ಅಥವಾ
(13) (3) (3) (0) (5) (0) (0) (0) (4) (0) (0) (2) (0) (0) ಅಂ (4) ಅಃ (4) (20) (0) (5) (0) (0) (2) (0) (1) (0) (0) (0) (0) (0) (0) (0) (3) (0) (2) (1) (12) (2) (0) (4) (2) (12) (0) (0) (0) (0) (6) (2) (0) (9) (4) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಗರುಡಿಯಲ್ಲಿ ಕೋಲಲ್ಲದೆ ಕಾಳಗದಲ್ಲಿ ಕೋಲುಂಟೆ ? ಭವಿಗೆ ಮೇಲುವ್ರತ ಪುನರ್ದೀಕ್ಷೆಯಲ್ಲದೆ ಭಕ್ತಂಗುಂಟೆ ? ವ್ರತ ತಪ್ಪಲು ಶರೀರವಿಡಿವ ನರಕಿಗೆ ಮುಕ್ತಿಯಿಲ್ಲ ಅಮುಗೇಶ್ವರಲಿಂಗದಲ್ಲಿ.
--------------
ಅಮುಗೆ ರಾಯಮ್ಮ
ಗರುಡಿಯಲ್ಲಿ ಸಾಮುವ ಮಾಡುವರಲ್ಲದೆ, ಕಾಳಗದಲ್ಲಿ ಸಾಮುವ ಮಾಡುವರೆ ? ಆದ್ಯರ ವಚನಂಗಳ, ಅರಿವುಸಂಬಂಧಿಗಳಲ್ಲಿ ಅರಿದಬಳಿಕ ಬಿಡಬೇಕು. ಅವರು ಕಡುಗಲಿಗಳಾಗಿ ಆಚರಿಸುವ ನಿಜವಿರಕ್ತರ ಎನಗೊಮ್ಮೆ ತೋರಾ ಅಮುಗೇಶ್ವರಾ.
--------------
ಅಮುಗೆ ರಾಯಮ್ಮ
ಗಡ್ಡ ಮಂಡೆಯ ಬೋಳಿಸಿಕೊಂಡವರೆಲ್ಲ ಕಬ್ಬಲಿಗರಮಕ್ಕಳೆಂಬೆ. ಬತ್ತಲೆ ಇಪ್ಪವರೆಲ್ಲ ಕುಂಚಿಗನ ಮಕ್ಕಳೆಂಬೆ. ಪಟ್ಟಣಕ್ಕೆ ಹೋಗಿ ಹೆಸರ ಹೇಳುವ ಜಾತಿಕಾರನಂತೆ ಅರ್ಥ ಅನುಭಾವವ ಬಲ್ಲೆನೆಂದು ಅಗಮ್ಯವ ಬೀರುವ ಅಫ್ಸೋರಿಗಳ ವಿರಕ್ತರೆನ್ನಬಹುದೆ? ಎನಲಾಗದು. ವಚನದ ರಚನೆಯ ಅರಿದೆನೆಂಬ ಅಹಂಕಾರವ ಮುಂದುಗೊಂಡು ತಿರುಗುವ ಆತ್ಮತೇಜದ ಘಾತಕರ ವಿರಕ್ತರೆನಲಾಗದಯ್ಯಾ. ವಿರಕ್ತನ ಪರಿಯ ಹೇಳಿಹೆನು ಕೇಳಿರಣ್ಣಾ ; ವಾಯು ಬೀಸದ ಉದಕದಂತಿರಬೇಕು; ಅಂಬುಧಿಯೊಳಗೆ ಕುಂಭ ಮುಳುಗಿದಂತಿರಬೇಕು; ದರಿದ್ರಗೆ ನಿಧಾನಸೇರಿದಂತಿರಬೇಕು; ರೂಹಿಲ್ಲದ ಮರುತನಂತಿರಬೇಕು; ಹಿಂಡನಗಲಿದ ಮದಗಜ ಹಿಂಡಸೇರಿದಂತಿರಬೇಕು; ಸಂದೇಹ ಸಂಕಲ್ಪ ಮುಂದುಗೊಳ್ಳದೆ ಇರಬೇಕು. ಅಂಗಲಿಂಗಿಗಳಲ್ಲಿ ಲಿಂಗಾರ್ಪಿತಕ್ಕೆ ಹೋಗಿ ಬಂದುದನತಿಗಳೆಯದಿದ್ದಡೆ ವಿರಕ್ತರೆಂಬೆನು. ರೋಗರುಜಿನಂಗಳು ಬಂದಲ್ಲಿ ಕಿಂಕಿಲನಾಗದೆ ಇರಬಲ್ಲಡೆ ಅಮುಗೇಶ್ವರಲಿಂಗವೆಂಬೆನು.
--------------
ಅಮುಗೆ ರಾಯಮ್ಮ
ಗುರುವಿನಡಿಗೆರಗೆನೆಂಬ ಭಾಷೆ ರಿನಗೆ. ಲಿಂಗವ ಪೂಜಿಸಿ ವರವ ಬೇಡೆನೆಂಬ ಭಾಷೆ ಎನಗೆ. ಜಡೆಮುಡಿಯುಳ್ಳ ನಿಜಜಂಗಮವ ಕಂಡು ಅಡಿಗೆರಗದ ಭಾಷೆ ಎನಗೆ. ಹಿಡಿದ ಛಲವ ಬಿಡದೆ ನಡೆಸಿ ಮೃಡನ ಪಡೆದೆಹೆನೆಂಬ ಭಾಷೆ ಎನಗೆ. ಕಡುಗಲಿಯಾಗಿ ಆಚರಿಸಿ ಜಡಿದೆನು ಅಜ್ಞಾನಿಗಳ ಬಾಯ ಕೆರಹಿನಲ್ಲಿ. ಮಾತಿನಲ್ಲಿ ವೇಷಧಾರಿಗಳು ಮೃಡನ ಅರಿದೆಹೆನೆಂದು ಗಳಹುತಿಪ್ಪರೆ, ಕೆರಹಿನಟ್ಟೆಯಲ್ಲಿ ಹೊಯ್ಯದೆ ಮಾಣ್ಬನೆ ಅರಿವುಳ್ಳ ಘನಮಹಿಮನು ¯ ಅಮುಗೇಶ್ವರನೆಂಬ ಲಿಂಗವ ಅರಿದಿಪ್ಪ ಮಹಾಘನಮಹಿಮನ ನಾನೇನೆಂಬೆನಯ್ಯಾ ?
--------------
ಅಮುಗೆ ರಾಯಮ್ಮ
ಗುರುವೆಂಬೆನೆ, ಗುರುವು ನರನು; ಲಿಂಗವೆಂಬೆನೆ, ಲಿಂಗವು ಕಲ್ಲು; ಜಂಗಮವೆಂಬೆನೆ, ಜಂಗಮವು ಆತ್ಮನು; ಪಾದೋದಕವೆಂಬೆನೆ, ಪಾದೋದಕ ನೀರು; ಪ್ರಸಾದವೆಂಬೆನೆ, ಪ್ರಸಾದ ಓಗರ. ಇಂತೆಂದುದಾಗಿ, ಹೊನ್ನು ಹೆಣ್ಣು ಮಣ್ಣು ಈ ತ್ರಿವಿಧವ ಹಿಡಿದ ಕಾರಣ, ಗುರುವೆಂಬವನು ನರನು. ಅಷ್ಟವಿಧಾರ್ಚವೆ ಷೋಡಶೋಪಚಾರಕ್ಕೆ ಒಳಗಾದ ಕಾರಣ, ಲಿಂಗವೆಂಬುದು ಕಲ್ಲು. ಆಶೆಪಾಶೆಗೆ ಒಳಗಾದ ಕಾರಣ, ಜಂಗಮವೆಂಬುದು ಆತ್ಮನು. ಲಾಂಛನಿಗಳೆಂದು ಕಾಂಚನಕ್ಕೆ ಕೈಯಾನುವರಲ್ಲಿ ಪಾದೋದಕ ಪ್ರಸಾದವೆಂದು ಕೊಂಡೆನಾದಡೆ ಕೆಸರಿನೊಳಗೆ ಬಿದ್ದ ಪಶುವಿನಂತೆ ಆಯಿತ್ತು ಕಾಣಾ ಅಮುಗೇಶ್ವರಾ.
--------------
ಅಮುಗೆ ರಾಯಮ್ಮ