ಅಥವಾ
(37) (13) (6) (1) (1) (0) (0) (0) (13) (3) (0) (2) (8) (0) ಅಂ (8) ಅಃ (8) (13) (0) (12) (1) (0) (0) (0) (16) (0) (0) (0) (0) (0) (0) (0) (7) (0) (7) (1) (15) (29) (0) (8) (9) (12) (1) (3) (0) (34) (17) (46) (0) (28) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ತಾನಾರೆಂದರಿವುದು ಭಕ್ತಿ. ಭಕ್ತಿಯೆಂಬುದು ಹಿಂದೋ ಮುಂದೋ? ಗುರುಲಿಂಗ ಜಂಗಮವೆಂದರಿಯದೆ ಮಾಡುವ ಭಕ್ತಿ ಅದೇ ಅನಾಚಾರ:ಅವರು ಪ್ರಸಾದಕ್ಕೆ ದೂರ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ, ನಿಮ್ಮ ಶರಣರಿಗಲ್ಲದಳವಡದು.
--------------
ಉರಿಲಿಂಗಪೆದ್ದಿ
ತನು ತನ್ನದಾದಡೆ, ದಾಸೋಹಕ್ಕೆ ಕೊರತೆಯಿಲ್ಲ, ದಾಸೋಹ ಸಂಪೂರ್ಣ, ದಾಸೋಹವೇ ಮುಕ್ತಿ. ಮನ ತನ್ನದಾದಡೆ, ಜ್ಞಾನಕ್ಕೆ ಕೊರತೆಯಿಲ್ಲ ಜ್ಞಾನ ಸಂಪೂರ್ಣ, ಆ ಜ್ಞಾನವೇ ಮುಕ್ತಿ. ಧನ ತನ್ನದಾದಡೆ, ಭಕ್ತಿಗೆ ಕೊರತೆಯಿಲ್ಲ. ಭಕ್ತಿ ಸಂಪೂರ್ಣ, ಭಕ್ತಿಯಲ್ಲಿ ಮುಕ್ತಿ. ತನುಮನಧನವೊಂದಾಗಿ ತನ್ನದಾದಡೆ ಗುರುಲಿಂಗಜಂಗಮವೊಂದೆಯಾಗಿ ತಾನಿಪ್ಪನು ಬೇರೆ ಮುಕ್ತಿ ಎಂತಪ್ಪುದಯ್ಯಾ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ತನ್ನ ತಾನರಿಹವೇ ಪರಮಾತ್ಮಯೋಗ, ತನ್ನ ತಾಮರಹವೇ ಮಾಯಾಸಂಬಂಧ. ಅಂತರಂಗ ಬಹಿರಂಗ ಪರಮಾಕಾಶಮಧ್ಯದಲ್ಲಿ ಪರಮಾತ್ಮನು ಪರಬ್ರಹ್ಮಸ್ವರೂಪನು, ನಿತ್ಯ, ನಿರಂಜನ, ಉಪಮಾತೀತ ನಿಷ್ಪತಿ, ಕೇವಲ ನಿಷ್ಕಲಸ್ವರೂಪನು. ಭ್ರೂಮಧ್ಯದಲ್ಲಿ ಪರಮಾತ್ಮನೇ ಅಂತರಾತ್ಮನೆನಿಸಿ ಸಕಲ ನಿಷ್ಕಲನಾಗಿಪ್ಪ. ಹೃದಯಸ್ಥಾನದಲ್ಲಿ ಆ ಪರಮಾತ್ಮನೇ ಜೀವಾತ್ಮನಾಗಿ ಕೇವಲ ಸಕಲನಾಗಿಪ್ಪ. ಬ್ರಹ್ಮರಂಧ್ರಸ್ಥಾನದಲ್ಲಿ ನಿಷ್ಕಳಗುರುಮೂತಿರ್ಲಿಂಗ ಭ್ರೂಮಧ್ಯದಲ್ಲಿ ಸಕಲನಿಷ್ಕಲ ಪರಂಜ್ಯೋತಿರ್ಲಿಂಗ ಹೃದಯಸ್ಥಾನದಲ್ಲಿ ಕೇವಲ ಸಕಲ ಜಂಗಮಲಿಂಗ ಇಂತು ಪರಮಾತ್ಮನೇ ಪರಬ್ರಹ್ಮ, ಪರಮಾತ್ಮನೇ ಅಂತರಾತ್ಮ, ಪರಮಾತ್ಮನೇ ಜೀವಾತ್ಮ. ಬಹಿರಂಗದಲ್ಲಿ ಪರಮಾತ್ಮನೇ ಗುರುಲಿಂಗ ಪರಮಾತ್ಮನೇ ಶಿವಲಿಂಗ ಪರಮಾತ್ಮನೇ ಜಂಗಮಲಿಂಗ. ಇಂತು, ಪರಮಾತ್ಮನೇ ಪರಬ್ರಹ್ಮ, ಪರಮಾತ್ಮನೇ ಸರ್ವಾತ್ಮ, ಪರಮಾತ್ಮನೇ ಸರ್ವಗತ, ಪರಮಾತ್ಮನೇ ಆತ್ಮಗತ. ಇದು ಕಾರಣ, ಪರಮಾತ್ಮನೇ ಅಂತರಂಗ, ಬಹಿರಂಗಭರಿತ ಪ್ರಾಣಲಿಂಗ. ಇಂತು ಅರಿವುದೇ ಪರಮಾತ್ಮಯೋಗ, ಮರವೇ ಮಾಯಾ ಸಂಗ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ತತ್ ಪದ ಲಿಂಗವೆಂದರುಹಿ ತ್ವಂ ಪದ ಅಂಗವೆಂದರುಹಿ ಅಸಿ ಪದ ಪ್ರಾಣವೆಂದರುಹಿ ಅಂಗವೇ ಲಿಂಗ, ಲಿಂಗವೇ ಪ್ರಾಣವೆಂದು ಶ್ರೀಗುರು ಇಷ್ಟಲಿಂಗವ ಕೊಟ್ಟು, ದೃಷ್ಟಲಿಂಗವ ತೋರಿದ ಬಳಿಕ ``ತತ್ತ್ವಮಸಿ ಪದ ನಿಮ್ಮ ಶರಣರು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ತೃಣಾದಿ ವಿಷ್ಣ್ವಂತ್ಯವಾಗಿ ಸರ್ವರ ಉತ್ಪತ್ತಿಸ್ಥಿತಿಲಯಂಗಳೂ ಶಿವಾಧೀನ. ಇದನರಿದು ಸುಖಿಯಾಗಿ, ಲಿಂಗವಂತನು ಲಿಂಗಾರ್ಚನೆಯ ಮಾಡಿ, ಪರಿಣಾಮಿಯಾದಡೆ ಇಹಪರಸಿದ್ಧಿ, ಸದ್ಯೋನ್ಮುಕ್ತನು. ಈ ವಿಚಾರಜ್ಞಾನವರಿಯದೆ ಮನಭ್ರಮಿಸಿ ಬಳಲಿದಡೆ ಕಾರ್ಯವಿಲ್ಲ. ಲಿಂಗವು ಮೆಚ್ಚನು, ಲಿಂಗವಂತರೆಂತೂ ಮೆಚ್ಚರು. ಇದನರಿದು, ಲಿಂಗವ ನಂಬಿ ಬದುಕಿರಯ್ಯಾ ಕೆಡಬೇಡ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ತಂದೆ-ತಾಯಿ ಸಂಯೋಗಸಂಭೂತನಲ್ಲದವನು, ಶ್ವೇತ, ಪೀತ, ಕಪೋತ, ಹರೀತ, ಕೃಷ್ಣ ಮಾಂಜಿಷ್ಟವೆಂಬ ಷಡುವರ್ಣರಹಿತನು, ಆದಿಮಧ್ಯಾವಸಾನಂಗಳಿಲ್ಲದ ಸ್ವತಂತ್ರಮಹಿಮನು, ವೇದವಿಂತುಂಟೆಂದು ರೂಹಿಸಬಾರದವನು, ನಾ ಬಲ್ಲೆನೆಂಬ ಹಿರಿಯರ ಒಗ್ಗೆಗೂ ಮಿಕ್ಕಿಪ್ಪ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ತಾನು ಸಾವ ಕನಸ ಕಂಡಡೆ ಎದ್ದು ಕುಳ್ಳಿರಿ ಎಂಬ ಲೋಕದ ನಾಣ್ನುಡಿ ದಿಟ ಲೇಸು. ಸಾಯಬಹುದೆ ಸತಿಯ ಬಿಟ್ಟು, ಸುತರ ಬಿಟ್ಟು, ಸಕಲಭೋಗಾಕ್ರೀಗಳಂ ಬಿಟ್ಟು? ಇನ್ನು ದಿಟ ದಿಟ ಕೃತಯುಗ ತ್ರೇತಾಯುಗ ದ್ವಾಪರಯುಗದಲ್ಲಿ ಹರಿಶ್ಚಂದ್ರ, ರಾಮ, ರಾವಣಾದಿಗಳು ಸತ್ತರು. ಕಲಿಯುಗದಲ್ಲಿ ಅನಂತರು ಸತ್ತರು. ನಿನ್ನ ಪಿತೃಪಿತಾಮಹರೂ ಸತ್ತರು. ನಿನ್ನ ಜೇಷ*ಕನಿಷ*ರುಗಳೂ ಸತ್ತರು ಕಾಣಾ. ಹೀಗೆ ಕಂಡು ಕೇಳಿಯೂ ಮರುಳು ಮಾನವಾ, ಸಾವು ದಿಟವೆಂದರಿ, ಸಂದೇಹ ಬೇಡ. ಸಾಯಲ್ಕೆ ಮುನ್ನ ಧನ ಕೆಡದ ಹಾಗೆ ಸತ್ಪಾತ್ರಕ್ಕೆ ಮಾಡಿ, ಮನ ಕೆಡದ ಹಾಗೆ ಶಿವನನ್ನೇ ಧ್ಯಾನಿಸಿ, ತನು ಕೆಡದ ಹಾಗೆ ಶಿವನನ್ನೇ ಪೂಜಿಸು. ಬಾಲಂ ವೃದ್ಧಂ ಮೃತಂ ದೃಷ್ಟ್ವಾ ಮೃತಂ ವಿಷ್ಣ್ವಾದಿದೈವತಂ ಅಹಂ ಮೃತೋ ನ ಸಂದೇಹೋ ಶೀಘ್ರಂ ತು ಶಿವಪೂಜನಂ ಎಂಬುದನರಿದು, ಮರೆಯಬೇಡ. ಹೆಣ್ಣ ನಚ್ಚಿ, ಅಶುಭವ ಮಚ್ಚಿ, ಮರೆಯಬೇಡ, ಅವಳು ನಿನ್ನ ನಂಬಳು. ನೀನು ತನು ಮನ ಧನವನಿತ್ತಡೆಯೂ ಪರಪುರುಷರ ನೆನೆವುದ ಮಾಣಳು. ಅದನು ನೀನೇ ಬಲ್ಲೆ. ಹೊನ್ನ ನಚ್ಚಿ ಕೆಡದಿರು ಸತಿಸುತದಾಯಾದ್ಯರಿಂದಂ ರಾಜಾದಿಗಳಿಂದಂ ಕೆಡುವುದು. ಅಲ್ಲಿ ನೀನು ಸುಯಿಧಾನದಿಂ ರಕ್ಷಿಸಲು ಧರ್ಮಹೀನನ ಸಾರೆ, ನಿಲ್ಲೆನೆಂದು ನೆಲದಲಡಗಿ ಹೋಗುತ್ತಲಿದೆ, ನೋಡ ನೋಡಲು, ಹೋಗದ ಮುನ್ನ ಅರಿವನೆ ಅರಿದು, ಮರೆವನೆ ಮರೆದು ಮಾಡಿರಯ್ಯಾ, ಶಿವಮಹೇಶ್ವರರಿಗೆ ತನು ಮನ ಧನವುಳ್ಳಲ್ಲಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ