ಇಷ್ಟಲಿಂಗ ಭಿನ್ನವಾಗಲೊಡನೆ ತೆತ್ತಿಗರ ಕಂಡಲ್ಲಿ ವಸ್ತುವ ಬಿಡುವುದು.
ತೆತ್ತಿಗರ ಕಾಣದಿರ್ದಡೆ ನೀರು ನೇಣು ವಿಷ ಔಷಧಂಗಳಲ್ಲಿ
ವಸ್ತುವಿನೊಡನೆ ವಸ್ತುವ ಬಿಡಬೇಕು, ಇದಕ್ಕೆ ಸಂದೇಹವಿಲ್ಲ.
ಆವಾವ ಪ್ರಕಾರದಲ್ಲಿ ಹೋದಡೂ ಸಂದೇಹವಿಲ್ಲ ಲಿಂಗೈಕ್ಯಂಗೆ.
ಅಮುಗೇಶ್ವರಲಿಂಗವೆ, ನಿಮ್ಮ ಶರಣರು ಈರೇಳುಭುವನ ಹದಿನಾಲ್ಕುಲೋಕದಲ್ಲಿ
ಲಿಂಗಸಹಿತ ಒಪ್ಪುವರು.