ಅಥವಾ
(17) (3) (0) (0) (3) (0) (0) (0) (7) (0) (0) (1) (0) (0) ಅಂ (4) ಅಃ (4) (4) (0) (2) (0) (0) (1) (0) (1) (0) (0) (0) (0) (0) (0) (0) (3) (0) (5) (0) (6) (2) (0) (4) (4) (5) (1) (1) (0) (3) (5) (9) (1) (4) (7) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಪರಶಿವನ ಚಿತ್ಕಲೆ ಜಗತ್ತಿನ ಶಿರೋಮಧ್ಯಕ್ಕೆ ಬಿಂಬಿಸಿ, ಅದಕ್ಕೆ ಚೈತನ್ಯಗೊಳಿಸಿದಲ್ಲಿ, ಅದೇ ಪರಮಾತ್ಮನಾಯಿತ್ತು. ಆ ಪರಮಾತ್ಮನೆ ಜಗತ್ತಿನ ಭ್ರೂಮಧ್ಯಕ್ಕೆ ಬಿಂಬಿಸಿದಲ್ಲಿ, ಅದೇ ಅಂತರಾತ್ಮನಾಯಿತ್ತು. ಆ ಅಂತರಾತ್ಮನೇ ಜಗತ್ತಿನ ಹೃದಯಕ್ಕೆ ಬಿಂಬಿಸಿದಲ್ಲಿ, ಅದೇ ಜೀವಾತ್ಮನಾಯಿತ್ತು. ಆ ಜೀವಾತ್ಮನೇ ಘಟ, ಅಂತಾರಾತ್ಮನೇ ಪ್ರಾಣ, ಪರಮಾತ್ಮನೇ ಸರ್ವಸಾಕ್ಷಿಕ. ಆ ಸಾಕ್ಷಿಕನೇ ವಸ್ತು, ಆ ಪರಸ್ತು. ಈ ಜೀವಾಂತರಾದಿಗಳೆಂಬ ಅಂಗಪ್ರಾಣಕ್ಕೆ ಪಂಚವಿಂಶತಿತತ್ವಂಗಳೆಂಬ ಪಾಶವಂ ತೊಡಿಸಿ, ಅಂತದನೇ ಪಶುವೆನಿಸಿ, ತಾನದಕ್ಕೆ ಪತಿಯಾಗಿ, ಅಲ್ಲಿ ನಾನಾ ವಿನೋದಂಗಳಂ ವಿನೋದಿಸಿತ್ತು. ಅದೆಂತೆಂದಡೆ : ವಿದ್ಯುದ್ರೂಪಮಿವಾಕಾಶೇ ಪ್ರತ್ಯಕ್ಷಂ ಸರ್ವತೋಮುಖ್ಯೆಃ | ಶಿವತತ್ತ್ವಮಿದಂ ಪ್ರೋಕ್ತಂ ಸರ್ವತತ್ತ್ವಾಲಯಂ ವಿದುಃ || ಜೀವಾಂತರಪರಾತ್ಮೇತಿ ತ್ರಿಭಿರ್ನಾಮಭಿರುಚ್ಯತೇ | ಆತ್ಮಸ್ವಜೀವ ಸಂಬಂಧಶ್ಚಾಂತರಃ ಪ್ರಾಣಸಂಯುತಃ || ಪರಮಾತ್ಮಾ ತತ್ತ್ವಸಂಯುಕ್ತಃ ಆತ್ಮತ್ರಯಮಿದಂ ಶೃಣು | ಎಂದುದಾಗಿ, ಬಸವಪ್ರಿಯ ಕೂಡಲಚೆನ್ನಸಂಗಯ್ಯನು ಇಂತೀ ಪರಿಯಲ್ಲಿ ಅಡಗಿರ್ದ, ಸರ್ವಜಗತ್ತನ್ನು.
--------------
ಸಂಗಮೇಶ್ವರದ ಅಪ್ಪಣ್ಣ
ಪರರಾಸೆಯೆಂಬ ಜ್ವರ ಹತ್ತಿತ್ತಾಗಿ, ಕಳವಳಿಸಿ, ನುಡಿವೆನಯ್ಯಾ. ಹೊನ್ನು ಹೆಣ್ಣು ಮಣ್ಣು ಬಯಸಿ, ವಿಕಳಗೊಂಡಂತೆ ಪ್ರಳಾಪಿಸಿ, ವಿಕಳಂಗೊಂಡು ನುಡಿಯುತ್ತಿರ್ಪೆನಯ್ಯಾ. ಈ ಕಳವಳವನಳಿದು, ಸಂಭಾಷೆಯನಿತ್ತು , ನಿಮ್ಮ ಕರುಣಾಮೃತವೆಂಬ ಕಷಾಯವನೆರದು, ಪರರಾಸೆಯೆಂಬ ಜ್ವರವ ಮಾಣಿಸು, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ