ಅಥವಾ
(6) (2) (0) (0) (1) (0) (0) (0) (1) (1) (0) (0) (0) (0) ಅಂ (2) ಅಃ (2) (3) (0) (1) (1) (0) (0) (0) (2) (0) (0) (0) (0) (0) (0) (0) (4) (0) (1) (0) (5) (0) (0) (0) (0) (0) (0) (1) (0) (0) (1) (0) (0) (6) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಲರೊಳಡಗಿದ ಪರಿಮಳದಂತೆ, ಪತಂಗದೊಳಡಗಿದ ಅನಲನಂತೆ, ಶಶಿಯೊಳಡಗಿದ ಷೋಡಶಕಳೆಯಂತೆ, ಉಲುಹಡಗಿದ ವಾಯುವಿನಂತೆ, ಸಿಡಿಲೊಳಡಗಿದ ಗಾತ್ರದ ತೇಜದಂತೆ ಇರಬೇಕಯ್ಯಾ ಯೋಗ, ಎನ್ನ ಅಜಗಣ್ಣತಂದೆಯಂತೆ.
--------------
ಮುಕ್ತಾಯಕ್ಕ
ಅಂಧಕನ ಕೈಯ ಅಂಧಕ ಹಿಡಿದಂತಿರಬೇಕು. ಮೂಗನ ಕೈಯಲ್ಲಿ ಕಾವ್ಯವ ಕೇಳಿದಂತಿರಬೇಕು. ದರ್ಪಣದೊಳಗಣ ಪ್ರತಿಬಿಂಬದಂತೆ ಹಿಡಿವರಿಗಳವಲ್ಲದಿರಬೇಕು ಅಣ್ಣಾ. ಕೂರ್ಮನ ಶಿಶುವಿನ ಸ್ನೇಹದಂತೆ ಇರಲೊಲ್ಲದೆ ಆರೂಢಗೆಟ್ಟೆಯೊ ಅಜಗಣ್ಣಾ.
--------------
ಮುಕ್ತಾಯಕ್ಕ
ಅಂಬರದಲಾಡುವ ತುಂಬಿಯ ಬಿಂಬದ ಕಂಬನಿಯೊಳಗಣ ರತ್ನದ ಬಯಕೆಯಾದ್ಯಂತವನೇನೆಂಬೆನಯ್ಯಾ ? ವೇದ ಶಾಸ್ತ್ರ ಶ್ರುತಿ ಸ್ಮೃತಿಗಳು ಸ್ತುತಿಸಲರಿಯವು. ನಾದವಲ್ಲ, ಸುನಾದದ ನಿಲವಲ್ಲ ಭೇದಿಸುವಡೆ ಅಗಮ್ಯ ನೋಡಾ ! ಸೊಲ್ಲಿಲ್ಲದ ಸೊಮ್ಮಿಲ್ಲದ ಘನವನೇನೆಂಬೆನು ? ಎಂತು ಮರೆವೆನಯ್ಯಾ ಎನ್ನ ಅಜಗಣ್ಣ ತಂದೆಯನು ?
--------------
ಮುಕ್ತಾಯಕ್ಕ
ಅದ್ವೈತವ ನೆಲೆಗೊಳಿಸಿ ಎರಡಳಿದೆನೆಂಬವರು ಶಿಶುಕಂಡ ಕನಸಿನಂತಿರಬೇಕಲ್ಲದೆ, ನುಡಿದು ಹೇಳುವನ್ನಕ್ಕರ ಭಿನ್ನವಲ್ಲದೇನು ಹೇಳಾ ? ಅರಿವರತು ಮರಹು ನಷ್ಟವಾಗಿ ಗುರುವ ತೋರಿದೆನೆಂಬರು. ಇದಿರಿಂಗೆ ಕರುಳಕಲೆಯನರುಹುವ ಪರಿಯೆಂತು ಹೇಳಾ ? ಮನದ ಕೊನೆಯ ಮೊನೆಯ ಮೇಲಣ ಅರಿವಿನ ಕಣ್ಣಮುಂದೆ ಸ್ವಯಂಪ್ರಕಾಶ ತೋರುತ್ತಿದ್ದಡೆ ತಾನಾಗಬಲ್ಲನೆ ? ನೆರೆಯರಿತು ಮರೆಯಬಲ್ಲಡೆ ಎನ್ನ ಅಜಗಣ್ಣನಂತೆ ಶಬ್ದಮುಗ್ಭನಾಗಿರಬೇಕಲ್ಲದೆ, ಶಬ್ದಸಂದಣಿಯ ಮಾತು ಸಯವಲ್ಲ ನೋಡಯ್ಯಾ.
--------------
ಮುಕ್ತಾಯಕ್ಕ
ಅಹುದಹುದು ಶಿವಶರಣರ ಮಹಿಮೆ ಆರಿಗೆಯೂ ಕಾಣಬಾರದು. ಕಬ್ಬುನ ಉಂಡ ನೀರಿನಂತೆ, ಕಬ್ಬಿಸಿಲುಂಡ ಅರಿಸಿನದಂತೆ, ಉರಿಯೊಳಡಗಿದ ಕರ್ಪುರದಂತೆ, ಬಯಲನಪ್ಪಿದ ವಾಯುವಿನಂತೆ ಇಪ್ಪ ನಿಲವು ನುಡಿದು ಹೇಳಿಹೆನೆಂಬ ಮಾತಿಂಗೆ ಅಳವಡುವುದೆ ? ಅರಿವಡೆ ಮತಿಯಿಲ್ಲ, ನೆನೆವಡೆ ಮನವಿಲ್ಲ ಎನ್ನ ಅಜಗಣ್ಣ ತಂದೆಯನೊಳಕೊಂಡಿಪ್ಪ ನಿಮ್ಮ ಮಹಿಮೆಗೆ ನಮೋ ನಮೋ ಎನುತಿರ್ದೆನು.
--------------
ಮುಕ್ತಾಯಕ್ಕ
ಅರಿವನಣಲೊಳಗಿಕ್ಕಿ ಅಗಿವುತ್ತಿದೆ ಮರ್ತ್ಯಲೋಕವೆಲ್ಲವು. ಅರಿವು ಉಳಿಯಲರಿಯದೆ ಕೆಟ್ಟಿತ್ತು ಲೋಕವೆಲ್ಲವು. ನಾನೆಂತು ಬದುಕುವೆನಣ್ಣಾ ? ಕತ್ತಲೆ ಬೆಳಗ ಕಾಂಬ ಸಂದೇಹಿ ನಾನೊಬ್ಬಳು. ಎನ್ನ ಕಣ್ಣ ಕಟ್ಟಿ ಕನ್ನಡಿಯ ತೋರಿತ್ತೊ ಅಜಗಣ್ಣಾ ನಿನ್ನ ಯೋಗ !
--------------
ಮುಕ್ತಾಯಕ್ಕ