ಅಥವಾ
(2) (1) (3) (0) (0) (0) (0) (0) (3) (1) (0) (0) (0) (0) ಅಂ (1) ಅಃ (1) (0) (0) (1) (0) (0) (0) (0) (2) (0) (0) (0) (0) (0) (0) (0) (3) (0) (0) (1) (0) (0) (0) (3) (2) (2) (0) (0) (0) (2) (0) (3) (1) (3) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಲಿಂಗವಂತ ಲಿಂಗಭಕ್ತ ಲಿಂಗಾಚಾರಿಯೆನಿಸಿಕೊಂಡ ಬಳಿಕ, ಲಿಂಗದ ನಚ್ಚು, ಲಿಂಗದ ಮಚ್ಚು, ಲಿಂಗವೇ ಪ್ರಾಣವಾಗಿರಬೇಕಲ್ಲದೆ, ಮತ್ತೆ ತಪ್ಪಿ ನಡೆದು, ತಪ್ಪಿ ನುಡಿದು, ಪರಧನ ಪರಸ್ತ್ರೀಯರ ಸಂಗವ ಮಾಡಿ, ದುರ್ಗುಣ ದುರಾಚಾರದಲ್ಲಿ ನಡೆದು, ಮತ್ತೆ ತಾವು ಲಿಂಗವಂತರೆನಿಸಿಕೊಂಬ ಪರಿಯ ನೋಡಾ. ಇದು ಲಿಂಗದ ನಡೆಯಲ್ಲ, ಲಿಂಗದ ನುಡಿಯಲ್ಲ. ಇದ ನಮ್ಮ ಶಿವಶರಣರು ಮೆಚ್ಚರು. ಲಿಂಗವಂತನ ಪರಿ ಬೇರೆ ಕಾಣಿರೆ. ಲಿಂಗಕ್ಕೆ ಲಿಂಗವೆ ಪ್ರಾಣವಾಗಿರಲು ಬಲ್ಲ. ಲಿಂಗಕ್ಕೆ ಲಿಂಗವೆ ಭೋಗವಾಗಿರಲು ಬಲ್ಲ. ಲಿಂಗಕ್ಕೆ ಲಿಂಗವೆ ಸಂಗವಾಗಿ[ರಲು]ಬಲ್ಲ, ಇಂತಪ್ಪ ಲಿಂಗವಂತನ ಸದಾಚಾರಿಯೆಂಬೆನು. ಇಂತಪ್ಪ ಲಿಂಗವಂತನ ಸರ್ವಾಂಗಲಿಂಗಿಯೆಂಬೆನು. ಇಂತಪ್ಪ ಲಿಂಗವಂತನ ಸರ್ವಕರಣ ನಿರ್ಮುಕ್ತನ ಸರ್ವನಿರ್ವಾಣಿಕಾಯೆಂಬೆನು. ಇಂತಪ್ಪ ಮಹಾಮಹಿಮನ ನಿಲವು ಎಲಗಳೆದ ವೃಕ್ಷದಂತೆ, ಉಲುಹಡಗಿಪ್ಪ ಶರಣನ ಪರಿಯ ನೀವೇ ಬಲ್ಲಿರಲ್ಲದೆ, ಮತ್ತೆ ಉಳಿದಾದ ಅಜ್ಞಾನ ಸಂದೇಹಿಮಾನವರೆತ್ತ ಬಲ್ಲರಯ್ಯಾ. ಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ ನಿಮ್ಮ ಲಿಂಗಾವಧಾನಿಯ ಪರಿಯ ನೀವೇ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಲಿಂಗವಂತನ ನಿಲವು ಸಂಗಸೂತಕಿಯಲ್ಲ. ಕಂಗಳ ಕಳೆಯ ಬೆಳಗಳಿದು ಉಳಿದಾತ ಅಂಗಲಿಂಗೈಕ್ಯ ಕಾಣಾ, ಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ನಿಮ್ಮ ಲಿಂಗವಂತನ ನಿಲುವಿನ ಪರಿಯ ನೀವೆ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ