ಅಂಬುಧಿಯಲ್ಲಿ ಅಂಬಿಗ ಮನೆಯ ಮಾಡಿ,
ಕುಂಭಿನಿಯಲ್ಲಿ ಇರಲೊಲ್ಲದೆ,
ಹರುಗೋಲ ಬೆಂಬಳಿಯಲ್ಲಿ ಬದುಕಿಹೆನೆಂದು [ಹೋದಡೆ]
ಹರುಗೋಲು ತುಂಬಿ, ಮಂದಿ ಸಂದಣಿಸಿತ್ತು.
[ಗ]ಣಿಯ ಹಿಡಿದು ಒತ್ತುವುದಕ್ಕೆ ಠಾವಿಲ್ಲದೆ, ಅಂಬಿಗ ಹಿಂಗಿದ.
ಹೆರೆಸಾರಿ ಹರುಗೋಲು ಅಂಬುಧಿಯಲ್ಲಿ ಮುಳುಗಿತ್ತು,
ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗವನರಿಯದೆ.