ಅಥವಾ
(2) (1) (3) (0) (0) (0) (0) (0) (3) (1) (0) (0) (0) (0) ಅಂ (1) ಅಃ (1) (0) (0) (1) (0) (0) (0) (0) (2) (0) (0) (0) (0) (0) (0) (0) (3) (0) (0) (1) (0) (0) (0) (3) (2) (2) (0) (0) (0) (2) (0) (3) (1) (3) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಎನ್ನ ತನು ಬಸವಣ್ಣನ ಆದಿಪ್ರಸಾದವ ಕೊಂಡಿತ್ತು. ಎನ್ನ ಮನ ಚನ್ನಬಸವಣ್ಣನ ನಿರ್ಮಲಪ್ರಸಾದವ ಕೊಂಡಿತ್ತು. ಎನ್ನ ಪ್ರಾಣ ಪ್ರಭುದೇವರ ಜ್ಞಾನಪ್ರಸಾದವ ಕೊಂಡಿತ್ತು. ಇಂತೆನ್ನ ತನುಮನಪ್ರಾಣಪ್ರಸಾದ ಎನ್ನ ಸರ್ವಾಂಗದಲ್ಲಿ ತುಂಬಿತ್ತು. ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ಶರಣರ ಪ್ರಸಾದವ ಕೊಂಡು ಬದುಕಿದೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಎನ್ನ ಜ್ಞಾನಾತ್ಮನ ಚೇತನನಯ್ಯ ಪ್ರಭುದೇವರು. ಎನ್ನ ಪರಮಾತ್ಮನ ಚೇತನನಯ್ಯ ಸಿದ್ಧರಾಮೇಶ್ವರದೇವರು. ಎನ್ನ ಚಿನ್ಮಯಾತ್ಮನ ಚೇತನನಯ್ಯ ಬಸವಣ್ಣನು. ಎನ್ನ ನಿರ್ಮಲಾತ್ಮನ ಚೇತನನಯ್ಯ ಷಟ್ಸ್ಥಲಬ್ರಹ್ಮಿ ಚೆನ್ನಬಸವಣ್ಣನು. ಎನ್ನ ಮಹಾತ್ಮನ ಚೇತನನಯ್ಯ ಸಂಗನಬಸವಣ್ಣನ ನಿಜಸುಖಿ ಅಪ್ಪಣ್ಣನು. ಎನ್ನ ಜೀವಾತ್ಮನ ಚೇತನನಯ್ಯ ಮಡಿವಾಳ ಮಾಚಯ್ಯನು. ಎನ್ನ ಅಂತರಾತ್ಮನ ಚೇತನನಯ್ಯ ಸೊಡ್ಡಳ ಬಾಚರಸರು. ಎನ್ನ ಅರಿವಿನ ಚೇತನಾತ್ಮಕನಯ್ಯ ಕಿನ್ನರ ಬೊಮ್ಮಯ್ಯನು. ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ಶರಣರ ಕರುಣವ ಪಡೆದೆನಾಗಿ, ಎನ್ನ ಕರ್ಮ ನಿರ್ಮೂಲವಾಯಿತ್ತಯ್ಯ, ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಎನಗೆ ಹರಿಯಿತ್ತು ತಮವೆಂಬ ಸಂಸಾರದ ಬಂಧನ. ಅಡಗಿಯೂ ಉಡುಗಿಯೂ ಕಂಡೆಹೆನೆಂದೆಂಬ ಸಂಶಯ. ಸಂಕಲ್ಪ ಸಂದೇಹ ಭ್ರಾಂತು ಭ್ರಮೆಯ ಭಾವಕ್ಕೆ ಬಯಲಾಯಿತ್ತು. ನಿತ್ಯನಿರಂಜನ ಪರಂಜ್ಯೋತಿ ಪ್ರಕಾಶವೆನಗೆ ತಲೆದೋರಿತ್ತು. ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನ ದೇವಯ್ಯಾ, ಕಾಣಬಂದಿತ್ತು ಕಾಣಾ, ಪ್ರಭುದೇವರ ಕಾರುಣ್ಯ ಪ್ರಸಾದದಿಂದ ಬಸವಣ್ಣ.
--------------
ಮರುಳಶಂಕರದೇವ