉಕಾರ ಮಕಾರಂಗಳಿಗೆ ನಾದ ಬಿಂದು ಕಳೆಯೇ ಆಧಾರ. ನಾದ ಬಿಂದು ಕಳೆಗಳಿಗೆ ಪ್ರಕೃತಿಯೇ ಆಧಾರ. ಆ ಪ್ರಾಣಕ್ಕೆ ಲಿಂಗವೇ ಆಧಾರ. ಅ ಎಂಬಲ್ಲಿ ನಾದವಾಯಿತ್ತು. ಉ ಎಂಬಲ್ಲಿ ನಾದ ಉಳಿದಿತ್ತು. ಮ ಎಂಬಲ್ಲಿ ಬಿಂದು ಒಂದುಗೂಡಲು ಓಂಕಾರಶಕ್ತಿಯಾಗಿ ತೋರಿತ್ತು. ಆ ಓಂಕಾರಶಕ್ತಿಯಲ್ಲಿ ನಕಾರ ಮಕಾರ ಶಿಕಾರ ವಕಾರ ಯಕಾರಗಳೆಂಬ ಪಂಚಾಕ್ಷರಗಳುದಯಿಸಿದವು. ನಕಾರವೇ ಬ್ರಹ್ಮ, ಮಕಾರವೇ ವಿಷ್ಣು, ಶಿಕಾರವೇ ರುದ್ರ, ವಕಾರವೇ ಈಶ್ವರ, ಮಕಾರವೇ ಸದಾಶಿವ. ಈ ಪಂಚ ಶಾಖೆಗಳ ವಕಾರವೇ ದೇವನ ನೆತ್ತಿಯಲ್ಲಿ ಆ ಓಂಕಾರ ಶಕ್ತಿ ಸ್ವರೂಪಿಯಾಗಿ ಕಾಣಿಸಿತ್ತು. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಅರುಹೆಂಬ ಗುರುವಿನ ಕೈಯಲ್ಲಿ, ವಿರತಿಯೆಂಬ ಶಿವದಾರಮಂ ಕೊಟ್ಟು, ಸುಮತಿಯೆಂಬ ಸಜ್ಜೆಯಂ ಪವಣಿಸಿ, ಸಮತೆಯೆಂಬ ಲಿಂಗಸಾಹಿತ್ಯವ ಬಿಜಯಂಗೈಸಿಕೊಂಡು, ಸರ್ವಜೀವದಯಾಪರನೆಂದು ಲಿಂಗಾರ್ಚನೆಯಂ ಮಾಡುವ ಭಕ್ತನ ಕರಾಧಾರದ ಲಿಂಗವು ತಪ್ಪಿ ಆಧಾರಸ್ಥಾಪ್ಯವಾದಡೇನು ? ಶಂಕೆಗೊಳಲಿಲ್ಲ. ತೆಗೆದುಕೊಂಡು ಮಜ್ಜನಕ್ಕೆರೆವುದೇ ಸದಾಚಾರ. ಮುನ್ನ ಶ್ರೀಗುರು ಷಟ್‍ಸ್ಥಲವನು ಅಂತರಂಗದಲ್ಲಿ ನಿಕ್ಷೇಪಿಸಿದನಾಗಿ ದೃಶ್ಯಕ್ಕೆ ತ್ಯಾಗವಲ್ಲದೆ ಅದೃಶ್ಯಕ್ಕೆ ತ್ಯಾಗವುಂಟೆ ?ಇಲ್ಲ. ಉಂಟೆಂದನಾದಡೆ ಗುರುದ್ರೋಹ. ಆ ಭಕ್ತನಿಂತವನಂತನೆಂದು ದೂಷಿಸಿ ನುಡಿದವರಿಗೆ ಅಘೋರನರಕ ತಪ್ಪದಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ