ಅಥವಾ
(19) (3) (1) (1) (3) (0) (0) (0) (0) (1) (1) (0) (0) (0) ಅಂ (10) ಅಃ (10) (19) (0) (9) (1) (0) (1) (0) (7) (0) (0) (0) (0) (0) (0) (0) (8) (0) (0) (3) (4) (11) (0) (4) (3) (9) (0) (3) (0) (1) (8) (2) (0) (6) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಧರೆ ಆಕಾಶವಿಲ್ಲದಿರೆ, ಆಡುವ ಘಟಪಟ, ಚರಸ್ಥಾವರ, ಆಡುವ ಚೇತನಾದಿಗಳಿರಬಲ್ಲವೆ ? ವಸ್ತುವಿನ ಸಾಕಾರವೆ ಭೂಮಿಯಾಗಿ, ಆ ವಸ್ತುವಿನ ಆಕಾಶವೆ ಶಲಾಕೆ ರೂಪಾಗಿ, ಸಂಘಟಿಸಲಾಗಿ ಜೀವಕಾಯವಾಯಿತ್ತು. ಇಂತೀ ರೂಪಿಂಗೆ ರೂಪುಪೂಜೆ, ಅರಿವಿಂಗೆ ಜ್ಞಾನಪೂಜೆ. ಉಭಯವು ನಿಂದಲ್ಲಿ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗ, ಏನೂ ಎನಲಿಲ್ಲ.
--------------
ಶಿವಲೆಂಕ ಮಂಚಣ್ಣ
ಧ್ಯಾನ ಧಾರಣ ಸಮಾಧಿ ಯೋಗಂಗಳಿಂದ ಕಾಬುದು ತನುಪ್ರಾಪ್ತಿ ಐಸೆ ? ಅದು ಸ್ಥೂಲ ಸೂಕ್ಷ್ಮ ಕಾರಣಕ್ಕೆ ಘಟಯೋಗಸಂಬಂಧ. ಅದು ಬ್ರಹ್ಮನ ಭಿತ್ತಿ, ವಿಷ್ಣುವಿನ ಆಗು, ರುದ್ರನ ಚೇಗೆ, ಅದು ಗುರು ಚರ ಪರಕ್ಕೆ ಕೊಟ್ಟ ಹಸಿಗೆ. ಸಾಕಾರದಲ್ಲಿ ಕಂಡು, ನಿರಾಕಾರದಲ್ಲಿ ಅರಿದು, ಬೆಳಗಿನ ಬಯಲಲ್ಲಿ ನಿರವಯಾಂಗನಾಗಿ ಇರಬೇಕು, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ಸ್ವಯಂಭುವನರಿವುದಕ್ಕೆ.
--------------
ಶಿವಲೆಂಕ ಮಂಚಣ್ಣ
ಧರೆಯ ಕೃಷಿ ಶುದ್ಧವಾಗಿಯಲ್ಲದೆ, ಸಸಿ ಶುದ್ಧವಿಲ್ಲ. ಅರ್ಚನೆ ಅರ್ಪಿತ ಮೂರ್ತಿಧ್ಯಾನದಿಂದಲ್ಲದೆ, ಚಿತ್ತ ಶುದ್ಧವಿಲ್ಲ. ಇದು ನಿಶ್ಚಯ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವನರಿವುದಕ್ಕೆ.
--------------
ಶಿವಲೆಂಕ ಮಂಚಣ್ಣ