ಅಥವಾ
(3) (3) (2) (0) (0) (0) (0) (0) (0) (1) (1) (0) (0) (0) ಅಂ (1) ಅಃ (1) (3) (0) (4) (1) (0) (0) (0) (3) (0) (0) (0) (0) (0) (0) (0) (1) (0) (2) (0) (3) (17) (0) (2) (1) (1) (0) (1) (0) (1) (1) (2) (0) (5) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಆದಿಯಲ್ಲಿ ಪ್ರಣವಸ್ವರೂಪಮಾದ ಪರಮಾತ್ಮನು ಅಕಾರ ಉಕಾರ ಮಕಾರವೆಂಬ ಅಕ್ಷರತ್ರಯಸ್ವರೂಪಮಾಗಿ, ಅಕಾರವೇ ನಾದ, ಉಕಾರವೇ ಬಿಂದು, ಮಕಾರವೇ ಕಳೆ; ಬಿಂದುವೇ ಶರೀರಮಾಗಿ, ನಾದವೇ ಪ್ರಾಣಮಾಗಿ, ಕಳೆಯೇ ಮನಮಾಗಿ ; ಬಿಂದುಮಯವಾದ ಶರೀರದಲ್ಲಿ ರೂಪು ನಾದಮಯಮಾದ ಪ್ರಾಣದಲ್ಲಿ ನಾಮ ಕಳಾಮಯಮಾದ ಮನದಲ್ಲಿ ಕ್ರಿಯೆ ಇಂತು ನಾಮ-ರೂಪ-ಕ್ರಿಯಾಯುಕ್ತಮಾದ ಪುರುಷನ ಶರೀರದಲ್ಲಿ ಭಕ್ತಿ, ಪ್ರಾಣದಲ್ಲಿ ಜ್ಞಾನ, ಮನದಲ್ಲಿ ವೈರಾಗ್ಯ ನೆಲೆಗೊಂಡಲ್ಲಿ, ಬಿಂದುವಿನಲ್ಲಿ ಆಚಾರಲಿಂಗಸಂಬಂಧಮಾಯಿತ್ತು, ಕಳೆಯಲ್ಲಿ ಶಿವಲಿಂಗಸಂಬಂಧಮಾಯಿತ್ತು. ಆಚಾರದಿಂದ ಪೂತಮಾದ ಶರೀರವೇ ಜಂಗಮಲಿಂಗಮಾಯಿತ್ತು . ಗುರುಮಂತ್ರದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು. ಶಿವಧ್ಯಾನದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು . ಬಿಂದುವಿನಲ್ಲಿ ಕ್ರಿಯಾಶಕ್ತಿ ನೆಲೆಗೊಂಡಲ್ಲಿ, ಆ ಬಿಂದುವೇ ಆದಿಶಕ್ತಿಮಯಮಾಯಿತ್ತು. ನಾದದಲ್ಲಿ ಮಂತ್ರಶಕ್ತಿ ನೆಲೆಗೊಂಡಲ್ಲಿ, ಆ ನಾದವೇ ಪರಾಶಕ್ತಿಯಾಯಿತ್ತು. ಕಳೆಯಲ್ಲಿ ಇಚ್ಛಾಶಕ್ತಿ ನೆಲೆಗೊಂಡಲ್ಲಿ, ಆ ಕಳೆಯೇ ಜ್ಞಾನಶಕ್ತಿಯಾಯಿತ್ತು. ಇಂತು ಶರೀರಮೇ ಜಂಗಮದಿಂದ ಪವಿತ್ರಮಾಗಿ, ಪ್ರಾಣವು ಗುರುವಿನಿಂದ ಪವಿತ್ರಮಾಗಿ, ಮನವು ಲಿಂಗದಿಂದ ಪರಿಶುದ್ಧಮಾಗಿರ್ದ ಶಿವಶರಣನು ಇದ್ದುದೇ ಕೈಲಾಸ, ಅನುಭವಿಸಿದುದೆಲ್ಲಾ ಲಿಂಗಭೋಗ, ಐಕ್ಯವೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಆಧಾರದಲ್ಲಿ ಆಚಾರಲಿಂಗಕ್ಕೆ ಗೃಹಸ್ಥದಳವೇ ಸ್ಥಾನವು, ಸ್ವಾಧಿಷಾ*ನದಲ್ಲಿ ಗುರುಲಿಂಗಕ್ಕೆ ಅಧ್ಯಾಪನದಳವೇ ಸ್ಥಾನವು, ಮಣಿಪೂರಕದಲ್ಲಿ ಶಿವಲಿಂಗಕ್ಕೆ ನೇತ್ರದಳವೇ ಸ್ಥಾನವು. ಇದು ರೂಪನಿಷ*ಮಾಗಿರ್ಪುದರಿಂ ಅಂತಪ್ಪ ರೂಪವೇ ಸದ್ರೂಪಮಾದ ಶಕ್ತಿಯು, ಅಂತಪ್ಪ ಸದ್ರೂಪಸಂಸರ್ಗದಿಂ ತಮೋಮಧ್ಯದಲ್ಲಿದ್ದು ಗ್ರಹಿಸುವುದರಿಂ ನೇತ್ರಮಧ್ಯದಲ್ಲಿರ್ಪ ನೀಲಿಮಕ್ಕೆ ತಾರಕವೆಂದು ಹೆಸರು, ಅದೇ ಶಿವನಿರುವ ಸ್ಥಾನಮಾದುದರಿಂ ನೇತ್ರೇಂದ್ರಿಯವೇ ಪ್ರಧಾನಮಾಯಿತ್ತು. ಆ ಈಶ್ವರನ ನಿಜಸ್ಥಾನವೇ ತಾರಕವು. ಅನಾಹತದಲ್ಲಿ ಜಂಗಮಲಿಂಗಕ್ಕೆ ತನುದಳವೇ ಸ್ಥಾನವು, ವಿಶುದ್ಧದಲ್ಲಿ ಪ್ರಸಾದಲಿಂಗಕ್ಕೆ ಪ್ರಮಾಣದಳವೇ ಸ್ಥಾನವು, ಆಜ್ಞೇಯದಲ್ಲಿ ಮಹಾಲಿಂಗಕ್ಕೆ ಪ್ರಾಣದಳವೇ ಸ್ಥಾನವು. ಪ್ರಾಣದಲ್ಲಿ ಹಂಕಾರವೇ ಬೀಜವು, ಪ್ರಮಾಣದಲ್ಲಿ ಅಕಾರವೇ ಬೀಜವು, ತನುವಿನಲ್ಲಿ ಕಕಾರವೇ ಬೀಜವು, ನೇತ್ರದಲ್ಲಿ `ಣ'ಕಾರವೇ ಬೀಜವು, ಅಧ್ಯಾಪನದಲ್ಲಿ ಯಕಾರವೇ ಬೀಜವು, ಗೃಹಸ್ಥದಲ್ಲಿ ವಕಾರವೇ ಬೀಜವು. ವಿಶುದ್ಧಾಜ್ಞೇಯಗಳಲ್ಲಿರ್ಪ `ಅಹಂ'ಕಾರಗಳೇ ಕಾರಣ, ಅದು ವಿಪರೀತಿಸಿ ಅನಾಹತಮಣಿಪೂರಕಗಳಲ್ಲಿರ್ಪ `ಕಣ'ವೇ ಸೂಕ್ಷ್ಮ, ಸ್ವಾಧಿಷಾ*ನಾಧಾರಗಳಲ್ಲಿರ್ಪ `ಯಶ'ವೇ ಸ್ಥೂಲ. ಕಾರಣರೂಪಮಾದ `ಅಹಂ'ಕಾರವೇ ಜೀವನು, ಶೋಭನರೂಪಮಾಗಿ ಅವಧಿಯಿಲ್ಲದೆ ಗಮಿಸುತ್ತಿರ್ಪ `ಕಣ'ವೇ ಬಿಂದು, ಗೃಹಸ್ಥಸ್ಥಾನದಲ್ಲಿ ಆಚಾರಮುಖದಲ್ಲಿ ದೊಡ್ಡಿತ್ತಾಗಿಹುದೇ ಯಶ, ಮಹದ್ಬೀಜವೇ ಪ್ರಾಣ, ಅದಕ್ಕೆ ಪ್ರಾಣವೇ ತನು, ಆ ತನುವಿಗೆ ನೇತ್ರವೇ ಪ್ರಧಾನ, ಅದಕ್ಕುಪದೇಶವೇ ಪರಿಶುದ್ಧಿ, ಗೃಹಸ್ಥಧರ್ಮವೇ ಆ ಶರೀರಕ್ಕೆ ಪ್ರಕಾಶವು. ಅಹಂಕಾರರೂಪಮಾದ ಜೀವನಿಗೆ ಇಷ್ಟರೂಪಮಾದ `ಕ್ಷ' ಕಾರವೇ ಸಂಹಾರ, ಆ `ಹ'ಕಾರರೂಪಮಾದ ಪ್ರಾಣಕ್ಕೆ ವಿಸರ್ಗರೂಪಮಾದ ನಿಗ್ರಹಸ್ಥಾನವೇ ಸಂಹಾರ, `ಶ'ಕಾರರೂಪಮಾದ ತನುವಿಗೆ `ಠ'ಕಾರರೂಪಮಾದ ವ್ಯಯವೇ ಸಂಹಾರ, `ಣ'ಕಾರರೂಪಮಾದ ನೇತ್ರಕ್ಕೆ `ಪ'ಕಾರರೂಪಮಾದ ಗೋಪ್ಯವೇ ಸಂಹಾರ, `ಯ'ಕಾರರೂಪಮಾದ ಅಧ್ಯಾಪನೆಗೆ `ಲ'ಕಾರರೂಪಮಾದ ಪರಿಗ್ರಹವೇ ಸಂಹಾರ, `ಶ'ಕಾರರೂಪಮಾದ ಗೃಹಸ್ಥಕ್ಕೆ `ಸ'ಕಾರರೂಪಮಾದ ಸಂನ್ಯಾಸವೇ ಸಂಹಾರ. ಅಂತಪ್ಪ ಸಂನ್ಯಾಸವೇ ತೂರ್ಯ, ಅಂತಪ್ಪ ತೂರ್ಯದಲ್ಲಿ ಜೀವನ್ಮುಕ್ತಿಯಪ್ಪ ಸುಖವನೆನಗಿತ್ತು ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಆತ್ಮಾಂಶವೆ ಚೈತನ್ಯ ಅಂತಃಕರಣಾದಿ ಸಕಲ ಲೋಕದ್ವಿಕಾರ. ಆ ಚೈತನ್ಯದಿಂ ಶಕ್ತಿ ಪ್ರಕಟನಮಾದಂತೆ ಆತ್ಮನಿಂದಾಕಾಶ ಪ್ರಕಟನಮಪ್ಪುದು. ಆ ಶಕ್ತಿಯಿಂ ಕರ್ಮಮುತ್ಪನ್ನಮಪ್ಪಂತೆ ಆಕಾಶದಿಂ ವಾಯುವುತ್ಪನ್ನಮಪ್ಪುದು. ಆ ಕರ್ಮದಿಂ ಧರ್ಮ ಜನಿಸುವಂತೆ, ವಾಯುವಿಂದಗ್ನಿ ಜನಿಸುತ್ತಿಪ್ಪುದು. ಆ ಧರ್ಮದಿಂ ಫಲಮುದಿಸುವಂತೆ ಅಗ್ನಿಯಿಂ ಜಲಮುದಿಸುತ್ತಿಪ್ಪುದು. ಆ ಫಲದಿಂದನುಭವ ಪ್ರತ್ಯಕ್ಷಮಾದಂತೆ ಜಲದಿಂ ಪೃಥ್ವಿ ಪ್ರತ್ಯಕ್ಷಮಪ್ಪುದು. ಆ ಅನುಭವದಲ್ಲಿ ಸುಖದುಃಖಂಗಳುದ್ಭವಿಸುವಂತೆ ಪೃಥ್ವಿಯಲ್ಲಿ ಸ್ಥಾವರ ಜಂಗಮಂಗಳುದ್ಭವಿಸುವವು. ಆ ಸುಖದುಃಖಂಗಳಲ್ಲಿ ಸ್ವರ್ಗ ನರಕಂಗಳುತ್ಪನ್ನಮಪ್ಪಂತೆ ಆ ಸ್ಥಾವರ ಜಂಗಮಂಗಳಲ್ಲಿ ಆಹಾರ ಮೈಥುನಂಗಳುತ್ಪನ್ನಮಪ್ಪವು. ಅವೇ ಆವಾಹನ ವಿಸರ್ಜನ. ಅಂತಪ್ಪ ಆವಾಹನ ವಿಸರ್ಜನೆಯೇ ಹಂಸರೂಪಮಾದ ಚೈತನ್ಯ. ಅಂತಪ್ಪ ಚೈತನ್ಯರೂಪವಾದ ಶಿವನು ಸ್ವಶಕ್ತಿ ಪ್ರಕಟನ ನಿಮಿತ್ಯ ಆಹಾರಮುಖಕ್ಕೆ ಪ್ರಪಂಚವ ಸಂವಹರಿಸುತ್ತಿರ್ಪಂತೆ, ಆಕಾಶ ಪ್ರಕಟನ ನಿಮಿತ್ಯ ಆತ್ಮನು ಪ್ರಪಂಚವ ಸಂಹರಿಸುತ್ತಿರ್ಪನು. ಜೀವನು ಸ್ವಧರ್ಮವನಾಶ್ರಯಿಸಿ ತೊಳಲುತ್ತಿರ್ಪಂತೆ ಆತ್ಮನು ತೇಜೋಧರ್ಮವನಾಶ್ರಯಿಸಿ ವ್ಯವಹರಿಸುತ್ತಿರ್ಪನು. ಆ ಧರ್ಮಪದ ವಿಕ್ಷೇಪಣೆಯೇ ಕಾಲ, ಆ ಕಾಲವೇ ಸಂಹಾರ ಹೇತು. ಅಂತಪ್ಪ ಧರ್ಮವೇ ಬಸವ ನಾಮಾಂಕಿತಮುಳ್ಳ ಮಹಾಗುರು. ಅಂತಪ್ಪ ಮಹಾಗುರುವಿನ ಪಾದವಿಡಿದು ಸೃಷ್ಟಿ ರಜೋರೂಪಮಾಗಿರ್ಪ ಲಲಾಟಬೀಜಾಕ್ಷರಂಗಳನೊರಸಿ ಕೆಡಿಸಿ ಆ ಪಾದವ ನನ್ನ ಹೃದಯದಲ್ಲಿ ಬರೆದು ಪಟಲಮಾಡಿದಲ್ಲಿ ಆ ಕಾಲವಳಿದು ಕಾಲಾತೀತನಪ್ಪುದೆ ನಿಜ. ಅಂತಪ್ಪ ಸುಖವನೆನಗಿತ್ತು ಸಲಹಾ ಮಹಾಘನ ದೊಡ್ಡದೇಶಿಕಾರ್ಯ ಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ