ಅಥವಾ
(6) (2) (0) (0) (1) (0) (0) (0) (1) (1) (0) (0) (0) (0) ಅಂ (2) ಅಃ (2) (3) (0) (1) (1) (0) (0) (0) (2) (0) (0) (0) (0) (0) (0) (0) (4) (0) (1) (0) (5) (0) (0) (0) (0) (0) (0) (1) (0) (0) (1) (0) (0) (6) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಆರೆಂದು ಕುರುಹ ಬೆಸಗೊಳಲು, ಏನೆಂದು ಹೇಳುವೆನಯ್ಯಾ ? ಕಾಯದೊಳಗೆ ಮಾಯವಿಲ್ಲ; ಭಾವದೊಳಗೆ ಭ್ರಮೆಯಿಲ್ಲ. ಕರೆದು ಬೆಸಗೊಂಬಡೆ ಕುರುಹಿಲ್ಲ. ಒಬ್ಬರಿಗೂ ಹುಟ್ಟದೆ, ಅಯೋನಿಯಲ್ಲಿ ಬಂದು ನಿರ್ಬುದ್ಧಿಯಾದವಳನೇನೆಂಬೆನಣ್ಣಾ ? ತಲೆಯಳಿದು ನೆಲೆಗೆಟ್ಟು ಬೆಳಗುವ ಜ್ಯೋತಿ ಎನ್ನ ಅಜಗಣ್ಣತಂದೆಯ ಬೆನ್ನಬಳಿಯವಳಾನಯ್ಯಾ.
--------------
ಮುಕ್ತಾಯಕ್ಕ
ಆರೂ ಇಲ್ಲದವಳೆಂದು ಆಳಿಗೊಳಲುಬೇಡ; ಆಳಿಗೊಂಡಡೆ ಆನು ಅಂಜುವಳಲ್ಲ. ಒಲವಿನ ಒತ್ತೆಕಲ್ಲನು ಬೆವರಿಸಬಲ್ಲೆ ಕಾಣಿರೊ ! ಅಪ್ಪಿದವರನಪ್ಪಿದಡೆ ತರಗೆಲೆಯಂತೆ ರಸವನರಸಿದಡುಂಟೆ ಅಜಗಣ್ಣತಂದೆ ?
--------------
ಮುಕ್ತಾಯಕ್ಕ