ಅಥವಾ
(2) (1) (3) (0) (0) (0) (0) (0) (3) (1) (0) (0) (0) (0) ಅಂ (1) ಅಃ (1) (0) (0) (1) (0) (0) (0) (0) (2) (0) (0) (0) (0) (0) (0) (0) (3) (0) (0) (1) (0) (0) (0) (3) (2) (2) (0) (0) (0) (2) (0) (3) (1) (3) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಬಸವಣ್ಣ ಚನಬಸವಣ್ಮ ಪ್ರಭುದೇವ ಮಡಿವಾಳ ಮಾಚಯ್ಯಾ ಸಿದ್ಧರಾಮಯ್ಯ ಸೊಡ್ಡಳ ಬಾಚರಸರು ಹಡಪದಪ್ಪಣ್ಣ ಪಡಿಹಾರಿ ಉತ್ತಣ್ಣ ಅವ್ವೆ ನಾಗಾಯಿ ಕೋಲಶಾಂತಯ್ಯ ಡೋಹರ ಕಕ್ಕಯ್ಯ ಮೊಗವಾಡದ ಕೇಶಿರಾಜದೇವರು ಖಂಡೆಯ ಬೊಮ್ಮಣ್ಣ ಮೊದಲಾದ ಅಸಂಖ್ಯಾತ ಮಹಾಪ್ರಮಥಗಣಂಗಳ ಪರಮಪ್ರಸಾದವ ಕೊಂಡು ಬದುಕಿದೆನಯ್ಯಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಬೆಟ್ಟವ ನೆಮ್ಮಿದಡೆ ಕಟ್ಟಿಗೆಯ ತಾಳುವದು, ಅದಾವ ಅಚ್ಚರಿ ಎನಿಸುವದು ? ಪ್ರಾಣಕ್ಕೆ ಹೊಣೆಯಾದಲ್ಲಿ ಕಾದುವದು, ಅದಾವ ಅಚ್ಚರಿ ಎಂದೆನಿಸುವದು ? ಪರಕಾಯವ ತೊಟ್ಟಿರ್ದಲ್ಲಿ ಅಚ್ಚರಿಗೆ ಅರಿಬಿರಿದೇಕೆ ? ನಿಮ್ಮುವ ಕಾರುಣ್ಯವನಾಗಿರ್ದಲ್ಲಿ ಎನಗೆಲ್ಲೆಲ್ಲಿ ಸುಖವಲ್ಲಲ್ಲಿಯೂ ನೀವೆ. ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುದೇವಯ್ಯಾ, ಪ್ರಭುದೇವರ ಕಾರುಣ್ಯ ಪ್ರಸಾದದಿಂದ ಆನು ಬದುಕಿದೆನು ಕಾಣಾ, ಸಂಗನಬಸವಣ್ಣ.
--------------
ಮರುಳಶಂಕರದೇವ
ಬೆರಸಲಿಲ್ಲದವನ ನೋಟ, ಲೇಸಿಲ್ಲದವನ ಮಾಟ, ಕಂಗಳ ಸೂತಕ ಹರಿಯದವನ ಅಂಗದ ಕೂಟ, ಅದೆಂದಿಗೆ ನಿಜವಪ್ಪುದು ? ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ಪ್ರಭುದೇವರ ನೀವೆ ಬಲ್ಲಿರಿ.
--------------
ಮರುಳಶಂಕರದೇವ