ತ್ರಿದೋಷದ ಗುಣದಿಂದ ನಾನಾ ಬಹುತಾಪತ್ರಯದ
ವ್ಯಾದ್ಥಿಯ ಚಿಕಿತ್ಸೆಯನಾರು ಅರಿಯರಲ್ಲಾ !
ತನುವಿಂಗೆ ವಾತ, ಪೈತ್ಯ, ಶ್ಲೇಷ್ಮ , ಆತ್ಮಂಗೆ ಆಣವ, ಮಾಯಾ, ಕಾರ್ಮಿಕ.
ಇಂತೀ ತ್ರಿವಿಧ ಮಲತ್ರಯದ ರೋಗರುಜೆಯಡಸಿ,
ಬಂಧನದಲ್ಲಿ ಸಾವುತ್ತಿದೆ ಅಂಗ.
ಈ ರೋಗ ನಿರೋಗವಹುದಕ್ಕೆ ನಾ ಮೂರು ಬೇರ ತಂದೆ.
ಒಂದ ಅಂಗದಲ್ಲಿ ಮರ್ದಿಸಿ, ಒಂದು ಆತ್ಮನಲ್ಲಿ ಮಥನಿಸಿ,
ಒಂದ ಅರಿವಿನಲ್ಲಿ ಪಾನವ ಮಾಡಿ, ಈ ರೋಗ ಹರಿವುದು.
ಇದಕ್ಕನುಪಾನ ಇದಿರೆಡೆಯಿಲ್ಲ ,
ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗ ಸಾಕ್ಷಿಯಾಗಿ.