ಅಥವಾ
(37) (14) (0) (3) (3) (2) (0) (0) (8) (1) (1) (4) (3) (0) ಅಂ (9) ಅಃ (9) (42) (0) (10) (1) (0) (0) (0) (10) (0) (0) (0) (0) (0) (0) (0) (13) (0) (3) (0) (16) (11) (0) (16) (8) (18) (0) (2) (0) (7) (9) (9) (0) (13) (12) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಹರತೇರು ಬಿತ್ತಿದ ಗಿಡವಿನ ಹೂವ್ವ ಕೊಯ್ದು ಊರೆಲ್ಲ ಕಟ್ಟಿದ ಕೆರೆ ನೀರ ತಂದು ನಾಡೆಲ್ಲ ನೋಡಿರಿಯೆಂದು ಪೂಜಿಸುವ ಪುಣ್ಯ ನೀರಿಗೊ ಹುವ್ವಿಗೊ ನಾಡೆಲ್ಲಕ್ಕೊ ಪೂಜಿಸಿದಾತಗೊ ಇದ ನಾನರಿಯೆ ನೀ ಹೇಳೆಂದಾತ ನಮ್ಮ ದಿಟ್ಟ ವೀರಾದ್ಥಿವೀರ ನಿಜ ಭಕ್ತ ಅಂಬಿಗರ ಚವುಡಯ್ಯನು
--------------
ಅಂಬಿಗರ ಚೌಡಯ್ಯ
ಹಸಿಯ ಸೊಪ್ಪು ಮುರಿದು ತರುವಾಗ ನೀವೇನು ಆಡಿನ ಮಕ್ಕಳೆ? ಹಸಿಯ ಸೊಪ್ಪು ತಂದು ಬಿಸಿ ಮಾಡಿ ಶಶಿಧರನೆಂಬ ಜಂಗಮಕ್ಕೆ ನೀಡಲು, ಆ ಲಿಂಗದ ಹಸಿವು ಹೋಯಿತ್ತೆಂದಾತ ನಮ್ಮಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹಾಡಿ ಹಾಡುವ ಹರಕೆಯ ಕೇಡು, ಕೂಡಿ ಮಾಡುವ ಕೂಡಿಕೆಯ ಕೇಡು, ಹಾಡಿ ಮಾಡಿ, ಕೂಡಿ ಮಾಡಿ ಬದುಕಿಗೆ ಕೇಡು ತಂದುಕೊಳ್ಳಲೇತಕೊ? ತನ್ನ ಬೇಡಲಿಕ್ಕೆ ಬಂದ ಜಂಗಮದ ಇರವನರಿತು, ನೀಡ ಕಲಿತರೆ ರೂಡ್ಥಿಯೊಳಗೆ ಆತನೆ ಜಾಣನೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹಿಂದಣ ಜನ್ಮದಲ್ಲಿ ಹಲು ಸುಕೃತಂಗಳಂ ಮಾಡಿಕೊಂಡ ದೆಸೆಯಿಂದ ನೀವು ಹುಟ್ಟಿದಿರಯ್ಯ. ನೀವು ಮುಂದಕ್ಕೆ ಶಿವಭಕ್ತಿ ದೊಡ್ಡಿತ್ತೆಂದು ನಂಬಲರಿಯದೆ ಭ್ರಮಿತರಾಗಿ ಘನತರಸುಖವಂ ನೀಗಿ ಭಕ್ತಿಪಾಶದೆಶೆಯೊಳು ಇರಲೊಲ್ಲದೆ ಹಿಂದಣ ಅರಿಕೆಯಂ ಮರೆದು ಮುಂದಣ ಅರಿಕೆಯಂ ತೊರೆದು ಕಂಡ ಕಂಡ ಹಂದಿಯೊಳಾಡಿ ನರಕವ ತಿಂಬಂತೆ ಬೆಂದ ಸಂಸಾರವೆಂಬ ಹೃದಯಕೂಪದೊಳು ಮುಳುಗಾಡುವ ಲೋಕದ ಮಂದಿಯಂತೆ ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದೆಂಬ ಭಿನ್ನಭಾವದೊಳು ಮನಸಂದು, ಹೆಂಡರಿಗಾಗಬೇಕು ಮಕ್ಕಳಿಗಾಗಬೇಕೆಂಬ ಭಂಡ ಮೂಕೊರೆಯ ಮೂಳಹೊಲೆಯರಿರಾ, ನೀವು ಕೇಳಿರೋ. ನೀವು ಶಿವಭಕ್ತರ ಬಸುರಲ್ಲಿ ಹುಟ್ಟಿ ಫಲವೇನು? ಮಾತಿಂಗೆ ಲಿಂಗವ ಕಟ್ಟಿದಿರಿ, ವರ್ತನೆಗೊಬ್ಬ ಗುರುವೆಂಬಿರಿ. ಆ ಗುರು ತೋರಿದ ಚರಲಿಂಗಕ್ಕೆ ಬೋನವಿಲ್ಲ, ಆಚಾರವಿಲ್ಲ. ಕೀಳು ದೈವದ ಬೆನ್ನೊಳು ಹರಿದಾಡುವ ನರಕಿಯ ಯಮನವರು ಕೊಂಡೊಯ್ದು ನಡುವಿಂಗೆ ಗಿರಿಕಿಯನಿಕ್ಕಿ ಮೆಟ್ಟಿ ಮೆಟ್ಟಿ ಬಿಗುವಾಗ ಹಲುಗಿರಿಕೊಂಡು ಹೋಗುವ ಮಾನವರು ಜಗದರಿಕೆಯಲ್ಲಿ, ನರಕದಲ್ಲಿ ಬೀಳುವದ ಕಂಡು ನಗುತಿರ್ದ ಎನ್ನೊಡೆಯನಂಬಿಗರ ಚೌಡಯ್ಯನು.
--------------
ಅಂಬಿಗರ ಚೌಡಯ್ಯ
ಹೊಲೆಯ ಹೊಲೆಯ ಎಂದಡೆ ಹೊಲೆಯರೆಂತಪ್ಪರಯ್ಯಾ? ಹೊಲೆಯ ಹೊರಕೇರಿಯಲ್ಲಿರುವನು, ಊರೊಳಗಿಲ್ಲವೆ ಅಯ್ಯಾ, ಹೊಲೆಯರು? ತಾಯಿಗೆ ಬೈದವನೇ ಹೊಲೆಯ, ತಂದೆಗೆ ಉತ್ತರ ಕೊಟ್ಟವನೆ ಹೊಲೆಯ, ತಂದೆಗೆ ಬೈದವನೇ ಹೊಲೆಯ, ಕೊಡುವ ದಾನಕ್ಕೆ ಅಡ್ಡ ಬಂದವನೆ ಹೊಲೆಯ, ನಡೆವ ದಾರಿಗೆ ಮುಳ್ಳ ಹಚ್ಚಿದವನೇ ಹೊಲೆಯ, ಬ್ರಾಹ್ಮಣನ ಕುತ್ತಿಗೆಯ ಕೊಯ್ದವನೇ ಹೊಲೆಯ, ಹತ್ತು ಆಡಿದರೆ ಒಂದು ನಿಜವಿಲ್ಲದವನೇ ಹೊಲೆಯ, ಚಿತ್ತದಲ್ಲಿ ಪರಸತಿಯ ಬಯಸಿದವನೇ ಹೊಲೆಯ, ಲಿಂಗಮುದ್ರೆಯ ಕಿತ್ತಿದವನೇ ಹೊಲೆಯ, ಲಿಂಗವ ಬಿಟ್ಟು ತಿರುಗುವವನೇ ಹೊಲೆಯ, ಧರ್ಮವ ಮಾಡದವನೇ ಹೊಲೆಯ, ಬಸವನ ಕೊಂದವನೇ ಹೊಲೆಯ, ಬಸವನ ಇರಿದವನೇ ಹೊಲೆಯ, ಲಿಂಗಪೂಜೆಯ ಮಾಡದವನೇ ಹೊಲೆಯ. ಇಂತಪ್ಪ ಹೊಲೆಯರು ಊರ ತುಂಬ ಇರಲಾಗಿ ಹೊರಕೇರಿಯವರಿಗೆ ಹೊಲೆಯರೆನಬಹುದೆರಿ ಹೊಲೆ ಹುಟ್ಟಿದ ಮೂರು ದಿನಕ್ಕೆ ಪಿಂಡಕ್ಕೆ ನೆಲೆಯಾಯಿತ್ತು, ಹಿಪ್ಪೆಯನುಂಡ ತೊಗಲು ಹರಿಗೋಲವಾಯಿತ್ತು. ಗುರುಗಳಿಗೆ ಚಮ್ಮಾವುಗೆಯಾಯಿತ್ತು ಹೂಡಲಿಕ್ಕೆ ಮಿಣಿಯಾಯಿತ್ತು. ಹೊಡೆಯಲಿಕ್ಕೆ ಬಾರುಕೋಲವಾಯಿತ್ತು. ಬಂಡಿಗೆ ಮಿಣಿಯಾಯಿತ್ತು. ಅರಸರಿಗೆ ಮೃದಂಗವಾಯಿತ್ತು. ತೋಲು ನಗಾರಿಯಾಯಿತ್ತು. ತುಪ್ಪ ತುಂಬಲಿಕ್ಕೆ ಸಿದ್ದಲಿಕೆ, ಎಣ್ಣೆ ತುಂಬಲಿಕೆ ಬುದ್ದಲಿಕೆನಯಾಯಿತ್ತುಫ. ಸಿದ್ದಲಿಕೇನ ತುಪ್ಪ, ಬುದ್ದಲಿಕೇನ ಎಣ್ಣೆ ಕಲ್ಲಿಶೆಟ್ಟಿ ಮಲ್ಲಿಶೆಟ್ಟಿಗಳು ಕೂಡಿ ನಾ ಶೀಲವಂತ ತಾ ಶೀಲವಂತ ಎಂದು ಶುದ್ದೈಸಿಕೊಂಡು ತಿಂದು ಬಂದು, ಜಗಳ ಬಂದಾಗ ನನ್ನ ಕುಲ ಹೆಚ್ಚು, ನಿನ್ನ ಕುಲ ಹೆಚ್ಚು ಕಡಿಮೆ ಎಂದು ಬಡಿದಾಡುವ ಕುನ್ನಿ ನಾಯಿಗಳ ಮೋರೆ ಮೋರೆಯ ಮೇಲೆ ನಮ್ಮ ಪಡಿಹಾರಿ ಉತ್ತಣ್ಣಗಳ ವಾಮಪಾದುಕೆಯ ಕೊಂಡು ಅವರ ಅಂಗುಳ ಮೆಟ್ಟಿ ಫಡಫಡನೆ ಹೊಡಿ ಎಂದಾತ ನಮ್ಮ ದಿಟ್ಟ ಅಂಬಿಗರ Zõ್ಞಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಹೇಳುವ ಕೇಳುವ ಮಾತ ಕೇಳಿ, ನಾನಯ್ಯನಾದೆನೆಂದು ಬೇಳುಗರೆಯಲೇತಕ್ಕೆ ? ವೇಣು ಚಂದನದ ಯೋಗದಲ್ಲಿದ್ದಡೆ ಗಂಧ ತಾನಾಗಬಲ್ಲುದೆ ? ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹರಿಗೆ ಚಕ್ರ ಡಾಣೆ, ಬ್ರಹ್ಮಂಗೆ ವೇದ ಪಾಶ, ಹಿರಿಯ ರುದ್ರಂಗೆ ಜಡೆ ಜಪಮಣಿ ನೋಡಾ. ಧರೆಯವರೆಲ್ಲಾ ನೆರೆದು ಇವರ ದೇವರೆಂಬರು. ಪರದೈವ ಬೇರೆಂದಾತನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹಿಡಿ ಪುಣ್ಯವ, ಬಿಡು ಪಾಪವ, ಸತ್ವ ರಜ ತಮ, ಒಡಲೈದು ಇಂದ್ರಿಯವ, ಏಳನೆಯ ಧಾತುವ, ಒಡಲಷ್ಟ ತನುವನು ಕೆಡೆ ಮೆಟ್ಟಿ ಶಿಖರದ ತುದಿಯ ಮೇಲೆರಿಸು, ಮತ್ತೆರಡಿಲ್ಲದೆ ನಡೆ, ಅಲ್ಲಿಂದ ಹಿಡಿದು ಲಂಘನೆ ಮಾಡೆ ಹಡೆವೆ ಮೋಕ್ಷವನೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹಿತ್ತಿಲ ಸೊಪ್ಪಿಂಗೆ ನೀರ ಹೊಯಿದು, ಮತ್ತೆ ಪುನರಪಿಯಾಗಿ ಕೊಯಿವವನಂತೆ, ಭಕ್ತರಿಗೆ ಬೋಧೆಯ ಹೇಳಿ ಚಿತ್ತವೃತ್ತಿಯನರಿದು ಬೇಡುವಂಗೆ ಇನ್ನೆತ್ತಣ ಮುಕ್ತಿಯೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹೂವ ಕೊಯ್ವ ಕುಕ್ಕೆ ಹರಿದು, ನೀರ ಹೊಯಿವ ಕುಡಿಕೆ ಒಡೆದು, ನೋಡುವ ಕಣ್ಣು ತೆರೆ ಗಟ್ಟಿ, ರಜ ತಾಗಿ ಸೈವೆರಗಾಗಿ ಲಿಂಗವನಾರೂ ಕಂಡುದಿಲ್ಲ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹೊಡವಡಲೇಕೆ, ಹಿಡಿದು ಪೂಜಿಸಲೇಕೆ, ಎಡೆಯಾಡಲೇಕೆ ದೇಗುಲಕ್ಕಯ್ಯಾ ? ಬಡವರಂಧಕರಿಂಗೆ ಒಡಲಿಗನ್ನವನಿಕ್ಕಿದಡೆ, ಹೊಡವಂಟನಾದ ಮೂರು ಲೋಕಕ್ಕೆ[ಯಿದೆ]. ಬಡವರಂಧಕರಿಗೆ ಒಡಲಿಗನ್ನವನಿಕ್ಕದಿದ್ದರೆ, ಹೊಡೆವಡಲಿಕೆ ಹುರುಳಿಲ್ಲವೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹೊಡವುಂಟು ದೇವರ ತಲೆಯ ತಾಟಿಸಿಕೊಂಬರು ನೆಲಕೆಯೂ ತಲೆಗೆಯೂ ನಂಟೊಳವೆ ? ಕೊಲಬೇಡ ಪ್ರಾಣಿಯ, ಗೆಲಬೇಡ ನಂಬಿದರ, ಛಲವ ಸಾಧಿಸಬೇಡ ಗೋತ್ರದಲ್ಲಿ. ಕೊಲುವವ ಗೆಲುವವ ಛಲವ ಸಾಧಿಸುವವ ಹೊಲೆಯ[ರು] ಮಾದಿಗರೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ